Publish Date: Thu, 26 Oct 2017 (18:25 IST)
Updated Date: Thu, 26 Oct 2017 (18:27 IST)
ಬ್ರಾಹ್ಮಣ ಪ್ರಾಧಿಕಾರ ರಚನೆಗೆ ಸಿಎಂ ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ ಎಂದು ಸರಕಾರಿ ಮೂಲಗಳು ತಿಳಿಸಿವೆ.
ಬ್ರಾಹ್ಮಣ ಸಮುದಾಯದಲ್ಲಿರುವ ಬಡವರ ಏಳಿಗೆಗಾಗಿ ಪ್ರಾಧಿಕಾರ ರಚಿಸುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಸಿಎಂ ಸಿದ್ದರಾಮಯ್ಯರಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ ಎನ್ನಲಾಗಿದೆ.
ಆಂಧ್ರ- ತೆಲಂಗಾಣಾ ಮಾದರಿಯಲ್ಲಿ ಬ್ರಾಹ್ಮಣರ ಪ್ರಾಧಿಕಾರ ಮಂಡಳಿ ರಚಿಸಲು ಸರಕಾರ ನಿರ್ಧರಿಸಿದ್ದು, ಮುಂದುವರಿದ ಸಮುದಾಯವನ್ನು ಸೆಳೆಯಲು ಸಿಎಂ ಸಿದ್ದರಾಮಯ್ಯ ಪ್ಲ್ಯಾನ್ ರೂಪಿಸಿದ್ದಾರೆ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಬ್ರಾಹ್ಮಣ ಸಮುದಾಯದಲ್ಲಿರುವ ನಿರುದ್ಯೋಗಿಗಳಿಗೆ, ಆರ್ಥಿಕವಾಗಿ ಹಿಂದುಳಿದವರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುವಂತೆ ಸಿಎಂ ಸಿದ್ದರಾಮಯ್ಯರಿಗೆ ಮನವಿ ಮಾಡಿದ್ದೇವೆ ಎಂದು ಶಿವಮೊಗ್ಗ ಶಾಸಕ ಪ್ರಸನ್ನಕುಮಾರ್ ಮಾಹಿತಿ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.