Select Your Language

Notifications

webdunia
webdunia
webdunia
webdunia

ದೀಪಾವಳಿಗೆ ಪಟಾಕಿ ಹೊಡೆಯಲು ರೂಲ್ಸ್ ಮಾಡಿದ ಸಿಎಂ ಸಿದ್ದರಾಮಯ್ಯ

Siddaramaiah

Krishnaveni K

ಬೆಂಗಳೂರು , ಶನಿವಾರ, 26 ಅಕ್ಟೋಬರ್ 2024 (15:43 IST)
ಬೆಂಗಳೂರು: ದೀಪಾವಳಿ ಹಬ್ಬ ಹತ್ತಿರ ಬಂದಿದ್ದು, ಮತ್ತೆ ಪಟಾಕಿ ಹೊಡೆಯುವ ವಿಚಾರದಲ್ಲಿ ರಾಜ್ಯ ಸರ್ಕಾರ ಕೆಲವೊಂದು ನಿಯಮ ರೂಪಿಸಿದೆ. ದೀಪಾವಳಿ ಹಬ್ಬದಲ್ಲಿ ಹಸಿರು ಪಟಾಕಿ ಮಾತ್ರ ಹೊಡೆಯಲು ಅವಕಾಶ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ದೀಪಾವಳಿ ಹಬ್ಬ ಬಂತೆಂದರೆ ಸಾಕು ಹೋದಲ್ಲಿ ಬಂದಲ್ಲಿ ಪಟಾಕಿ ಹೊಡೆಯುವವರೇ ಹೆಚ್ಚು. ಇದರಿಂದಾಗಿ ವಾಯು ಮಾಲಿನ್ಯವಾಗುತ್ತದೆ. ಜೊತೆಗೆ ಪ್ರಾಣಿ ಪಕ್ಷಿಗಳಿಗೂ ತೊಂದರೆಯಾಗುತ್ತದೆ. ಈ ಕಾರಣಕ್ಕೆ ಸರ್ಕಾರ ನಿಯಂತ್ರಣ ಹೇರುತ್ತಲೇ ಇರುತ್ತದೆ. ಆದರೂ ಕೆಲವರು ನಿಯಮ ಮೀರಿ ಪಟಾಕಿ ಹೊಡೆಯುತ್ತಾರೆ.

ಈ ಬಾರಿ ದೀಪಾವಳಿಗೆ ಹಸಿರು ಪಟಾಕಿಗೆ ಮಾತ್ರ ಅವಕಾಶ ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಆಗಿ ಹೇಳಿದ್ದಾರೆ. ಪರಿಸರ ಮಾಲಿನ್ಯ ಮತ್ತು ಶಬ್ಧ ಮಾಲಿನ್ಯ ತಗ್ಗಿಸುವ ದೃಷ್ಟಿಯಿಂದ ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಲಾಗುತ್ತದೆ ಎಂದಿರುವ ಸಿಎಂ ಪಟಾಕಿ ಅವಘಡಗಳಾಗದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇಂದು ಜಿಲ್ಲಾ ಪೊಲೀಸ್ ಅಧಿಕಾರಿಗಳು, ಅಧಿಕಾರಿಗಳ ಜೊತೆಗಿನ ಸಭೆಯಲ್ಲಿ ಅವರು ಈ ಸೂಚನೆಗಳನ್ನು ನೀಡಿದ್ದಾರೆ. ರಾತ್ರಿ 8 ರಿಂದ 10 ರವರೆಗೆ ಮಾತ್ರ ಪಟಾಕಿ ಹಚ್ಚಲು ಅವಕಾಶ ನೀಡಬೇಕು. ಪಟಾಕಿ ದಾಸ್ತಾನು ಮಾಡುವ ಗೋದಾಮುಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಬೇಕು. ನಿಯಮ ಮೀರಿದರೆ ಕ್ರಿಮಿನಲ್ ಕೇಸ್ ಹಾಕಬೇಕು ಎಂದು ಸಿಎಂ ಸೂಚನೆ ನೀಡಿದ್ದಾರೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಶಿಗ್ಗಾಂವಿ ಅಸಮಾಧಾನಕ್ಕೆ ಮುಲಾಮು ಹಚ್ಚಿದ ಸಿಎಂ ಸಿದ್ದರಾಮಯ್ಯ: ಸಾಥ್ ನೀಡಿದ ಜಮೀರ್ ಅಹ್ಮದ್