Publish Date: Wed, 13 Sep 2017 (20:32 IST)
Updated Date: Wed, 13 Sep 2017 (20:34 IST)
ಸಿಎಂ ಸಿದ್ದರಾಮಯ್ಯ ಸೇರಿದಂತೆ ಅವರ ಸಂಪುಟದ ಸಚಿವರು, ಶಾಸಕರ ವಿರುದ್ಧದ ಹಗರಣಗಳನ್ನು ಒಂದು ವಾರದಲ್ಲಿ ಬಹಿರಂಗಗೊಳಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ, ಅವರ ಕುಟುಂಬದ ಸದಸ್ಯರು, ಸಚಿವರು, ಶಾಸಕರು ಹಾಗೂ ಗೃಹ ಸಚಿವರ ಸಲಹೆಗಾರ ಕೆಂಪಯ್ಯನವರ ಹಗರಣಗಳನ್ನು ಒಂದು ವಾರದಲ್ಲಿ ರಾಜ್ಯದ ಜನತೆಯ ಮುಂದಿಡುತ್ತೇನೆ ಎಂದು ಅಬ್ಬರಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಮತ್ತು ಅವರ ಸಂಪುಟದ ಸಚಿವರ ಹಗರಣಗಳ ಬಗ್ಗೆ ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ಚಾರ್ಜ್‌ಶೀಟ್ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.
ಸಿಎಂ ಪುತ್ರ ಸೇರಿದಂತೆ ಘಟಾನುಘಟಿ ಸಚಿವರು, ಸಿಎಂ ಆಪ್ತರು ಹಲವಾರು ಹಗರಣಗಳು ಭಾಗಿಯಾಗಿರುವ ಬಗ್ಗೆ ದಾಖಲೆಗಳಿವೆ. ಮುಂದಿನ ವಾರದಲ್ಲಿ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.