ಅಧಿಕಾರ ಹಂಚಿಕೆ ಒಪ್ಪಂದ: ಡಿಕೆ ಶಿವಕುಮಾರ್ ಮಾತಿಗೆ ಸಿಎಂ ಸಿದ್ದರಾಮಯ್ಯ ಟಕ್ಕರ್

Krishnaveni K
ಬುಧವಾರ, 4 ಡಿಸೆಂಬರ್ 2024 (14:47 IST)
ಬೆಂಗಳೂರು: ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಆಯ್ಕೆ ಮಾಡುವ ಸಂದರ್ಭದಲ್ಲಿ ಹೈಕಮಾಂಡ್ ಜೊತೆ ಒಪ್ಪಂದ ಮಾಡಿಕೊಂಡಿರುವುದಾಗಿ ಹೇಳಿದ್ದ ಡಿಸಿಎಂ ಡಿಕೆ ಶಿವಕುಮಾರ್ ಗೆ ಇಂದು ಸಿಎಂ ಸಿದ್ದರಾಮಯ್ಯ ಟಕ್ಕರ್ ಕೊಟ್ಟಿದ್ದಾರೆ.

ಆಂಗ್ಲ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಡಿಕೆ ಶಿವಕುಮಾರ್, ಈ ಹಿಂದೆ ರಾಜ್ಯದಲ್ಲಿ ಕಾಂಗ್ರೆಸ್ ಬಹುಮತದಿಂದ ಗೆದ್ದು ಅಧಿಕಾರಕ್ಕೇರಿದ ಸಂದರ್ಭದಲ್ಲಿ ಅಧಿಕಾರ ಹಸ್ತಾಂತರ ವಿಚಾರದಲ್ಲಿ ಹೈಕಮಾಂಡ್ ಜೊತೆ ಒಪ್ಪಂದವಾಗಿತ್ತು. ಆದರೆ ಒಪ್ಪಂದದ ಬಗ್ಗೆ ಬಹಿರಂಗಪಡಿಸಲಾಗದು ಎಂದಿದ್ದರು.

ಸಿದ್ದರಾಮಯ್ಯ ಬಳಿಕ ಡಿಕೆ ಶಿವಕುಮಾರ್ ಗೆ ಮುಖ್ಯಮಂತ್ರಿ ಹುದ್ದೆ ಬಿಟ್ಟುಕೊಡುವ ಬಗ್ಗೆ ಹಂಚಿಕೆಯಾಗಿತ್ತು ಎಂದು ಅವರು ಪರೋಕ್ಷವಾಗಿಯೇ ಹೇಳಿಕೊಂಡಿದ್ದರು. ಆದರೆ ಡಿಕೆಶಿ ಹೇಳಿಕೆಗೆ ಇಂದು ಸಿಎಂ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ. ಮಂಡ್ಯದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು ಯಾವ ಒಪ್ಪಂದ? ನಮ್ಮ ನಡುವೆ ಯಾವ ಒಪ್ಪಂದವೂ ಆಗಿಲ್ಲ. ಹೈಕಮಾಂಡ್ ಮಾತಿನಂತೇ ನಡೆದುಕೊಳ್ಳುತ್ತೇವೆ ಎಂದಿದ್ದಾರೆ.

ಹಾಸನದಲ್ಲಿ ಸಿಎಂ ಸಿದ್ದರಾಮಯ್ಯ ಹೆಸರಿನಲ್ಲಿ ಸಮಾವೇಶ ನಡೆಸಲು ತಯಾರಿ ನಡೆದಿತ್ತು. ಆದರೆ ಇದಕ್ಕೆ ಅಪಸ್ವರ ಬಂದ ಬೆನ್ನಲ್ಲೇ ಇದನ್ನು ಕಾಂಗ್ರೆಸ್ ಸಮಾವೇಶವಾಗಿ  ಬದಲಾಯಿಸಲಾಯಿತು. ಇದರ ಮಧ್ಯೆಯೇ ಡಿಕೆ ಶಿವಕುಮಾರ್ ಅಧಿಕಾರ ಹಂಚಿಕೆ ಕುರಿತು ಹೇಳಿಕೆ ನೀಡಿದ್ದು ವಿವಾದಕ್ಕೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments