Select Your Language

Notifications

webdunia
webdunia
webdunia
webdunia

ರಾಹುಲ್ ಗಾಂಧಿ ಹೇಳಿದ್ದಾರೆ, ನಾವು ಎಕ್ಸಿಟ್ ಪೋಲ್ ನಂಬಲ್ಲ: ಸಿಎಂ ಸಿದ್ದರಾಮಯ್ಯ

siddaramaiah
ಬೆಂಗಳೂರು: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟ ಬಹುತಮ ಸಾಧಿಸಿ ಅಧಿಕಾರಕ್ಕೇರಲಿದೆ ಎಂದಿರುವ ಸಿಎಂ ಸಿದ್ದರಾಮಯ್ಯ ರಾಹುಲ್ ಗಾಂಧಿಯವರೇ ಹೇಳಿದ್ದಾರೆ ಎಕ್ಸಿಟ್ ಪೋಲ್ ಎಲ್ಲಾ ನಾವು ಒಪ್ಪಲ್ಲ ಎಂದಿದ್ದಾರೆ.

 
ಅವರು ಇಂದು ವಿಧಾನಸೌಧದಲ್ಲಿ ವಿಧಾನಪರಿಷತ್ ಚುನಾವಣೆಗೆ ತಮ್ಮ ಪಕ್ಷದ ಅಭ್ಯರ್ಥಿಯ ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. 

ಚುನಾವಣೋತ್ತರ ಸಮೀಕ್ಷೆಯ  ಬಗ್ಗೆ ಪ್ರತಿಕ್ರಿಯೆ ನೀಡಿ ಈಗಾಗಲೇ ಪಕ್ಷದ ವರಿಷ್ಠ ರಾಹುಲ್ ಗಾಂಧಿ ಅವರು ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ನಾವು ಕನಿಷ್ಠ 15 ಸ್ಥಾನಗಳನ್ನು ಗೆಲ್ಲುತ್ತೇವೆ. ಈ ಸಮೀಕ್ಷೆಯನ್ನು  ನಾವು ಸಂಪೂರ್ಣ ತಳ್ಳಿಹಾಕುತ್ತೇವೆ ಎಂದು ತಿಳಿಸಿದರು.


ಬೆಂಗಳೂರಿನಲ್ಲಿ ಉತ್ತಮ ಮಳೆ
 
ಬೆಂಗಳೂರಿನಲ್ಲಿ ಒಳ್ಳೆ ಮಳೆಯಾಗಿದ್ದು,  ಮಳೆಗೆ ಸಂಬಂಧಿಸಿದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಈಗಾಗಲೇ ಸೂಚಿಸಲಾಗಿದೆ. ಮಳೆ ಜಾಸ್ತಿಯಾದಾಗ  ಸಮಸ್ಯೆಗಳು ಉಂಟಾಗಿವೆ. ಗುಂಡಿಗಳನ್ನು ಮುಚ್ಚಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದರು. 
 


ಇನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡಾ ಇದೇ ಹೇಳಿಕೆ ನೀಡಿದ್ದಾರೆ. ನಾವು ಎಕ್ಸಿಟ್ ಪೋಲ್ ಗಳನ್ನೆಲ್ಲಾ ನಂಬಲ್ಲ. ಈ ಬಾರಿ ಇಂಡಿಯಾ ಒಕ್ಕೂಟ ಬಹುತಮ ಪಡೆದು ಸರ್ಕಾರ ರಚಿಸಲಿದೆ ಎಂದು ಡಿಕೆಶಿ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಪಹರಣ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ಭವಾನಿ ರೇವಣ್ಣ