Webdunia - Bharat's app for daily news and videos

Install App

ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು: ಮುಖ್ಯಮಂತ್ರಿ ಸಿದ್ದರಾಮಯ್ಯ

Krishnaveni K
ಶುಕ್ರವಾರ, 5 ಜುಲೈ 2024 (17:59 IST)
ಬೆಂಗಳೂರು: ಇತರ ಶಾಲೆಗಳಿಗೆ ಹೋಲಿಸಿದರೆ ವಸತಿ ಶಾಲೆಗಳು ಗುಣಮಟ್ಟದಲ್ಲಿ ಉತ್ತಮವಾಗಿದ್ದರೂ, ವಸತಿ ಶಾಲೆಗಳಿಗೆ ಇನ್ನಷ್ಟು ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
 
ಅವರು ಶುಕ್ರವಾರ ಎಸ್‌ಸಿಸಿಪಿ/ಟಿ.ಎಸ್.ಪಿ ರಾಜ್ಯ ಅಭಿವೃದ್ದಿ ಪರಿಷತ್‌ ಸಭೆಯ ಬಳಿಕ ಚಾಮರಾಜಪೇಟೆಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಅನಿರೀಕ್ಷಿತ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
 
ರಾಜ್ಯದಲ್ಲಿ 833 ವಸತಿ ಶಾಲೆಗಳಿದ್ದು, ಎಲ್ಲಾ ವಸತಿ ಶಾಲೆಗಳಿಗೆ ಸುಸಜ್ಜಿತವಾದ ಕಟ್ಟಡಗಳನ್ನು ಹಂತಹಂತವಾಗಿ ನಿರ್ಮಿಸಲಾಗುತ್ತಿದೆ. ಎಲ್ಲಾ ಆಶ್ರಮ ಶಾಲೆಗಳನ್ನು ವಸತಿ ಶಾಲೆಗಳಾಗಿ ಪರಿರ್ವತಿಸುತ್ತಿದ್ದೇವೆ. ಈ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ  ಉಚಿತ ಊಟ, ವಾಸ್ತವ್ಯ ವ್ಯವಸ್ಥೆ ಮಾತ್ರವಲ್ಲದೆ ಇಂಗ್ಲಿಷ್‌, ವಿಜ್ಞಾನ ಮತ್ತು ಗಣಿತ ವಿಷಯಗಳಲ್ಲಿ ಕೋಚಿಂಗ್‌ ಸಹ ನೀಡುತ್ತಿದ್ದೇವೆ ಎಂದು ಹೇಳಿದರು.
 
ಚಾಮರಾಜಪೇಟೆಯ ಸರ್ಕಾರಿ ಶಾಲೆಯನ್ನು ಪಡೆದು ಮೊರಾರ್ಜಿ ದೇಸಾಯಿ ವಸತಿ ಶಾಲೆಯಾಗಿ ಪರಿವರ್ತಿಸಲಾಗಿದೆ. ಪ್ರಸ್ತುತ ಇಲ್ಲಿ 218 ಮಕ್ಕಳಿದ್ದಾರೆ. ವಿದ್ಯಾರ್ಥಿಗಳ ಜತೆಯಲ್ಲಿ ಮಾಡಿದ ಊಟ, ಸಾಂಬಾರ್ ಚೆನ್ನಾಗಿತ್ತು‌ ಎಂದು ಅವರು ಈ ಸಂದರ್ಭದಲ್ಲಿ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments