ದೇವೇಗೌಡರು ನನ್ನ ಗರ್ವಭಂಗ ಮಾಡುತ್ತೇನೆ ಎನ್ನುವುದು ಸರಿಯಾ: ಜಮೀರ್ ಸಮರ್ಥಿಸಿದ ಸಿದ್ದರಾಮಯ್ಯ

Krishnaveni K
ಬುಧವಾರ, 13 ನವೆಂಬರ್ 2024 (14:16 IST)
ಬೆಂಗಳೂರು: ಇತ್ತೀಚೆಗೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರನ್ನು ಸಚಿವ ಜಮೀರ್ ಅಹ್ಮದ್ ಕರಿಯಾ ಎಂದಿದ್ದನ್ನು ಸಮರ್ಥಿಸಿಕೊಂಡ ಸಿಎಂ ಸಿದ್ದರಾಮಯ್ಯ ದೇವೇಗೌಡರು ನನ್ನ ಗರ್ವಭಂಗ ಮಾಡುತ್ತೇನೆ ಎಂದಿದ್ದು ಸರಿಯಾ ಎಂದಿದ್ದಾರೆ.

ಮೊನ್ನೆ ಚನ್ನಪಟ್ಟಣದಲ್ಲಿ ಚುನಾವಣಾ ಪ್ರಚಾರದ ವೇಳೆ ಜಮೀರ್ ಅಹ್ಮದ್ ಭಾಷಣ ಮಾಡುವಾಗ ಕಾಲಾ (ಕರಿಯಾ) ಕುಮಾರಸ್ವಾಮಿ ಎಂದು ಜನಾಂಗೀಯವಾಗಿ ನಿಂದನೆ ಮಾಡಿದ್ದರು. ಇದರ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾದ ಬಳಿಕ ಜಮೀರ್ ಕ್ಷಮೆ ಯಾಚಿಸಿದ್ದರು.

ಇದೀಗ ಸಿಎಂ ಸಿದ್ದರಾಮಯ್ಯಗೆ ಈ ಬಗ್ಗೆ ಪ್ರಶ್ನೆ ಮಾಡಿದಾಗ ‘ನನ್ನನ್ನು ದೇವೇಗೌಡರು ಸೊಕ್ಕು ಮುರಿಯತ್ತೇನೆ, ಗರ್ವಭಂಗ ಮಾಡುತ್ತೇನೆ ಎಂದಿದ್ದು ಸರಿಯಾ. ಜಮೀರ್ ಮತ್ತು ಕುಮಾರಸ್ವಾಮಿ ಥಿಕ್ ಆಂಡ್ ಥಿನ್ ಫ್ರೆಂಡ್ಸ್. ಅವರವರ ನಡುವೆ ಏನೋ ನಡೆಯುತ್ತಿರುತ್ತದೆ. ಈ ವಿಚಾರದ ಬಗ್ಗೆ ಜಮೀರ್ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಇದೆಲ್ಲಾ ಉಪಚುನಾವಣೆ ಮೇಲೆ ಪರಿಣಾಮ ಬೀರಲ್ಲ’ ಎಂದಿದ್ದಾರೆ.

ಇನ್ನು ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಆರೋಪಗಳ ಬಗ್ಗೆಯೂ ಅವರು ಪ್ರತಿಕ್ರಿಯೆ ನೀಡಿದರು. ಅಬಕಾರಿ ಇಲಾಖೆಯಲ್ಲಿ ಒಂದೇ ಒಂದು ಪೈಸೆ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಸಾಬೀತಾದರೂ ನಾನು ರಾಜಕೀಯ ಬಿಡುತ್ತೇನೆ ಎಂದು ಅವರು ಶಪಥ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಲಕ್ಷ್ಮಿ ಹಣ ನಡುವೆ ಎರಡು ತಿಂಗಳು ಕೊಡದಿರುವುದಕ್ಕೆ ಕಾರಣವೇನು: ಸರ್ಕಾರಕ್ಕೆ ಬಿಜೆಪಿ ಸದನದಲ್ಲಿ ಲೆಫ್ಟ್ ರೈಟ್

ಸೋನಿಯಾ ಗಾಂಧಿ ಕುಟುಂಬದ ಜೊತೆ ನಾವಿದ್ದೇವೆ: ಬೀದಿಗಿಳಿದು ಹೋರಾಟ ಮಾಡಿದ ಸಿದ್ದರಾಮಯ್ಯ ಮತ್ತು ಕೈ ನಾಯಕರು

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

ಡಾ ಸಿನ್ ಮಂಜುನಾಥ್ ಯಾವಾಗಲೂ ಹೇಳುವ ಆರು ಔಷಧಿಗಳು ಇವು

ಮುಂದಿನ ಸುದ್ದಿ
Show comments