Select Your Language

Notifications

webdunia
webdunia
webdunia
webdunia

ಮಗನನ್ನು ಗೆಲ್ಲಿಸುವ ತಾಕತ್ತಿಲ್ಲದ ಕುಮಾರಸ್ವಾಮಿ ತಾನು ಗೆಲ್ಲಲು ಹೇಗೆ ಸಾಧ್ಯ? ಸಿಎಂ ಸಿದ್ದರಾಮಯ್ಯ

Siddaramaiah

Krishnaveni K

ಮಂಡ್ಯ , ಬುಧವಾರ, 27 ಮಾರ್ಚ್ 2024 (16:53 IST)
ಮಂಡ್ಯ: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಂಡ್ಯದಿಂದ ಕಣಕ್ಕಿಳಿಯುತ್ತಿರುವ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಬಗ್ಗೆ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

2019 ರ ಲೋಕಸಭೆ ಚುನಾವಣೆಯಲ್ಲಿ ಪುತ್ರ ನಿಖಿಲ್ ಕುಮಾರಸ್ವಾಮಿ ಮಂಡ್ಯದಿಂದ ಸ್ಪರ್ಧಿಸಿ ಸೋತಿದ್ದರು. ಅಂದು ಮಗನನ್ನೇ ಗೆಲ್ಲಿಸಲಾಗದ ಕುಮಾರಸ್ವಾಮಿ ಈಗ ತಾವು ಹೇಗೆ ಗೆಲ್ಲುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಮೈಸೂರಿನಲ್ಲಿ ಸಮಾವೇಶದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕುಮಾರಸ್ವಾಮಿ ಎಷ್ಟೇ ಭಾವನಾತ್ಮಕ ಕಾರ್ಡ್ ಪ್ಲೇ ಮಾಡಿದರೂ ಈ ಬಾರಿ ಅವರು ಗೆಲ್ಲಲು ಸಾಧ‍್ಯವಿಲ್ಲ. ಮಂಡ್ಯವನ್ನು ತಮ್ಮ ಕರ್ಮಭೂಮಿ ಎನ್ನುತ್ತಿದ್ದಾರೆ. ಹಾಸನದವರಾದ ಕುಮಾರಸ್ವಾಮಿಗೆ ಮಂಡ್ಯ ಹೇಗೆ ಕರ್ಮಭೂಮಿಯಾಗುತ್ತದೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇನ್ನು, ಮಂಡ್ಯದಲ್ಲಿ ಕಾಂಗ್ರೆಸ್ ವೀಕ್ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ ಎಂಬ ಆರೋಪಗಳನ್ನು ಅವರು ತಳ್ಳಿ ಹಾಕಿದ್ದಾರೆ. ಸ್ಟಾರ್ ಚಂದ್ರು ಮಂಡ್ಯ ಕ್ಷೇತ್ರಕ್ಕೆ ಅಪರಿಚಿತರಲ್ಲ. ಅವರು ವೀಕ್ ಅಭ್ಯರ್ಥಿಯಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ತೇಜಸ್ವಿನಿ ಗೌಡ ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ