Select Your Language

Notifications

webdunia
webdunia
webdunia
webdunia

ಭರವಸೆ ನೀಡಿದ ಸಿಎಂ ಸಿದ್ದರಾಮಯ್ಯ: ಬಾರ್ ಬಂದ್ ಕರೆ ವಾಪಾಸ್

ಭರವಸೆ ನೀಡಿದ ಸಿಎಂ ಸಿದ್ದರಾಮಯ್ಯ:  ಬಾರ್ ಬಂದ್ ಕರೆ ವಾಪಾಸ್

Sampriya

ಬೆಂಗಳೂರು , ಮಂಗಳವಾರ, 19 ನವೆಂಬರ್ 2024 (18:40 IST)
Photo Courtesy X
ಬೆಂಗಳೂರು: ಹಲವು ಬೇಡಿಕೆಗಳನ್ನು ರಾಜ್ಯ ಸರ್ಕಾರದ ಮುಂದಿಟ್ಟು ನಾಳೆ ರಾಜ್ಯಾದ್ಯಂತ ಬಾರ್ ಬಂದ್‌ಗೆ ಕರೆ ನೀಡಿದ್ದ ಮದ್ಯ ಮಾರಾಟಗಾರರ ಸಂಘ ಇದೀಗ ಕರೆಯನ್ನು ವಾಪಸ್ ಪಡೆದಿದೆ. ಬಂದ್‌ಗೂ ಮುನ್ನಾ ಇಂದು ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಸಂಘದ ಸದಸ್ಯರು ಭೇಡಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಸಂಘದವರ ಬೇಡಿಕೆಗಳನ್ನು ಈಡೇರಿಸುವುದಾಗಿ ಸಿಎಂ ಭರವಸೆ ನೀಡಿದ್ದು, ಈ ಹಿನ್ನೆಲೆ ನಾಳೆ ನೀಡಿದ್ದ ಬಂದ್‌ ಕರೆಯನ್ನು ವಾಪಾಸ್ ಪಡೆದಿದೆ.

ಸಭೆ ಬಳಿಕ ಪ್ರಕಟಣೆ ಹೊರಡಿಸಿರುವ ಮದ್ಯ ಮಾರಾಟಗಾರರ ಸಂಘ, ಮುಖ್ಯಮಂತ್ರಿಗಳು ನಮ್ಮ ಸಂಘದ ಬೇಡಿಕೆ ಈಡೇರಿಸುವ ಆಶ್ವಾಸನೆ ನೀಡಿದ್ದಾರೆ. ಹೀಗಾಗಿ, ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌ಗೆ ನೀಡಿದ್ದ ಕರೆಯನ್ನು ತಾತ್ಕಾಲಿಕವಾಗಿ ಮುಂದೂಡಿದ್ದೇವೆ ಎಂದು ತಿಳಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ನಡೆಸಿದ ಸಭೆ ಯಶಸ್ವಿಯಾಗಿದ್ದು, ಮುಷ್ಕರ ನಡೆಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸಭೆಯ ಹೈಲೈಟ್ಸ್
* ಮದ್ಯ ಮಾರಾಟಗಾರರ ಬೇಡಿಕೆ ಬಗ್ಗೆ ಸಹಾನುಭೂತಿಯಿಂದ ಪರಿಶೀಲಿಸಲಾಗುವುದು.
* ಮದ್ಯ ಮಾರಾಟಗಾರರಿಗೆ ವ್ಯಾಪಾರ ಹೆಚ್ಚಾಗಿ ಸರ್ಕಾರಕ್ಕೆ ಆದಾಯ ತರುವಂತೆ enforcement ಮಾಡಲಾಗುವುದು.
* ಮದ್ಯ ಮಾರಾಟಗಾರರಿಗೆ ಕಿರುಕುಳ ನೀಡದಂತೆ ಅಬಕಾರಿ ಆಯುಕ್ತರಿಗೆ ಸೂಚನೆ ನೀಡಲಾಗುವುದು.
* ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ರಾಜ್ಯಪಾಲರಿಗೆ ನಾವು ದೂರು ಕೊಟ್ಟಿಲ್ಲ. ಈ ಬಗ್ಗೆ ಸುಳ್ಳು ಹಬ್ಬಿಸಿದ್ದಾರೆ. ದೂರು ಕೊಟ್ಟವರಿಗೂ ನಮಗೂ ಸಂಬಂಧವೇ ಇಲ್ಲ. ಈ ಬಗ್ಗೆ ಬೇಕಿದ್ದರೆ ಪರಿಶೀಲನೆ ನಡೆಸಿ, ತನಿಖೆ ನಡೆಸಿ ಎಂದು ಮದ್ಯ ಮಾರಾಟಗಾರರ ಸಂಘದ ಪದಾಧಿಕಾರಿಗಳು ಸಭೆಯಲ್ಲಿ ಒಕ್ಕೊರಲಿನಿಂದ ಸ್ಪಷ್ಟಪಡಿಸಿದರು.
* ಅಬಕಾರಿ ಇಲಾಖೆ ವರ್ಗಾವಣೆಗೆ ಕೌನ್ಸಿಲಿಂಗ್ ಪದ್ಧತಿ ಜಾರಿಗೆ ತರುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಸಿಎಂ ತಿಳಿಸಿದರು.
* ಮದ್ಯ ಮಾರಾಟಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ ಸಿಎಂ.
* ಕಿರುಕುಳ ನೀಡುವ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಸಿಎಂ ಎಚ್ಚರಿಕೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಆಡಳಿತದಲ್ಲಿ ಆರೋಗ್ಯ ಇಲಾಖೆಯ ಆರೋಗ್ಯವೇ ಕೆಟ್ಟುಹೋಗಿದೆ