Webdunia - Bharat's app for daily news and videos

Install App

ಮೋದಿ ಈಗ್ಯಾಕೆ ನಮ್ಮ ರಾಜ್ಯಕ್ಕೆ ಬಂದ್ರು ಎಂದು ಪ್ರಶ್ನಿಸಿದ ಸಿದ್ದರಾಮಯ್ಯ

Krishnaveni K
ಶನಿವಾರ, 16 ಮಾರ್ಚ್ 2024 (13:36 IST)
ಬೆಂಗಳೂರು: ಕಲುಬರಗಿಯಲ್ಲಿ ಇಂದು ಬಿಜೆಪಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲು ಬಂದಿರುವ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ.

ಇಂದು ಮಲ್ಲಿಕಾರ್ಜುನ ಖರ್ಗೆ ತವರು ಜಿಲ್ಲೆಯಲ್ಲಿ ಮೋದಿ ಭರ್ಜರಿ ರೋಡ್, ಶೋ ಭಾಷಣ ಮಾಡುತ್ತಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಗೆ ಇದು ಮೋದಿಯ ಮೊದಲ ಪ್ರಚಾರ ಭಾಷಣವಾಗಲಿದೆ. ಮೋದಿ ಸುಮಾರು 2 ಲಕ್ಷ ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಈ ಬಗ್ಗೆ ವ್ಯಂಗ್ಯ ಮಾಡಿರುವ ಸಿಎಂ ಸಿದ್ದರಾಮಯ್ಯ, ಬರ ಬಂದಾಗಲೂ ಬರಲಿಲ್ಲ, ನೆರೆ ಬಂದಾಗಲೂ ಬರಲಿಲ್ಲ. ಈಗ ಮೋದಿ ಯಾಕೆ ನಮ್ಮ ರಾಜ್ಯಕ್ಕೆ ಬರ್ತಿದ್ದಾರೆ ಎಂದು ಟಾಂಗ್ ಕೊಟ್ಟಿದ್ದಾರೆ. ಈ ಮೊದಲು ನಮ್ಮ ತೆರಿಗೆ ನಮ್ಮ ಹಕ್ಕು ಅಭಿಯಾನ ಮಾಡಿದ್ದ ಸಿಎಂ ಸಿದ್ದರಾಮಯ್ಯ ಕೇಂದ್ರದ ವಿರುದ್ಧ ತೆರಿಗೆ ಹಂಚಿಕೆ ತಾರತಮ್ಯ ಆರೋಪ ಮಾಡಿದ್ದರು.

ಅಷ್ಟೇ ಅಲ್ಲದೆ, ಕೇಂದ್ರ ಸರ್ಕಾರ ಬರ ಪರಿಹಾರ ನೀಡುವಂತೆ ಕೇಳಿದರೂ ಕೊಡಲಿಲ್ಲ ಎಂದು ಆರೋಪಿಸಿದ್ದರು. ಇದೀಗ ಇದೇ ವಿಚಾರಕ್ಕೆ ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ನಮ್ಮ ರಾಜ್ಯಕ್ಕೆ ಸಹಾಯ ಬೇಕಾದಾಗ ಬರಲಿಲ್ಲ, ಈಗ ತಮ್ಮ ರಾಜಕೀಯ ಉದ್ದೇಶಕ್ಕೆ ಬಂದಿದ್ದಾರೆ ಎಂದು ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments