Select Your Language

Notifications

webdunia
webdunia
webdunia
webdunia

ಕರ್ನಾಟಕದಲ್ಲಿ ಆಪರೇಶನ್ ಕಮಲ ಬಿಜೆಪಿಯ ಹಗಲುಗನಸು: ಮುಖ್ಯಮಂತ್ರಿ ಸಿದ್ದರಾಮಯ್ಯ

Siddaramaiah

Krishnaveni K

ಬೆಂಗಳೂರು , ಸೋಮವಾರ, 13 ಮೇ 2024 (16:50 IST)
ಬೆಂಗಳೂರು:ಯಾವ ಕಾರಣಕ್ಕೂ ನಮ್ಮ ಸರ್ಕಾರವನ್ನು ಆಪರೇಷನ್ ಕಮಲ ಮಾಡಲು ಸಾಧ್ಯವಿಲ್ಲ. ಏಕೆಂದರೆ ಅವರು ಎನ್.ಡಿ. ಎ ಈ ಬಾರಿ ಸೋಲಲಿದೆ. ಆಪರೇಶನ್ ಕಮಲ  ಬಿಜೆಪಿಯ ಹಗಲುಗನಸು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.
 
ನಮ್ಮ ಶಾಸಕರು ಯಾರೂ ಮಾರಾಟವಾಗಲು  ತಯಾರಿಲ್ಲ
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ,  ಮಹಾರಾಷ್ಟ್ರದಲ್ಲಿ ಆದಂತೆ ಆಪರೇಶನ್ ಕಮಲ ನಡೆಯಲಿದೆ ಎಂದು ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿದ ಅವರು  ಅವರು, ಈಗಾಗಲೇ ಕಳೆದ ಒಂದು ವರ್ಷದಿಂದ  ಇಂಥ ಪ್ರಯತ್ನ ಮಾಡಿ ವಿಫಲರಾಗಿದ್ದಾರೆ ಇನ್ನೊಂದು ಬಾರಿ ಏಕೆ ಪ್ರಯತ್ನಿಸುತ್ತಾರೆ. ನಮ್ಮ ಶಾಸಕರು ಯಾರೂ ಮಾರಾಟವಾಗಲು  ತಯಾರಿಲ್ಲ. ಮಹಾರಾಷ್ಟ್ರದಲ್ಲಿ ಆದಂತೆ ಆಗಲೂ ಸಾಧ್ಯವಿಲ್ಲ ಎಂದರು. ರಾಜಕೀಯ ಧೃವೀ ಕಾರಣವಾಗಬಹುದೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಕಾಂಗ್ರೆಸ್  ನೇತೃತ್ವದ ಇಂಡಿಯಾ ಗೆಲ್ಲಲಿದ್ದು ನಮ್ಮವರೇ  ಪ್ರಧಾನಮಂತ್ರಿಯಾಗಲಿದ್ದಾರೆ ಎಂದರು.
 
ನಮ್ಮ ಅಭ್ಯರ್ಥಿಗಳು ಗೆಲ್ಲಲ್ಲಿದ್ದಾರೆ
ಪದವೀಧರರ ಕ್ಷೇತ್ರದಿಂದ  ರಾಮೋಜಿ ಗೌಡ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಹಾಗೂ ಶಿಕ್ಷಕರ ಕ್ಷೇತ್ರದಿಂದ ಬಿ. ಟಿ.ಶ್ರೀನಿವಾಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.  ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್,  ನಾನು, ಕೆ. ಹೆಚ್.  ಮುನಿಯಪ್ಪ, ರಾಮಲಿಂಗಾರೆಡ್ಡಿ, ಮಧು ಬಂಗಾರಪ್ಪ, ನಜೀರ್ ಅಹ್ಮದ್ ಪಕ್ಷದ ಅಭ್ಯರ್ಥಿಗಳ ಪರವಾಗಿ  ಜೊತೆಯಲ್ಲಿದ್ದೇವೆ. ನಮ್ಮ ಮಾಹಿತಿ ಪ್ರಕಾರ ಎರಡೂ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ಲಲ್ಲಿದ್ದಾರೆ. ಈ ಬಾರಿ ಕಾಂಗ್ರೆಸ್ ಪಕ್ಷ ಆರು ತಿಂಗಳು ಮುಂಚಿತವಾಗಿಯೇ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದೆವು. ಈಗಾಗಲೇ ಎಲ್ಲಾ ಮತದಾರರನ್ನು ಭೇಟಿಯಾಗಿ ಮನವಿ ಮಾಡಿಕೊಂಡಿದ್ದಾರೆ. ಇಬ್ಬರೂ ಸಮರ್ಥ  ಅಭ್ಯರ್ಥಿಗಳು. ಶ್ರೀನಿವಾಸ್ ಅವರು ಶಿಕ್ಷಕರ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಅವರ ಧ್ವನಿಯಾಗಿ ಕೆಲಸ ಮಾಡುವ ಸಾಮರ್ಥ್ಯ ಉಳ್ಳವರು. ರಾಮೋಜಿ ಗೌಡ ಅವರೂ ಶಿಕ್ಷಕರಾಗಿ ಕೆಲಸ ಮಾಡಿದ್ದವರು. ಅವರಿಗೂ ಪದವೀಧರರ ಸಮಸ್ಯೆಗಳ ಬಗ್ಗೆ ಅರಿವಿದೆ. ಅವುಗಳನ್ನು ಬಗೆಹರಿಸುವ ಶಕ್ತಿ ಅವರಿಗಿದೆ. ಹಾಗಾಗಿ ಇಬ್ಬರೂ ಅಭ್ಯರ್ಥಿಗಳೂ ಗೆಲ್ಲಲಿದ್ದಾರೆ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಮತಗಟ್ಟೆಯಲ್ಲಿ ಮುಸ್ಲಿಂ ಮಹಿಳೆಯರ ಐಡಿ ಪರಿಶೀಲನೆ: ಬಿಜೆಪಿ ಅಭ್ಯರ್ಥಿ ಮಾಧವಿ ವಿರುದ್ಧ ಪ್ರಕರಣ ದಾಖಲು