ಬೆಂಗಳೂರು: ಜಾತಿ ಗಣತಿ ಸಮೀಕ್ಷೆ ಬಗ್ಗೆ ಸಾಕಷ್ಟು ಗೊಂದಲ ನಡುವೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ ಸಮೀಕ್ಷೆಯನ್ನು ಮುಂದೂಡಲ್ಲ ಎಂದು ಸ್ಪಷ್ಟನೆಯನ್ನು ನೀಡಿದರು.
ಈ ಸಂಬಂಧ ಬೆಂಗಳೂರಿನಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಅವರು, ನಾವು ನಿರ್ದೇಶನಕ್ಕೆ ಕೊಡುವುದಕ್ಕೆ ಬರುವುದಿಲ್ಲ. ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಆದರೆ ಜಾತಿಗಣತಿ ವಿಚಾರ ನಾವು ಮುಂದೂಡವುದಕ್ಕೆ ಸಾಧ್ಯವಿಲ್ಲ ಎಂದರು.
ಕ್ಯಾಬಿನೆಟ್‌ನಲ್ಲಿ ಸಚಿವರ ಅಸಮಾಧಾನದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಬಿಜೆಪಿ ಅವರು ರಾಜಕೀಯ ಮಾಡುತ್ತಿದ್ದಾರೆ. ನೀವು ಕೂಡ ರಾಜಕೀಯವಾಗಿ ಎದುರಿಸಬೇಕು. ಅದನ್ನ ಖಂಡಿಸಬೇಕು ಎಂದು ಸಚಿವರಿಗೆ ಹೇಳಿದ್ದೇನೆ ಎಂದಿದ್ದಾರೆ.
ಗುರುವಾರ (ಸೆ.18) ನಡೆದ ಕ್ಯಾಬಿನೆಟ್‌ನಲ್ಲಿ ಜಾತಿಗಣತಿಯಿಂದ ಸರ್ಕಾರಕ್ಕೆ ಯಾವುದೇ ಹಾನಿಯಾಗಬಾರದು. ಹೊಸ ಜಾತಿಗಳ ಸೇರ್ಪಡೆಯಿಂದ ಗೊಂದಲ ಸೃಷ್ಟಿಯಾಗಿದೆ. ಈ ಗೊಂದಲವನ್ನು ಸರಿಪಡಿಸದ ಹೊರತು ಜಾತಿಗಣತಿ ಬೇಡ. ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಅಂತಾ ಜನರಿಗೆ ಮನವರಿಕೆ ಮಾಡಿ ಕೊಡಲು ಸಾಧ್ಯವಿದ್ಯಾ? ಜಾತಿಗಣತಿ ಮುಂದೂಡುವಂತೆ ಡಿಕೆಶಿ ಸೇರಿದಂತೆ 20ಕ್ಕೂ ಹೆಚ್ಚು ಸಚಿವರು ಹೇಳಿದ್ದರು.