Select Your Language

Notifications

webdunia
webdunia
webdunia
webdunia

ಐದು ವರ್ಷವೂ ನೀವೇ ಮುಖ್ಯಮಂತ್ರಿಯಾ ಎಂದಿದ್ದಕ್ಕೆ ಸಿದ್ದರಾಮಯ್ಯ ಹೀಗೆ ಹೇಳಿದ್ರು

Siddaramaiah

Krishnaveni K

ಬೆಂಗಳೂರು , ಗುರುವಾರ, 20 ನವೆಂಬರ್ 2025 (16:06 IST)
ಬೆಂಗಳೂರು: ಐದು ವರ್ಷವೂ ತಾವೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರಾ ಎಂಬ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಇಂದು ಮಹತ್ವದ ಹೇಳಿಕೆ ಕೊಟ್ಟಿದ್ದಾರೆ.

ಚಾಮರಾಜನಗರಕ್ಕೆ ಭೇಟಿ ಕೊಟ್ಟಿದ್ದಸಿಎಂ ಸಿದ್ದರಾಮಯ್ಯ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಈ ವೇಳೆ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ‘ಐದು ವರ್ಷವೂ ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೀನ, ಇಲ್ಲವಾ ಎಂಬುದೇ ಅನಾವಶ್ಯಕ ಚರ್ಚೆ. ಎರಡೂವರೆ ವರ್ಷದ ನಂತರ ಸಂಪುಟ ಪುನರ್ ರಚನೆ ಮಾಡಬಹುದು ಎಂದು ತಿಳಿಸಿದ್ದ ನಂತರವಷ್ಟೇ ಮುಖ್ಯಮಂತ್ರಿ ಬದಲಾವಣೆಯ ವಿಷಯ ಮುನ್ನಲೆಗೆ ಬಂದಿರುವುದು. ಸಂಪುಟ ಪುನರ್ ರಚನೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ತೆಗೆದುಕೊಳ್ಳಬೇಕಿದೆ. ಒಟ್ಟು 34 ಸಚಿವರ ಸ್ಥಾನವಿದ್ದು, ಅದರಲ್ಲಿ ಎರಡು ಸ್ಥಾನಗಳು ಖಾಲಿಯಿದೆ. ಸಂಪುಟ ಪುನರ್ ರಚನೆ ಸಂದರ್ಭದಲ್ಲಿ ಈ ಖಾಲಿ ಸಚಿವ ಸ್ಥಾನಗಳನ್ನು ಭರ್ತಿ ಮಾಡಲಾಗುವುದು’ ಎಂದಿದ್ದಾರೆ.

‘ನವೆಂಬರ್ ಕ್ರಾಂತಿ ಎನ್ನುವುದು ಮಾಧ್ಯಮಗಳ‌ ಸೃಷ್ಟಿ. ಈ ಬಗ್ಗೆ ಯಾರ ಹೇಳಿಕೆಗೂ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ರಾಜ್ಯದಲ್ಲಿ ನಮ್ಮ ಪಕ್ಷವು ಐದು ವರ್ಷ ಆಡಳಿತ ನಡೆಸಲು ಜನಾದೇಶ ಇದೆ. ನಮ್ಮ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ ಭರವಸೆಯನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ನವೆಂಬರ್ ಕ್ರಾಂತಿ ಎಂಬ ವಿಷಯವನ್ನು ಮಾಧ್ಯಮದವರೇ ಸೃಷ್ಟಿಸಿದರು. ಜನರ ಆಸೆಯಂತೆ ಐದು ವರ್ಷ ಸರ್ಕಾರ ನಡೆಸಿ ನಂತರವೂ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ’ ಎಂದು ಖಡಕ್ ಆಗಿ ಹೇಳಿದ್ದಾರೆ.

‘ಮೂಢನಂಬಿಕೆ ಮತ್ತು ಕಂದಾಚಾರಗಳನ್ನು ನಂಬುವುದಿಲ್ಲವಾದ್ದರಿಂದ ಚಾಮರಾಜನಗರಕ್ಕೆ ಭೇಟಿ ನೀಡುತ್ತಿರುತ್ತೇನೆ. ರಾಜ್ಯದ ಎಲ್ಲ ಜಿಲ್ಲೆಗಳನ್ನೂ ಸಮಾನವಾಗಿ ಕಂಡು, ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡುತ್ತೇನೆ. ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ. ಆ ಮೌಢ್ಯವನ್ನು ಹೋಗಲಾಡಿಸಲು ಇಲ್ಲಿಗೆ ಭೇಟಿ ನೀಡಿದ್ದು, ಅಧಿಕಾರ ಈಗಲೂ ಮತ್ತು ಭವಿಷ್ಯದಲ್ಲಿಯೂ ಭದ್ರವಾಗಿರುತ್ತದೆ’ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರು ಎಟಿಎಂ ವಾಹನ ದರೋಡೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌: ಕಿಡಿಗೇಡಿಗಳು ಬಳಸಿದ್ದ ಕಾರು ಪತ್ತೆ