Select Your Language

Notifications

webdunia
webdunia
webdunia
webdunia

ಎಡವಟ್ಟು ಮಾಡಿ, ಸುಳ್ಳು ಹೇಳೋದು ಸಿಎಂ ಸಿದ್ದರಾಮಯ್ಯ ದಿನಚರಿ: ಆರ್‌ ಅಶೋಕ್‌ ವ್ಯಂಗ್ಯ

Chief Minister Siddaramaiah

Sampriya

ಬೆಂಗಳೂರು , ಮಂಗಳವಾರ, 12 ನವೆಂಬರ್ 2024 (14:28 IST)
ಬೆಂಗಳೂರು:  ಕಾಮಗಾರಿಯಲ್ಲಿ ಮುಸ್ಲಿಂರಿಗೆ ಮೀಸಲಾತಿ ಸರ್ಕಾರದ ಮುಂದೆ ಪ್ರಸ್ತಾವನೆಯೇ ಇಲ್ಲ ಎಂದು ಹಸಿ ಸುಳ್ಳು ಹೇಳುತ್ತಿರುವ ಸಿಎಂ ಸಿದ್ದರಾಮಯ್ಯಗೆ ಕಿಂಚಿತ್ತಾದರೂ ಆತ್ಮಸಾಕ್ಷಿ, ನೈಕಿಕತೆ ಅನ್ನುವುದೇ ಇಲ್ಲವೇ ಎಂದು ವಿಪಕ್ಷ ಆರ್‌ ಅಶೋಕ್‌ ಆಕ್ರೋಶ ಹೊರಹಾಕಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಆರ್ ಅಶೋಕ್ ಅವರು ಪೋಸ್ಟ್ ಹಾಕಿದ್ದಾರೆ.

ಸ್ವಾಮಿ ಮುಖ್ಯಮಂತ್ರಿಗಳೇ, ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಪ್ರಸ್ತಾವನೆಯೇ ಸರ್ಕಾರದ ಮುಂದಿಲ್ಲ ಎಂದು ಸತ್ಯದ ತಲೆಯ ಮೇಲೆ ಹೊಡೆದ ಹಾಗೆ ಸುಳ್ಳು ಹೇಳುತ್ತೀರಲ್ಲಾ, ತಮ್ಮ ಭಂಡತನಕ್ಕೆ ಏನು ಹೇಳೋಣ?


ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ 4% ಮೀಸಲಾತಿ ಕೊಡಬೇಕು ಎಂದು ತಮ್ಮ ರಾಜಕೀಯ ಕಾರ್ಯದರ್ಶಿ ನಾಸೀರ್ ಅಹ್ಮದ್, ಸಚಿವ ಜಮೀರ್ ಅಹ್ಮದ್ ಖಾನ್ ಸೇರಿದಂತೆ ಮುಸ್ಲಿಂ ಶಾಸಕರು ಆಗಸ್ಟ್ 24, 2024 ರಂದು ತಮಗೆ ಪತ್ರ ಬರೆಯುತ್ತಾರೆ. ತಾವು ಅದೇ ದಿನವೇ ಈ ಪತ್ರವನ್ನ ಪರಿಶೀಲಿಸಿ ಮಂಡಿಸಿ ಎಂದು ಆರ್ಥಿಕ ಇಲಾಖೆಗೆ ನಿರ್ದೇಶನ ನೀಡಿದ್ದೀರಿ. ಈ ಸಂಬಂಧ ಕೆಟಿಪಿಪಿ ಕಾಯ್ದೆಗೆ ತಿದ್ದುಪಡಿ ತರಲೂ ಸಹ ತಾವು ಅನುಮೋದನೆ ನೀಡಿದ್ದೀರಿ.

ಇಷ್ಟೆಲ್ಲಾ ಪತ್ರ ವ್ಯವಹಾರ ನಡೆದಿದ್ದರೂ ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಪ್ರಸ್ತಾವನೆಯೇ ಸರ್ಕಾರದ ಮುಂದಿಲ್ಲ ಎಂದು ಹಸಿ ಸುಳ್ಳು ಹೇಳುತ್ತಿರಲ್ಲ, ತಮಗೆ ಕಿಂಚಿತ್ತಾದರೂ ಆತ್ಮಸಾಕ್ಷಿ, ನೈತಿಕತೆ ಅನ್ನುವುದೇ ಇಲ್ಲವೇ?

ಸತ್ಯದ ಮೇಲೆ ಪ್ರಮಾಣ ವಚನ ಸ್ವೀಕರಿಸಿ, ಬಾಯಿ ಬಿಟ್ಟರೆ ಬರಿ ಸುಳ್ಳು ಹೇಳುವ ತಮ್ಮನ್ನ ಆ ತಾಯಿ ಚಾಮುಂಡೇಶ್ವರಿ ಮೆಚ್ಚುತ್ತಾಳಾ? ತಮ್ಮನ್ನ ನಂಬಿ ಮತ ಹಾಕಿ ಅಧಿಕಾರ ಕೊಟ್ಟ ಕನ್ನಡಿಗರು ಕ್ಷಮಿಸುತ್ತಾರಾ?

Share this Story:

Follow Webdunia kannada

ಮುಂದಿನ ಸುದ್ದಿ

ದಾರಿ ತಪ್ಪಿದ ಮಗ: ಕೊಲ್ಲಲು ಅನುಮತಿ ಕೊಡಿ ಇಲ್ಲವೇ ಜೈಲಿಗೆ ಹಾಕಿ ಎಂದ ತಾಯಿ