ಬೆಂಗಳೂರು: ಕಾಶ್ಮೀರದಲ್ಲಿ ಉಗ್ರರ ದಾಳಿ ಬಳಿಕ ಪಾಕಿಸ್ತಾನದ ಜೊತೆಗೆ ಯುದ್ಧ ಮಾಡಬೇಕಾ ಸಾರ್ ಎಂದರೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ರು ಗೊತ್ತಾ?
ಪಹಲ್ಗಾಮ್ ನಲ್ಲಿ ಉಗ್ರರು ಅಮಾಯಕ ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿ 26 ಮಂದಿಯನ್ನು ಕೊಲೆ ಮಾಡಿದ್ದರು. ಇದಾದ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧ ಮತ್ತಷ್ಟು ಹದಗೆಟ್ಟಿದೆ. ಎರಡೂ ದೇಶಗಳ ನಡುವೆ ಯುದ್ಧದ ಕಾರ್ಮೋಡವಿದೆ.
ಈ ಬಗ್ಗೆ ಇಂದು ಮಾಧ್ಯಮಗಳು ಸಿಎಂ ಸಿದ್ದರಾಮಯ್ಯ ಬಳಿ ಪ್ರಶ್ನೆ ಮಾಡಿವೆ. ಎರಡೂ ದೇಶಗಳ ನಡುವೆ ಯುದ್ಧ ನಡೆಯಬೇಕಾ ಎಂದು ಕೇಳಿವೆ. ಇದಕ್ಕೆ ಉತ್ತರಿಸಿರುವ ಸಿಎಂ ಸಿದ್ದರಾಮಯ್ಯ ಯುದ್ಧ ಏನೂ ಮಾಡಬೇಕಾಗಿಲ್ಲ. ಈಗಿರುವ ಕ್ರಮಗಳನ್ನೇ ಬಿಗಿಗೊಳಿಸಿದರೆ ಸಾಕು. ಭದ್ರತೆ ಬಿಗಿಗೊಳಿಸಬೇಕು. ನಾವು ಶಾಂತಿ ಕಾಪಾಡಬೇಕು. ಶಾಂತಿಯನ್ನಷ್ಟೇ ಬಯಸಬೇಕು ಎಂದಿದ್ದಾರೆ.
ಇನ್ನು ರಾಜ್ಯದಲ್ಲಿರುವ ಪಾಕಿಸ್ತಾನಿ ಪ್ರಜೆಗಳನ್ನು ಗುರುತಿಸಿ ಗಡೀಪಾರು ಮಾಡುವ ಕೆಲಸ ಜಾರಿಯಲ್ಲಿದೆ ಎಂದಿದ್ದಾರೆ. ಎಲ್ಲಾ ನಗರಗಳಲ್ಲಿರುವ ಪಾಕ್ ಪ್ರಜೆಗಳನ್ನು ಗುರುತಿಸಿ ಅವರ ದೇಶಕ್ಕೆ ಕಳುಹಿಸುವ ಕೆಲಸ ಮಾಡಲಾಗುತ್ತಿದೆ ಎಂದಿದ್ದಾರೆ.