Select Your Language

Notifications

webdunia
webdunia
webdunia
webdunia

ಕರ್ನಾಟಕ ಭ್ರಷ್ಟ ರಾಜ್ಯವಲ್ಲ: ನನ್ನ ಮೇಲೆ ಕಪ್ಪು ಮಸಿಯೂ ಇಲ್ಲ ಎಂದ ಸಿಎಂ ಸಿದ್ದರಾಮಯ್ಯ

Siddaramaiah

Krishnaveni K

ಮೈಸೂರು , ಸೋಮವಾರ, 29 ಜುಲೈ 2024 (17:07 IST)
ಮೈಸೂರು: ಕರ್ನಾಟಕದ ಸಂಸದರು ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ಪ್ರತಿಭಟನೆ ಮಾಡಬೇಕು. ಕರ್ನಾಟಕ  ಭ್ರಷ್ಟ ರಾಜ್ಯ ಎಂದು ಅವರು ಮಸಿ ಬಳಿಯುತ್ತಿದ್ದಾರೆ. ಕರ್ನಾಟಕ ಭ್ರಷ್ಟ ರಾಜ್ಯವಲ್ಲ. ನಾವು ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿದ್ದೇವೆ. ನಮ್ಮ ಸರ್ಕಾರದಲ್ಲಿ ಭ್ರಷ್ಟಾಚಾರ ಕಡಿಮೆಯಾಗುತ್ತಿದೆ ಎಂದರು. ಇಂದು ಕೆಆರ್ ಎಸ್ ಗೆ ಬಾಗಿನ ಅರ್ಪಿಸಿದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.

ಹೂಡಿಕೆ ಕುರಿತು ಸ್ಪಷ್ಟನೆ
ಕರ್ನಾಟಕದಲ್ಲಿ  ಕೈಗಾರಿಕೆಗಳು ಹೂಡಿಕೆ ಮಾಡಲು ಮುಂದಾಗುತ್ತಿಲ್ಲ ಎಂಬ ಕೇಂದ್ರ ಹಣಕಾಸು ಸಚಿವರ ಹೇಳಿಕೆಗೆ ಸಂಬಂಧಪಟ್ಟಂತೆ ಎಂ. ಬಿ.ಪಾಟೀಲ್ ಹಾಗೂ ಪ್ರಿಯಾಂಕ ಖರ್ಗೆಯವರಿಗೆ ಈ ಬಗ್ಗೆ ಮಾತನಾಡಲು ಸೂಚಿಸುವುದಾಗಿ ಹೇಳಿದರು.

ಬಿಜೆಪಿ ಪಾದಯಾತ್ರೆ: ರಾಜಕೀಯವಾಗಿ ವಿರೋಧಿಸುತ್ತೇವೆ
ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ  ವಾಲ್ಮೀಕಿ ಮತ್ತು ಮೂಡಾ ಹಗರಣದ ಬಗ್ಗೆ ಪ್ರತಿಭಟಿಸಿ  ಪಾದಯಾತ್ರೆ ಹಮ್ಮಿಕೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರು ಮಾಡಲಿ. ನಾವೂ ಕೂಡ ರಾಜಕೀಯವಾಗಿ ವಿರೋಧಿಸುತ್ತೇವೆ. ವಾಲ್ಮೀಕಿ ಹಗರಣದಲ್ಲಿ ನಾವು 84.63 ಕೋಟಿ ಹಗರಣವಾಗಿದೆ ಎನ್ನುವುದು ನಿಜ. ಎಸ್.ಐ.ಟಿ ರಚನೆಯಾಗಿದ್ದು  ತನಿಖೆಯಾಗುತ್ತಿದೆ. ಅವರೂ ಕೂಡ ಸಿಬಿಐ, ಇಡಿ ಯಾವರೂ  ತನಿಖೆ  ಮಾಡುತ್ತಿದ್ದಾರೆ ಎಂದರು.

ಬಿಜೆಪಿ ಕಾಲದಲ್ಲಿ ಭ್ರಷ್ಟಾಚಾರ ನಡೆದಿಲ್ಲವೇ?
ಉಪಮುಖ್ಯಮಂತ್ರಿಗಳು ಅಯೋಗ್ಯ ಅಧಿಕಾರಿಗಳು ಹೀಗೆ ಮಾಡಿದ್ದಾರೆ ಎಂದು ಹೇಳಿರುವ ಬಗ್ಗೆ ಬಿಜೆಪಿ ಅಯೋಗ್ಯ ಅಧಿಕಾರಿಗಳನ್ನು ಸರ್ಕಾರ ಏಕೆ ಇಟ್ಟುಕೊಂಡಿದೆ ಎಂದು ಹೇಳಿರುವ ಬಗ್ಗೆ ಮಾತನಾಡಿ ಅವರ ಕಾಲದಲ್ಲಿ ಭ್ರಷ್ಟಾಚಾರ ನಡೆದಿಲ್ಲವೇ? ಅದಕ್ಕಾಗಿಯೇ 21 ಹಗರಣಗಳನ್ನು ಪಟ್ಟಿ ಮಾಡಿ ಹೇಳಿದ್ದೇನೆ ಎಂದರು. ಕೆಲವು ತನಿಖೆಗಳು ನಡೆಯುತ್ತಿವೆ
 ರಾಘವೇಂದ್ರ ಸಹಕಾರಿ ಬ್ಯಾಂಕ್ ಪ್ರಕರಣವನ್ನು ಸಿಬಿಐ ಗೆ ವಹಿಸಲಾಗಿದೆ. ಇಂದಿನವರೆಗೂ ಸಿಬಿಐ ತನಿಖೆ ಪೂರ್ಣಗೊಳಿಸಿಲ್ಲ.ಅವರ ಅವಧಿಯಲ್ಲಿ ಒಂದೇ ಒಂದು ಪ್ರಕರಣವನ್ನು ಸಿಬಿಐ ಗೆ ಕೊಟ್ಟಿಲ್ಲ. 7-8 ಹಗರಣಗಳನ್ನು ಸಿಬಿಐ ಗೆ ವಹಿಸಲಾಗಿದೆ. ಇದೆ ಬಿಜೆಪಿ ನಾವು ಅಧಿಕಾರದಲ್ಲಿದ್ದಾಗ ಸಿಬಿಐ ಯ ಚೋರ್ ಬಚಾವ್ ಸಂಸ್ಥೆ  ಎನ್ನುತ್ತಿದ್ದರು. ಈಗ ಸಿಬಿಐ ಗೆ ಮೇಲೆ ಇವರಿಗೇನು ಪ್ರೀತಿ ಎಂದರು.  ಈ ಕುರಿತ ದಾಖಲೆಗಳನ್ನು ನಾನು ಕೊಡುತ್ತೇನೆ ಎಂದರು.

 
 ನನ್ನ ಮೇಲೆ ಯಾವ ಕಪ್ಪು ಮಸಿಯೂ ಇಲ್ಲ
ಮೂಡಾ ಪ್ರಕರಣದಲ್ಲಿ ನಿವೇಶನಗಳನ್ನು ಸಿಎಂ ಹಿಂದಿರುಗಿಸಿ ತನಿಖೆಗೆ ಅವಕಾಶ ಕೊಡಬೇಕೆಂದು ಬಿಜೆಪಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಮೂಡಾ ಪ್ರಕರಣದಲ್ಲಿ ನನ್ನ ಮೇಲೆ ಯಾವ ಕಪ್ಪು ಮಸಿಯೂ ಇಲ್ಲ. ಈ ಬಗ್ಗೆ ನ್ಯಾಯಾಂಗ ಆಯೋಗ ರಚನೆಯಾಗಿದೆ. ಬಿಜೆಪಿ ಯಾವುದೇ ನ್ಯಾಯಾಂಗ ತನಿಖೆ ರಚಿಸಿತ್ತೆ ಎಂದು ಪ್ರಶ್ನಿಸಿದರು. ಕೋವಿಡ್ 19 ಸಂದರ್ಭದಲ್ಲಿ  3 ರಿಂದ 4 ಸಾವಿರ ಕೋಟಿ ರೂಪಾಯಿ ನುಂಗಿ ಹಾಕಿದ್ದಾರೆ. ನ್ಯಾಯಾಂಗ ತನಿಖೆ ಅಥವಾ ಸಿಬಿಐ ಗೆ ವಹಿಸಲು ಕೊಡಿ ಎಂಡು ಒತ್ತಾಯಿಸಿದೆ. ಆದರೆ ಅವರು ಕೊಡಲಿಲ್ಲ ಎಂದರು. ಯಾವುದೇ ತಪ್ಪಿಲ್ಲದಿದ್ದರೂ ಕೂಡ ಜನರ ಮನಸ್ಸಿನಲ್ಲಿ ಅನುಮಾನವಿರಬಾರದು ಎಂಬ ಕಾರಣಕ್ಕೆ ನ್ಯಾಯಾಂಗ ಆಯೋಗ ರಚಿಸಲಾಗಿದೆ ಎಂದರು. ಒಬ್ಬ ಸಚಿವರು,   ಮುಖ್ಯಮಂತ್ರಿಯಾಗಿದ್ದವರು ಹೇಗೆ ಮಾತನಾಡಿದರೆ ಹೇಗೆ?  ನಮಗೆ ನಮ್ಮ ಪೊಲೀಸರ ಮೇಲೆ ನಂಬಿಕೆ ಇದೆ ಎಂದರು.

ಬಿಜೆಪಿಯವರು   ಸುಳ್ಳು ಹೇಳುವುದು ಹಾಗೂ ಬ್ಲಾಕ್ ಮೇಲ್ ಮಾಡುವುದರಲ್ಲಿ ನಿಸ್ಸೀಮರು
ತಮ್ಮ 40 ವರ್ಷಗಳ ರಾಜಕೀಯ ಜೀವನದಲ್ಲಿ ಇಲ್ಲದ ಆರೋಪ ಈಗ ಬಂದಿರುವುದಕ್ಕೆ ಬೇಸರವಾಗಿದೆಯೇ ಎಂಬಾ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ನಾನು ತಪ್ಪು ಮಾಡಿದ್ದರೆ ನನಗೆ ಬೇಸರವಾಗುತ್ತದೆ. ನಾನು ತಪ್ಪು ಮಾಡಿಲ್ಲ ಎಂದರು. ಬಿಜೆಪಿ ಯವರು  ಸುಳ್ಳು ಹೇಳುವುದರಲ್ಲಿ, ಬ್ಲಾಕ್ ಮೇಲ್ ಮಾಡುವುದರಲ್ಲಿ ನಿಸ್ಸೀಮರು. ಅವರಿಗೆ  ಯಾವ ಸಿದ್ದಾಂತವಿದೆ. ಸಾಮಾಜಿಕ ನ್ಯಾಯ, ಜಾತ್ಯಾತೀತತೆ, ಪ್ರಜಾಪ್ರಭುತ್ವ, ಸಂವಿಧಾನದ ವಿರುದ್ದವಾಗಿದ್ದಾರೆ ಎಂದರು.

ಮುಡಾದಿಂದ ಎಷ್ಟು ನಿವೇಶನಗಳು ದೇವೇಗೌಡರ ಕುಟುಂಬಕ್ಕೆ ಹೋಗಿದೆ?
ಬಹಳ ಮಾತನಾಡುವ ಕೇಂದ್ರ ಸಚಿವ  ಹೆಚ್.ಡಿ.ಕುಮಾರಸ್ವಾಮಿ ಯವರು 1984 ರಲ್ಲಿ ಕೈಗಾರಿಕಾ ನಿವೇಶನವನ್ನು ಪಡೆದರು. ಸ್ವಾದೀನಕ್ಕೆ ಕೂಡ ಪಡೆದಿದ್ದಾರೆ. ನಂತರ ಬದಲಿ ನಿವೇಶನಕ್ಕೆ ಅರ್ಜಿ ಹಾಕಿಕೊಂಡಿದ್ದಾರೆ. ಕೈಗಾರಿಕೆ ಮಾಡಿದ್ದಾರೆಯೇ? ಎಂಡಿ ಕೇಳಿದರು. ಸಿ ಐ ಡಿಬಿ ಇರುವಾಗ ಪುಟ್ಟಯ್ಯ ಇರುವಾಗ  ಎಷ್ಟು ನಿವೇಶನಗಳು ದೇವೇಗೌಡರ ಕುಟುಂಬಕ್ಕೆ ಹೋಗಿದೆ? ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

ದೆಹಲಿ ಪ್ರವಾಸ
ಸರ್ಕಾರ ಹಾಗೂ ಪಕ್ಷದ ಬಗ್ಗೆ ಚರ್ಚೆ ಮಾಡಲು ವರಿಷ್ಠರು ಕರೆದಿದ್ದಾರೆ .ಹಾಗಾಗಿ ನಾನೂ ಮತ್ತು ಉಪಮುಖ್ಯಮಂತ್ರಿಗಳು ದೆಹಲಿಗೆ  ಭೇಟಿ ನೀಡುತ್ತಿದ್ದೇವೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಮೇಕೆದಾಟು ಯೋಜನೆ ಬಗ್ಗೆ ಚರ್ಚೆಗೆ ಸಿದ್ಧ
ಮೆಟ್ಟೂರು ಅಣೆಕಟ್ಟು ತುಂಬಿ ನೀರು ವ್ಯರ್ಥವಾಗುತ್ತಿದ್ದು, ಈ ಬಗ್ಗೆ ತಮಿಳುನಾಡು ಸರ್ಕಾರದೊಂದಿಗೆ ನಾವು ಮಾತನಾಡಲು ತಯಾರಿದ್ದೇವೆ. ಮೇಕೆದಾಟು ಯೋಜನೆಯಿಂದ ಅವರಿಗೆ ತೊಂದರೆಯಾಗದಿದ್ದರೂ ಮಾತನಾಡಲು ಅವರು ಸಿದ್ದರಿಲ್ಲ.ಕೇಂದ್ರ ಸರ್ಕಾರ ಅನುಮೋದನೆ ಕೊಟ್ಟರೇ ನಾವು ನಿರ್ಮಾಣ ಮಾಡಲು ಸಿದ್ಧ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಬಾಂಗ್ಲಾದೇಶದಿಂದ 20 ಸಾವಿರ ಜನ ಬೆಂಗಳೂರಿಗೆ ವಲಸೆ ಬಂದಿರುವ ಬಗ್ಗೆ ಮಾತನಾಡಿ ಈ ಬಗ್ಗೆ ತಿಳಿದಿಲ್ಲ. ವಿಚಾರ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಕಾವೇರಿಗೆ ಬಾಗಿನ ಅರ್ಪಿಸಿ ಬಾಡೂಟ: ಹೊಸ ವಿವಾದ