Select Your Language

Notifications

webdunia
webdunia
webdunia
webdunia

ಸಮವಸ್ತ್ರದಲ್ಲೇ ಡಿಜಿಪಿ ರಾಮಚಂದ್ರರಾವ್ ಸರಸ ಸಲ್ಲಾಪ: ಕೆಂಡಾಮಂಡಲರಾದ ಸಿದ್ದರಾಮಯ್ಯ ಮಾಡಿದ್ದೇನು

Siddaramaiah
ಬೆಂಗಳೂರು: ಚಿನ್ನ ಕಳ್ಳಸಾಗಣಿಕೆಯಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್ ತಂದೆ, ಡಿಜಿಪಿ ರಾಮಚಂದ್ರ ರಾವ್ ಕಚೇರಿಯಲ್ಲಿ ಸಮವಸ್ತ್ರದಲ್ಲಿರುವಾಗಲೇ ಸರಸ ಸಲ್ಲಾಪದಲ್ಲಿ ತೊಡಗಿಕೊಂಡಿದ್ದ ವಿಡಿಯೋಗಳು ವೈರಲ್ ಆಗುತ್ತಿದ್ದಂತೇ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲರಾಗಿದ್ದಾರೆ.

ಮಗಳು ನೋಡಿದ್ರೆ ದುಬೈನಿಂದ ಅಕ್ರಮ ಚಿನ್ನಸಾಗಣಿಕೆ ಮಾಡಿದ ಆರೋಪದಲ್ಲಿ ಜೈಲು ಸೇರಿದ್ದಾಳೆ. ಇತ್ತ ತಂದೆಯದ್ದು ರಾಸಲೀಲೆಯ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿವೆ.  ಈ ವಿಡಿಯೋಗಳು ರಾಜ್ಯ ಪೊಲೀಸ್ ಇಲಾಖೆಯೇ ತಲೆತಗ್ಗಿಸುವಂತೆ ಮಾಡಿದೆ.

ಉನ್ನತ ಹುದ್ದೆಯಲ್ಲಿರುವ ಪೊಲೀಸ್ ಅಧಿಕಾರಿಯೊಬ್ಬರ ರಾಸಲೀಲೆಯ ವಿಡಿಯೋ ವೈರಲ್ ಆಗುತ್ತಿದ್ದಂತೇ ಸಿಎಂ ಸಿದ್ದರಾಮಯ್ಯ ತನಿಖೆಗೆ ಆದೇಶಿಸಿದ್ದಾರೆ. ಈ ಬಗ್ಗೆ ಪ್ರಾಥಮಿಕ ತನಿಖೆ ನಡೆಸಿ ವರದಿ ನೀಡುವಂತೆ ಗೃಹ ಇಲಾಖೆಗೆ ಆದೇಶಿಸಿದ್ದಾರೆ.

ಕಚೇರಿಯಲ್ಲಿ ಯುವತಿಯನ್ನು ತಬ್ಬಿ ಮುದ್ದಾಡುತ್ತಿರುವ ವಿಡಿಯೋಗಳು ವೈರಲ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಟೀಕೆ ಕೇಳಿಬಂದಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಯುವತಿಯರ ಜತೆ ಸರಸದಾಟ, ಮೊದಲ ಪ್ರತಿಕ್ರಿಯೆ ಕೊಟ್ಟ ಡಿಜಿಪಿ ರಾಮಚಂದ್ರ ರಾವ್‌