Daily Horoscope

Select Your Language

Notifications

webdunia
webdunia
webdunia
webdunia

ರಂಜಾನ್ ಹಬ್ಬದಲ್ಲಿ ಭಾಗಿಯಾದ ಸಿಎಂ ಸಿದ್ದರಾಮಯ್ಯ: ಎಲ್ಲಾ ಧರ್ಮವನ್ನು ಪ್ರೀತಿಸಬೇಕು ಎಂದ ಸಿಎಂ

Siddaramaiah Ramzan celebration
Photo Credit: X
ಬೆಂಗಳೂರು: ಇಂದು ಮುಸ್ಲಿಮರ ಪವಿತ್ರ ರಂಜಾನ್ ಹಬ್ಬದಲ್ಲಿ ಭಾಗಿಯಾದ ಸಿಎಂ ಸಿದ್ದರಾಮಯ್ಯ ಎಲ್ಲಾ ಧರ್ಮವನ್ನೂ ಪ್ರೀತಿಸಬೇಕು ಎಂದು ಸಲಹೆ ನೀಡಿದ್ದಾರೆ.

ಬೆಂಗಳೂರಿನ ಮಿಲ್ಲರ್ಸ್ ರಸ್ತೆಯ ಮುಸ್ಮಿದ್ ಈ ಖಾದ್ರಿಯಲ್ಲಿ ನಡೆದ ರಂಜಾನ್ ಸಾಮೂಹಿಕ ಪ್ರಾರ್ಥನೆಯಲ್ಲಿ ಅವರು ಪಾಲ್ಗೊಂಡಿದ್ದಾರೆ. ಈ ವೇಳೆ ಶಾಸಕ ರಿಜ್ವಾನ್ ಅರ್ಷದ್ ಅವರಿಗೆ ಸಾಥ್ ನೀಡಿದ್ದರು. ಮುಸ್ಲಿಮರ ಟೋಪಿ ಧರಿಸಿ ಪ್ರಾರ್ಥನೆಯಲ್ಲಿ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು ‘ಮಾನವಕುಲದ ಒಳಿತಿಗಾಗಿ ಸರ್ವರೂ ಪ್ರಾರ್ಥಿಸುವುದು ಅತ್ಯಂತ ಅವಶ್ಯ. ಮಾನವೀಯತೆಯಿಂದ ಪರಸ್ಪರ ಪ್ರೀತಿ - ವಿಶ್ವಾಸದಿಂದ ಬಾಳುವುದು ಮುಖ್ಯ. ಭಾರತ ದೇಶ ವಿವಿಧ ಜಾತಿ ಸಂಸ್ಕೃತಿಗಳಿಂದ ಕೂಡಿದೆ. ವಿವಿಧತೆಯಲ್ಲಿ ಏಕತೆಯಿರುವ ನಮ್ಮ ದೇಶದಲ್ಲಿ ಎಲ್ಲರೂ ಒಟ್ಟಾಗಿ ಬಾಳಬೇಕು. ಯಾವುದೇ ಧರ್ಮವೂ ದ್ವೇಷವನ್ನು ಬೋಧಿಸುವುದಿಲ್ಲ. ಎಲ್ಲ ಧರ್ಮಗಳೂ ಪ್ರೀತಿಯನ್ನು ಬೋಧಿಸುತ್ತವೆ. ಇದನ್ನು ಅರಿತು ಬಾಳಿದರೆ ಸಮಾಜದಲ್ಲಿ ಶಾಂತಿ - ಸೌಹಾರ್ದತೆ ನೆಲೆಸಲು ಸಾಧ್ಯ’ ಎಂದಿದ್ದಾರೆ.

ಪ್ರತೀ ವರ್ಷವೂ ರಂಜಾನ್ ಹಬ್ಬದ ಸಂದರ್ಭದಲ್ಲಿ ನಡೆಯುವ ಮುಸ್ಲಿಮರ ಸಾಮೂಹಿಕ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗುತ್ತಾರೆ. ಅದರಂತೆ ಈ ಬಾರಿಯೂ ಭಾಗಿಯಾಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ