Select Your Language

Notifications

webdunia
webdunia
webdunia
webdunia

ಅಂಜನಾದ್ರಿ ಅಭಿವೃದ್ಧಿಗೆ ಸಿಎಂ ಸಿದ್ದರಾಮಯ್ಯ ಸಭೆಯಲ್ಲಿ ಮಹತ್ವದ ತೀರ್ಮಾನ

Siddaramaiah

Krishnaveni K

ಬೆಂಗಳೂರು , ಬುಧವಾರ, 3 ಸೆಪ್ಟಂಬರ್ 2025 (16:47 IST)

ಅಂಜನಾದ್ರಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಇಂದು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಾವೇರಿ ನಿವಾಸದಲ್ಲಿ ನಡೆದ ಸಭೆ ನಡೆಯಿತು. ಈ ವೇಳೆ ಅಂಜನಾದ್ರಿ ಕ್ಷೇತ್ರದ ಅಭಿವೃದ್ಧಿಗೆ ಕೈಗೊಳ್ಳಬೇಕಾದ ಕೆಲಸಗಳ ಬಗ್ಗೆ ಮಹತ್ವದ ತೀರ್ಮಾನಗಳನ್ನು ತೆಗೆದುಕೊಳ್ಳಲಾಯಿತು. ಅದರ ಮುಖ್ಯಾಂಶಗಳು ಇಲ್ಲಿದೆ ನೋಡಿ.

 

* ಹನುಮ ಜಯಂತಿ ಸಂದರ್ಭದಲ್ಲಿ ಲಕ್ಷಾಂತರ ಜನರು ಬೆಟ್ಟಕ್ಕೆ ಭೇಟಿ ನೀಡುತ್ತಾರೆ. ಉತ್ತರ ಭಾರತದ ಪ್ರವಾಸಿಗರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ.‌ ಯಾತ್ರಿಕರು ಉಳಿದುಕೊಳ್ಳಲು ಡಾರ್ಮೆಟರಿ ವ್ಯವಸ್ಥೆ, ಹಿರಿಯ ಭಕ್ತಾಧಿಗಳು ಬೆಟ್ಟವೇರಲು ಅನುಕೂಲವಾಗುವಂತೆ ಮೆಟ್ಟಿಲುಗಳ ವ್ಯವಸ್ಥೆ, ಸಮುದಾಯ ಭವನ ನಿರ್ಮಾಣ ಹಾಗೂ ಇತರ ಪ್ರವಾಸಿ ಸೌಲಭ್ಯಗಳು ಸೇರಿ ಕ್ಷೇತ್ರದ ಸುತ್ತ ಮುತ್ತ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಬೇಕಿದೆ.

 

* ಈ ಕ್ಷೇತ್ರಕ್ಕೆ ಹಂತ-1 ಮತ್ತು ಹಂತ-2ರಲ್ಲಿ ರೂ.200 ಕೋಟಿಗಳ ಕಾಮಗಾರಿಗಳು ಮಂಜೂರಾಗಿದ್ದು, ಈವರೆಗೆ ಈ ಕಾಮಗಾರಿಗಳಿಗೆ ರೂ.10.00 ಕೋಟಿಗಳನ್ನು ಇಲಾಖೆಯಿಂದ ಬಿಡುಗಡೆ ಮಾಡಲಾಗಿದ್ದು, ಬಾಕಿ ಅನುದಾನ ಬಿಡುಗಡೆ ಮಾಡಲು ಆರ್ಥಿಕ ಇಲಾಖೆಯಿಂದ ಹೆಚ್ಚುವರಿ ಅನುದಾನ ಒದಗಿಸಲು ಸರ್ಕಾರ ಸಿದ್ಧವಿದೆ.

 

* ಮಂಜೂರಾಗಿರುವ ಕಾಮಗಾರಿಗಳನ್ನು ಕೈಗೊಳ್ಳಲು ಸರ್ಕಾರಿ ಜಮೀನಿನ ಕೊರತೆ ಇರುವುದರಿಂದ, ಪ್ರಸ್ತಾಪಿಸಿರುವ 77.28 ಖಾಸಗಿ ಜಮೀನನ್ನು ಅನುದಾನದ ಕೊರತೆಯಿರುವುದರಿಂದ ಈವರೆಗೂ ಭೂ-ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಾಗಿರುವುದಿಲ್ಲ.

ಆದ್ದರಿಂದ, ಹೆಚ್ಚುವರಿ ಜಮೀನು ಒಳಗೊಂಡಂತೆ ಒಟ್ಟು 101 ಎಕರೆ 30 ಗುಂಟೆ ಖಾಸಗಿ ಜಮೀನು ಭೂಸ್ವಾಧೀನಪಡಿಸಿಕೊಳ್ಳಲು ಅಗತ್ಯವಾಗಿರುವ ಅನುದಾನವನ್ನು ಆರ್ಥಿಕ ಇಲಾಖೆಯಿಂದ ಒದಗಿಸಲಾಗುವುದು.

 

* ಮಂಜೂರಾಗಿರುವ ಬಹುತೇಕ ಕಾಮಗಾರಿಗಳನ್ನು ಅರಣ್ಯ ಇಲಾಖೆಯ ವ್ಯಾಪ್ತಿಗೆ ಬರುವ ಜಮೀನುಗಳಲ್ಲಿ ಕೈಗೊಳ್ಳಬೇಕಿರುವುದರಿಂದ, ಈ ಎಲ್ಲಾ ಕಾಮಗಾರಿಗಳನ್ನು ಕೈಗೊಳ್ಳಲು ಅರಣ್ಯ ಇಲಾಖೆಯ NOC ನೀಡಬೇಕಿದ್ದು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು.

 

* 2024-25ನೇ ಸಾಲಿನ ಆಯವ್ಯಯ ಘೋಷಣೆಯಂತೆ ಅಂಜನಾದ್ರಿ ಬೆಟ್ಟವೂ ಒಳಗೊಂಡಂತೆ ರಾಜ್ಯದ 11 ಪ್ರವಾಸಿ ತಾಣಗಳಿಗೆ ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ರೋಪ್ ವೇಗಳನ್ನು ಅಭಿವೃದ್ಧಿಪಡಿಸಲು ಸರ್ಕಾರದ ಅನುಮೋದನೆ ನೀಡಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ನೇಹಾ ಹಂತಕ ಫಯಾಜ್ ಕತೆ ಏನಾಗಿದೆ ನೋಡಿ