Select Your Language

Notifications

webdunia
webdunia
webdunia
webdunia

ಅನ್ನಕ್ಕಾಗಿ ಬೇರೆಯವರ ಮನೆ ಮುಂದೆ ಕಾದು ನಿಲ್ಲುತ್ತಿದ್ದೆ: ಹಳೆಯದನ್ನು ನೆನೆಸಿದ ಸಿಎಂ ಸಿದ್ದರಾಮಯ್ಯ

Siddaramaiah

Krishnaveni K

ಮೈಸೂರು , ಶನಿವಾರ, 28 ಸೆಪ್ಟಂಬರ್ 2024 (16:15 IST)
ಮೈಸೂರು: ಹೊಟ್ಟೆ ತುಂಬ ಹಿಟ್ಟು-ಬಾಯಿ ತುಂಬ ಅನ್ನ ಎಂದು ನನ್ನಮ್ಮ ಹೇಳುತ್ತಿದ್ದರು. ನಾನು ಅನ್ನ ಭಾಗ್ಯ ಜಾರಿಗೆ ತರಲು ಅನ್ನಕ್ಕಾಗಿ ಕಾದು ನಿಂತ ಪರಿಸ್ಥಿತಿಯೇ ಕಾರಣ ಎಂದು ಮುಖ್ಯಮಂತ್ರಿಗಳು ತಮ್ಮ ಬಾಲ್ಯದ  ದಿನಗಳನ್ನು ಸ್ಮರಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ವಿಶ್ವವಿದ್ಯಾನಿಲಯ ಮಾನಸಗಂಗೋತ್ರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ "ಗ್ಯಾರಂಟಿ ಯೋಜನೆಗಳು: ಬಡವರ ಸುರಕ್ಷತೆ ಮತ್ತು ಕಲ್ಯಾಣ" ಕೃತಿ ಬಿಡುಗಡೆ ಮಾಡಿ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

1949 ನವೆಂಬರ್ 25 ರಂದು ಸಂವಿಧಾನ ಜಾರಿ ಸಭೆಯಲ್ಲಿ ಮಾಡಿದ ಭಾಷಣ ನನ್ನ ಗ್ಯಾರಂಟಿಗಳಿಗೆ ಸ್ಫೂರ್ತಿ.‌ ಅವಕಾಶಗಳಿಂದ ವಂಚಿತರಾಗಿರುವವರಿಗೆ ಸಮಾನ ಅವಕಾಶಗಳು ಸಿಕ್ಕಾಗ ಸಮ ಸಮಾಜ ನಿರ್ಮಾಣ ಸಾಧ್ಯ. ಬಸವಾದಿ ಶರಣರು, ಬುದ್ದ ಕೂಡ ಸಮ ಸಮಾಜದ ಬಗ್ಗೆ ಹೇಳಿದ್ದಾರೆ. ಕೇವಲ ಭಾಷಣಳಿಂದ ಸಮ ಸಮಾಜದ ಆಶಯ ಈಡೇರಲ್ಲ. ಈ ಕಾರಣಕ್ಕೇ ಮೊದಲ ಬಾರಿ ಮುಖ್ಯಮಂತ್ರಿ ಆದಾಗಲೂ ಹಲವು ಭಾಗ್ಯಗಳನ್ನು ಜಾರಿ ಮಾಡಿದೆ ಎನ್ನುತ್ತಾ ತಮ್ಮ ಬಾಲ್ಯದ ಬಡತನದ ದಿನಗಳನ್ನು ಸ್ಮರಿಸಿದರು.

ಹಬ್ಬ ಬಂದಾಗ ಮಾತ್ರ ನಮ್ಮ ಮನೆಯಲ್ಲಿ ಅನ್ನ ಮಾಡ್ತಿದ್ರು. ಅಕ್ಕ ಪಕ್ಕದವರ ಮನೆಯಲ್ಲಿ ಯಾರಿಗಾದ್ರೂ ಹುಷಾರು ತಪ್ಪಿದರೆ ಅವರಿಗೆ ಅನ್ನ ಮಾಡ್ತಿದ್ರು. ಅವರ ಮನೆ ಬಾಗಿಲಲ್ಲಿ ಒಂದು ತುತ್ತು ಅನ್ನಕ್ಕಾಗಿ ಕಾದು ನಿಂತಿದ್ದ ದಿನಗಳು ಇದ್ದವು‌. ಹೀಗೆ ಅನ್ನಕ್ಕೆ ಯಾರೂ ಕಾದು ನಿಲ್ಲಬಾರದು ಎನ್ನುವ ಕಾರಣಕ್ಕೆ ಅನ್ನಭಾಗ್ಯ ಜಾರಿಗೆ ತಂದದ್ದನ್ನು ವಿವರಿಸಿದರು.

ಜಾತಿ ಕಾರಣಕ್ಕಾಗಿ ಸಮಾಜದಲ್ಲಿ ಆರ್ಥಿಕ‌ ಅಸಮಾನತೆ ಸೃಷ್ಟಿ ಆಯಿತು. ಆದ್ದರಿಂದ ಎಲ್ಲರಿಗೂ ಆರ್ಥಿಕ ಶಕ್ತಿ ಕೊಡುವ ಕಾರಣಕ್ಕೆ 2013-18 ರ ವರೆಗೆ ಹಲವು ಕಾರ್ಯಕ್ರಮಗಳನ್ನು ಜಾರಿ ಮಾಡಿದೆವು. ಹಾಗೆಯೇ ಎರಡನೇ ಬಾರಿ ಮುಖ್ಯಮಂತ್ರಿ ಆದಾಗಲೂ ಗ್ಯಾರಂಟಿಗಳ ಮೂಲಕ ಆರ್ಥಿಕ ಶಕ್ತಿ ನೀಡಿದೆವು ಎಂದರು.

ನಮ್ಮ ಭಾಗ್ಯಗಳನ್ನು,  ಗ್ಯಾರಂಟಿಗಳನ್ನು ವಿರೋಧಿಗಳು ಆಡಿಕೊಂಡರು. ಈಗಲೂ ಅಪ ಪ್ರಚಾರ ಮಾಡುತ್ತಿದ್ದಾರೆ.  ಆದರೆ ನಾನು ಹೋದಲ್ಲಿ ಬಂದಲ್ಲಿ ಗ್ಯಾರಂಟಿಗಳ ಫಲಾನುಭವಿಗಳು ಕಾಂಗ್ರೆಸ್ ಸರ್ಕಾರಕ್ಕೆ ಧನ್ಯತೆ ಅರ್ಪಿಸುತ್ತಿದ್ದಾರೆ ಎನ್ನುತ್ತಾ ಉಚಿತ ಯೋಜನೆಗಳ ಫಲಾನುಭವಿಗಳು ಗೃಹಲಕ್ಷ್ಮಿ ಹಣದಲ್ಲಿ  ಮಾಡಿದ ಸಾಧನೆಗಳನ್ನು ವಿವರಿಸಿದರು.

ನರೇಗಾ ಮತ್ತು ಅನ್ನಭಾಗ್ಯ ಯೋಜನೆಗಳು ಕೊರೋನಾ ಸಂದರ್ಭದಲ್ಲಿ ಬಡವರನ್ನು, ಕೆಳ ಮಧ್ಯಮ ವರ್ಗದವರನ್ನು ಬದುಕಿಸಿತು. ಹೀಗಾಗಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಹೆಚ್ಚೆಚ್ಚು ಮಾತಾಡಬೇಕು ಎಂದರು. ಅನ್ನಭಾಗ್ಯದ ಮೇಲೆ "ಅನ್ನ" ಅಂತಲೇ ಸಿನಿಮಾ ಬಂದಿದೆ. ನಾನೂ ಸಿನಿಮಾ ನೋಡಿದೆ ಎಂದರು.

ಗ್ಯಾರಂಟಿ ಯೋಜನೆಗಳು ಪ್ರಜಾತಂತ್ರವನ್ನು ಗಟ್ಟಿಗೊಳಿಸಿವೆ.  ಡಾ.ಬಿ.ಆರ್.ಅಂಬೇಡ್ಕರ್ ಆಶಯವನ್ನು ಘೋಷಿಸದೇ ಈಡೇರಿಸಿವೆ. ಬಡವರಿಗೆ ಈ ಗ್ಯಾರಂಟಿಗಳು ಸಾಮಾಜಿಕವಾಗಿ ಚಾಲನಾ ಸಾಮರ್ಥ್ಯವನ್ನು ನೀಡಿವೆ. ಸಿದ್ದರಾಮಯ್ಯ ಅವರು ಸೂಕ್ಷ್ಮ ಮನಸ್ಸಿನ ನಾಯಕರು. ಇವರಿಂದ ಮಾತ್ರ ಸಮಾಜಕ್ಕೆ ಈ ಚಾಲನಾ ಸಾಮರ್ಥ್ಯ ನೀಡಲು ಸಾಧ್ಯ. ಹಸಿದವರ ಹೊಟ್ಟೆಗೆ ಅನ್ನ ಕೊಡುವುದೇ ದೇವರಿಗೆ ಕೊಡುವ ಕಾಣಿಕೆ. ಇದನ್ನು ನಾವು ಪ್ರಾಮಾಣಿಕವಾಗಿ ಒಪ್ಪಿ, ಸಾರ್ವಜನಿಕವಾಗಿ ಹೇಳಬೇಕಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಸಿದ್ದರಾಮಯ್ಯ ಬಳಿಕ ಆಪ್ತ ಜಮೀರ್ ಅಹ್ಮದ್ ಗೂ ಬಲೆ ಹೆಣೆದ ಟಿಜೆ ಅಬ್ರಹಾಂ