Webdunia - Bharat's app for daily news and videos

Install App

ಕೇಂದ್ರ ಸರ್ಕಾರದ ಭಾರತ್ ಅಕ್ಕಿ ಕತೆ ಏನಾಯ್ತು: ಸಿಎಂ ಸಿದ್ದರಾಮಯ್ಯ ಕುಹುಕ

Krishnaveni K
ಶನಿವಾರ, 6 ಜುಲೈ 2024 (13:40 IST)
ಬೆಂಗಳೂರು: ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ ರಾಂ ಪುಣ್ಯತಿಥಿ ಅಂಗವಾಗಿ ವಿಧಾನಸೌಧ ಪಶ್ಚಿಮ ದ್ವಾರದ ಬಳಿ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಮಾಧ್ಯಮದವರೊಂದಿಗೆ ಮಾತನಾಡುವಾಗ ಕೇಂದ್ರ ಸರ್ಕಾರದ ಭಾರತ್ ಅಕ್ಕಿ ಕತೆ ಏನಾಯ್ತು ಎಂದು ವ್ಯಂಗ್ಯ ಮಾಡಿದರು.

ಚುನಾವಣೆಗಾಗಿ ಭಾರತ್‌ ಅಕ್ಕಿ: ಸಿಎಂ ಟೀಕೆ
ಕೇಂದ್ರ ಸರ್ಕಾರ ಆರಂಭಿಸಿದ್ದ ʻಭಾರತ್‌ ಅಕ್ಕಿʼ ಯೋಜನೆ ಸ್ಥಗಿತಗೊಳಿಸಿರುವ ಕುರಿತಾಗಿ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಚುನಾವಣೆಗೋಸ್ಕರ ಈ ಯೋಜನೆ ಆರಂಭಿಸಿರುವುದು ಇದರಿಂದ ಸ್ಪಷ್ಟವಾಗುತ್ತದೆ. ನಾವು ಅನ್ನಭಾಗ್ಯ ಯೋಜನೆಗೆ ಅಕ್ಕಿಯನ್ನು ಕೇಳಿದಾಗ, ಭಾರತೀಯ ಆಹಾರ ನಿಗಮದಲ್ಲಿ ದಾಸ್ತಾನಿದ್ದರೂ ನೀಡಲಿಲ್ಲ. ಕೇಂದ್ರ ಸರ್ಕಾರ ಉದ್ದೇಶಪೂರ್ವಕವಾಗಿ ಅಕ್ಕಿ ನೀಡದ ಕಾರಣ ನಾವು ಜನರಿಗೆ ಹೆಚ್ವುವರಿಯಾಗಿ ಹಣ ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು ಎಂದು ಹೇಳಿದರು.

ಭವನ ಲೋಕಾರ್ಪಣೆ: ಸುಮಾರು 3ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಡಾ.ಬಾಬು ಜಗಜೀವನರಾಂ ಭವನವನ್ನು ಜುಲೈ 13ರಂದು ಲೋಕಾರ್ಪಣೆ ಮಾಡಲಾಗುವುದು. ಈ ಹಿಂದೆ ನಮ್ಮ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಈ ಭವನದ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲಾಗಿತ್ತು. ಅರ್ಹ ಅಭ್ಯರ್ಥಿಗಳಿಗೆ ವಿಜ್ಞಾನ, ಕೌಶಲ್ಯ ಅಭಿವೃದ್ಧಿ ತರಬೇತಿಯನ್ನು ಸಹ ಈ ಭವನದಲ್ಲಿ ಒದಗಿಸಲಾಗುವುದು ಎಂದರು.

ಸ್ವಾತಂತ್ರ್ಯ ದೊರೆತ ಸಂದರ್ಭದಲ್ಲಿ ದೇಶದಲ್ಲಿ ತೀವ್ರ ಆಹಾರದ ಕೊರತೆಯುಂಟಾಗಿ, ಬೇರೆ ದೇಶಗಳ ಮುಂದೆ ಬೇಡಬೇಕಾದ ಪರಿಸ್ಥಿತಿ ಇತ್ತು. ಹೊಸ ತಳಿಗಳ ಅಭಿವೃದ್ದಿ ಸೇರಿದಂತೆ ಹಲವು ಕ್ರಮಗಳ ಮೂಲಕ ಜಗಜೀವನರಾಂ ಅವರು ಆಹಾರ ಭದ್ರತೆಯನ್ನು ಒದಗಿಸಿದರು.

ಜಗಜೀವನರಾಂ ಅವರು ರಕ್ಷಣಾ ಇಲಾಖೆ ಸೇರಿದಂತೆ ಯಾವುದೇ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದರೂ, ದಕ್ಷ ಆಡಳಿತ ನೀಡಿದ್ದಾರೆ. ಕಾರ್ಮಿಕರ ಪರವಾಗಿ ಅನೇಕ ಕಾಯ್ದೆಗಳನ್ನು ರಚಿಸಿದ ಕೀರ್ತಿ ಅವರದು. ಬಡವರು, ರೈತರು, ಕೂಲಿ ಕಾರ್ಮಿಕರ ಪರವಾಗಿ ನಿರಂತರವಾಗಿ ಅವರು ಹೋರಾಟ ನಡೆಸಿದ್ದಾರೆ. ಅವರು ತೋರಿದ ಹಾದಿಯಲ್ಲಿ ನಡೆಯುವ ಸಂಕಲ್ಪವನ್ನು ಈ ದಿನ ನಾವು ಮಾಡಬೇಕಾಗಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments