Select Your Language

Notifications

webdunia
webdunia
webdunia
webdunia

ನಟ ದರ್ಶನ್ ಮತ್ತು ಇತರರನ್ನು ಬೇರೆ ಜೈಲಿಗೆ ಶಿಫ್ಟ್ ಮಾಡಲು ಸಿಎಂ ಸಿದ್ದರಾಮಯ್ಯ ಆದೇಶ

Darshan

Krishnaveni K

ಬೆಂಗಳೂರು , ಸೋಮವಾರ, 26 ಆಗಸ್ಟ್ 2024 (14:18 IST)
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡುತ್ತಿರುವ ಫೋಟೋ ವೈರಲ್ ಆದ ಹಿನ್ನಲೆಯಲ್ಲಿ ಮುಜುಗರಕ್ಕೀಡಾಗಿರುವ ರಾಜ್ಯ ಸರ್ಕಾರ ಈಗ ತ್ವರಿತ ಕ್ರಮಕ್ಕೆ ಮುಂದಾಗಿದೆ. ದರ್ಶನ್ ಮತ್ತು ಇತರೆ ಖೈದಿಗಳನ್ನು ಬೇರೆ ಜೈಲಿಗೆ ವರ್ಗಾಯಿಸಲು ಸ್ವತಃ ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿ ನ್ಯಾಯಾಂಗ ಬಂದನದಲ್ಲಿರುವ ನಟ ದರ್ಶನ್ ಗೆ ಜೈಲಿನಲ್ಲಿ ಸಿಗರೇಟು, ಕಾಫಿ, ಬೆಡ್, ಮದ್ಯ ಸೇರಿದಂತೆ ವಿಐಪಿ ಟ್ರೀಟ್ ಮೆಂಟ್ ನೀಡಲಾಗುತ್ತಿದೆ ಎಂಬುದಕ್ಕೆ ಪುರಾವೆ ನೀಡುವಂತಹ ಫೋಟೋಗಳು ವೈರಲ್ ಆಗಿದ್ದವು. ಇದರ ಬೆನ್ನಲ್ಲೇ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

ಇದರ ಬೆನ್ನಲ್ಲೇ ಈಗ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಟ್ವೀಟ್ ಮಾಡಿದ್ದು, ನಟ ದರ್ಶನ್ ಗೆ ವಿಐಪಿ ಟ್ರೀಟ್ ಮೆಂಟ್ ನೀಡಲು ಅನುಕೂಲ ಮಾಡಿಕೊಟ್ಟಿರುವ ಅಧಿಕಾರಿಗಳ ಅಮಾನತಿಗೆ ಸೂಚನೆ ನೀಡಿದ್ದೇನೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದಿದ್ದಾರೆ.

ಅಷ್ಟೇ ಅಲ್ಲ, ದರ್ಶನ್ ಮತ್ತು ಇತರೆ ಖೈದಿಗಳನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ಮತ್ತು ಕಾರಾಗೃಹಕ್ಕೆ ಭೇಟಿ ನೀಡಿ ಪ್ರಕರಣದ ಬಗ್ಗೆ ಸಮಗ್ರ ವರದಿ ನೀಡುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪರಪ್ಪನ ಅಗ್ರಹಾರ ಜೈಲಿನ ಕರ್ಮಕಾಂಡಗಳ ಬಗ್ಗೆ ಅಂದೇ ಗಮನ ಸೆಳೆದಿದ್ದ ಐಪಿಎಸ್ ಅಧಿಕಾರಿ ಡಿ ರೂಪ