Select Your Language

Notifications

webdunia
webdunia
webdunia
webdunia

ಸರ್ಕಾರೀ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ: ತಿದ್ದುಪಡಿಗೆ ಸಿದ್ದರಾಮಯ್ಯ ಸೂಚನೆ

Siddaramaiah

Krishnaveni K

ಬೆಂಗಳೂರು , ಮಂಗಳವಾರ, 12 ನವೆಂಬರ್ 2024 (11:36 IST)
ಬೆಂಗಳೂರು: ಕರ್ನಾಟಕ ಸರ್ಕಾರದ ಸಿವಿಲ್ ಕಾಮಗಾರಿಗಳ 1 ಕೋಟಿ ರೂ.ವರೆಗಿನ ಗುತ್ತಿಗೆಗಳಲ್ಲಿ ಮುಸ್ಲಿಂ ಸಮುದಾಯಕ್ಕೆ ಶೇ.4 ರಷ್ಟು ಮೀಸಲಾತಿ ನೀಡಬೇಕು ಎಂಬ ಹೊಸ ನಿಯಮ ಮಾಡಲು ಸಿಎಂ ಸಿದ್ದರಾಮಯ್ಯ ಅನುಮೋದನೆ ನೀಡಿದ್ದಾರೆ.

ಮುಸ್ಲಿಮರಿಗೆ ಮೀಸಲಾತಿ ನೀಡುವ ಪ್ರಸ್ತಾವನೆಗೆ ಸಿಎಂ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದು ಹಣಕಾಸು ಇಲಾಖೆಗೆ ಸೂಚನೆಯನ್ನೂ ನೀಡಿದ್ದಾರೆ ಎಂದು ತಿಳಿದುಬಂದಿದೆ. ಸಿದ್ದರಾಮಯ್ಯನವರ ಈ ನಿರ್ಧಾರಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಹಲವರು ತೀವ್ರ ವಿರೋಧ ವ್ಯಕ್ತವಾಗಿದೆ.

ಈಗಾಗಲೇ ವಕ್ಫ್ ಬೋರ್ಡ್ ವಿಚಾರವಾಗಿ ಕಾಂಗ್ರೆಸ್ ಸರ್ಕಾರ ತೀವ್ರ ಟೀಕೆಗೆ ಗುರಿಯಾಗಿದೆ. ಮುಸ್ಲಿಮರ ಓಲೈಕೆ ಮಾಡಲಾಗುತ್ತಿದೆ ಎಂಬ ಆರೋಪ ಬಂದಿದೆ. ಇದರ ಮೇಲೆ ಸಿದ್ದರಾಮಯ್ಯ ಇನ್ನೊಂದು ನಿರ್ಧಾರ ಕೈಗೊಂಡಿದ್ದು, ಮತ್ತೆ ರಾಜ್ಯ ಸರ್ಕಾರ ಹಿಂದೂಗಳ ಕೆಂಗಣ್ಣಿಗೆ ಗುರಿಯಾಗಲಿದೆ.

1 ಕೋಟಿ ರೂ.ವರೆಗಿನ ಕಟ್ಟಡ ನಿರ್ಮಾಣ ಕಾಮಗಾರಿಗಳ ಸಾರ್ವಜನಿಕ ಗುತ್ತಿಗೆಯಲ್ಲಿ ಮುಸ್ಲಿಂ ಸಮುದಾಯದವರಿಗೆ ಶೇ.4 ರಷ್ಟು ಮೀಸಲಾತಿ ನೀಡಬೇಕು ಎಂದು ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆ ಪ್ರಸ್ತಾವನೆ ಸಲ್ಲಿಸಿತ್ತು. ಇದನ್ನು ಸಿಎಂ ಸಿದ್ದರಾಮಯ್ಯ ಅನುಮೋದಿಸಿದ್ದು ತಿದ್ದುಪಡಿಗೆ ಸೂಚನೆ ನೀಡಿದ್ದಾರೆ.

ಚಳಿಗಾಲದಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ವಿಶೇಷ ಅಧಿವೇಷನದದಲ್ಲಿ ಈ ತಿದ್ದುಪಡಿ ಕಾಯ್ದೆ ಮಂಡನೆಯಾಗಲಿದೆ. ಈಗಾಗಲೇ ಎಸ್ ಸಿ/ಎಸ್ ಟಿ ಸಮುದಾಯಕ್ಕೆ ಶೇ.24, ಒಬಿಸಿ ಸಮುದಾಯಕ್ಕೆ ಶೇ.4 ಮೀಸಲಾತಿ ನೀಡಿದೆ. 2ಎ ಗುತ್ತಿಗೆ ಅಡಿಯಲ್ಲಿ ಶೇ.15 ಮೀಸಲಾತಿ ನೀಡಲಾಗಿದೆ. ಒಟ್ಟು ಸರ್ಕಾರೀ ಗುತ್ತಿಗೆ ಕಾಮಗಾರಿಗಳಲ್ಲಿ ಶೇ.43 ರಷ್ಟು ಮೀಸಲಾತಿ ನೀಡಲಾಗುತ್ತಿದೆ. ಈಗ ಮುಸ್ಲಿಂ ಸಮುದಾಯದವರಿಗೂ ಶೇ.4 ರಷ್ಟು ಮೀಸಲಾತಿ ನೀಡಲು ಮುಂದಾಗಿದೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಮುಡಾದಿಂದ ಒಬ್ಬೊಬ್ಬರಿಗೆ ಕೇಳಿದಷ್ಟು ಸೈಟು: ಮತ್ತೊಂದು ಪಟ್ಟಿಯಲ್ಲಿ ಬಯಲಾಯ್ತು ಶಾಕಿಂಗ್ ವಿಚಾರ