ಬೆಂಗಳೂರು: ಮುಡಾ ಹಗರಣದ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯಗೆ ನವೆಂಬರ್ 8ರಂದು ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಈ ಸಂಬಂಧ ಪ್ರತಿಕ್ರಿಯಿಸಿ ಹಾವೇರಿಯಲ್ಲಿ ಪ್ರತಿಕ್ರಿಯಿಸಿ ಸಿಎಂ ಸಿದ್ದರಾಮಯ್ಯ ಅವರು, ವಿಚಾರಣೆಗೆ ಹಾಜರಾಗುತ್ತೇನೆ ಎಂದು ತಿಳಿಸಿದರು.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣದ ತನಿಖೆ ಅಂತಿಮ ಘಟ್ಟಕ್ಕೆ ಬಂದು ತಲುಪಿದೆ. ಈಗಾಗಲೇ ಪ್ರಕರಣದ ಉಳಿದ ಆರೋಪಿಗಳ ವಿಚಾರಣೆ ನಡೆಸಿರುವ ಲೋಕಾಯುಕ್ತ, ಇದೀಗ ಸಿಎಂ ಗೆ ನೋಟಿಸ್ ಜಾರಿ ಮಾಡಿದೆ.
ಈ ಮೂಲಕ ಸಿಎಂ ಸಿದ್ದರಾಮಯ್ಯ ತಮ್ಮ 40 ವರ್ಷದ ರಾಜಕೀಯ ಜೀವನದಲ್ಲಿ ಮೊದಲ ಬಾರಿಗೆ ಪ್ರಕರಣವೊಂದರ ಆರೋಪಿಯಾಗಿ ವಿಚಾರಣೆ ಎದುರಿಸಬೇಕಾಗಿ ಬಂದಿದೆ. ಸಿಎಂ ಪತ್ನಿ ಪಾರ್ವತಿ ಅವರು ವಿಚಾರಣೆ ಎದುರಿಸಿದ ಬೆನ್ನಲ್ಲೆ ಸಿಎಂಗೆ ವಿಚಾರಣೆ ಎದುರಾಗಿದೆ. ಮುಡಾ ಹಗರಣ ಸಂಬಂಧ ಮೈಸೂರಿನ ಲೋಕಾಯುಕ್ತ ಪೊಲೀಸರು ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಬಿಎಂ ಪಾರ್ವತಿ, ಸೋದರ ಮಾವ ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು ಅವರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.