Publish Date: Tue, 21 Apr 2026 (16:46 IST)
Updated Date: Tue, 21 Apr 2026 (16:48 IST)
ಬೆಂಗಳೂರು: ಬಿಟ್ ಕಾಯಿನ್ ಹಗರಣದ ಪ್ರಮುಖ ಆರೋಪಿ ಶ್ರೀಕಿ ಜೊತೆ ವ್ಯವಹಾರ ಹೊಂದಿದ್ದರು ಎಂಬ ಆರೋಪದಲ್ಲಿ ಕಾಂಗ್ರೆಸ್ ಶಾಸಕ ಎನ್ ಎ ಹ್ಯಾರಿಸ್ ಮತ್ತು ಅವರ ಪುತ್ರ ಮೊಹಮ್ಮದ್ ನಲಪಾಡ್ ಮನೆ ಮೇಲೆ ಇಡಿ ದಾಳಿ ಮಾಡಿರುವುದರ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.
ಮೊಹಮ್ಮದ್ ನಲಪಾಡ್ ಮತ್ತು ಎನ್ ಎ ಹ್ಯಾರಿಸ್ ನಿವಾಸಗಳ ಮೇಲೆ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು ಹಲವು ಗಂಟೆಗಳ ಕಾಲ ತಪಾಸಣೆ ನಡೆಸಿ ದಾಖಲೆಗಳನ್ನು ಹೊತ್ತೊಯ್ದಿದ್ದಾರೆ. ಇನ್ನು, ಹಿರಿಯ ಕಾಂಗ್ರೆಸ್ ನಾಯಕ ರೆಹಮಾನ್ ಖಾನ್ ಮೊಮ್ಮಗನ ನಿವಾಸದ ಮೇಲೂ ದಾಳಿ ನಡೆಸಲಾಗಿತ್ತು.
ಈ ಬಗ್ಗೆ ಇಂದು ಚಾಮರಾಜನಗರದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಉತ್ತರಿಸಿದ್ದಾರೆ. ಶಾಸಕ ಹ್ಯಾರೀಸ್ ಅವರ ಪುತ್ರ ನಲಪಾಡ್ ಅವರ ಮನೆ ಮೇಲೆ ಇಡಿ ದಾಳಿ ಮಾಡಿದೆ. ಕೇಂದ್ರ ಸರ್ಕಾರದ ತನಿಖಾ ಸಂಸ್ಥೆಗಳು ಕಾಂಗ್ರೆಸ್ ನವರನ್ನು ಗುರಿಯಾಗಿಸಿ ದಾಳಿ ಮಾಡುತ್ತಿದ್ದು, ಬಿಜೆಪಿಯವರ ಮೇಲೆ ದಾಳಿ ಆಗುತ್ತಿಲ್ಲ ಎಂದು ಅವರು ಕಿಡಿ ಕಾರಿದ್ದಾರೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ