Publish Date: Tue, 31 Oct 2017 (12:36 IST)
Updated Date: Tue, 31 Oct 2017 (12:40 IST)
ಪ್ರಧಾನಿ ನರೇಂದ್ರ ಮೋದಿಯವರಿಗೆ ನನ್ನ ಕಂಡ್ರೆ ಭಯ ಎಂದು ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯರದ್ದು ಮೂರ್ಖತನದ ಪರಮಾವಧಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾನ್ಯ ಮುಖ್ಯಮಂತ್ರಿಯಾಗಿ ಇಂತಹ ಹೇಳಿಕೆ ನೀಡಬಾರದು. ಸಿಎಂ ಸಿದ್ದರಾಮಯ್ಯ ಸೊಕ್ಕಿನಿಂದ ವರ್ತಿಸುತ್ತಿದ್ದಾರೆ ಎಂದು ಗುಡುಗಿದ್ದಾರೆ.
ಪ್ರಧಾನಿ ಮೋದಿ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾಗ ಉಪವಾಸ ಮಾಡಿ ದೇವರ ದರ್ಶನ ಮಾಡಿದರು. ನಂತರ ಉಪಹಾರ ಸೇವಿಸಿದರು. ಆದರೆ ಈ ಮನುಷ್ಯ ಮೀನು, ಕೋಳಿ ತಿಂದು ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾನೆ. ಇಂತಹ ಮುಖ್ಯಮಂತ್ರಿ ರಾಜ್ಯಕ್ಕೆ ಸಿಕ್ಕಿರುವುದು ದುರ್ದೈವ ಎಂದು ಬೇಸರ ವ್ಯಕ್ತಪಡಿಸಿದರು.
ವಿದ್ಯುತ್ ಖರೀದಿ ಅವ್ಯವಹಾರ ಕುರಿತಂತೆ ನನ್ನ ಮತ್ತು ಸಂಸದೆ ಶೋಭಾ ಕರಂದ್ಲಾಜೆ ಮೇಲೆ ಕೇಸ್ ದಾಖಲಿಸಲು ಸಿಎಂ ಸಿದ್ದರಾಮಯ್ಯ ಸಂಚು ರೂಪಿಸಿದ್ದಾರೆ. ಆದರೆ, ಇಂತಹ ಸಂಚುಗಳಿಗೆ ನಾವು ಬೆದರುವುದಿಲ್ಲ ಎಂದು ಬಿದೆಪಿ ರಾಜ್ಯಾಧ್ಯಕ್ಷ ಬಿಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.