Webdunia - Bharat's app for daily news and videos

Install App

ನಮ್ಮ ಯೋಜನೆಗಳಿಗೆ ಹಣಕಾಸು ಆಯೋಗ ಹಣ ಕೊಡುವ ವಿಶ್ವಾಸವಿದೆ: ಸಿಎಂ ಸಿದ್ದರಾಮಯ್ಯ

Krishnaveni K
ಶುಕ್ರವಾರ, 30 ಆಗಸ್ಟ್ 2024 (09:06 IST)
ಬೆಂಗಳೂರು: ರಾಜ್ಯಕ್ಕೆ ಕಳೆದ ಐದು ವರ್ಷಗಳಿಂದ  ವಿಶೇಷ ಅನುದಾನ ಹಾಗೂ ತೆರಿಗೆ ಹಂಚಿಕೆಯಲ್ಲಿ 80,000 ಕೋಟಿ ಅನುದಾನ ಕಡಿಮೆಯಾಗಿದೆ. ಇದನ್ನು ಸರಿಪಡಿಸಬೇಕೆಂದು 16ನೇ ಹಣಕಾಸು ಆಯೋಗವನ್ನು  ಕೋರಲಾಗಿದ್ದು, ಆಯೋಗವು ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
 
 
ಅವರು ತಾಜ್ ವೆಸ್ಟೆಂಡ್ ಹೋಟೆಲ್ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಡಿವಿಸಿಬಲ್ ಪೂಲ್ ಗೆ ಸೆಸ್ ಮತ್ತು ಸರ್ಜಾಜ್ ನ್ನು ಸೇರಿಸಬೇಕೆಂದು ಹಾಗೂ ಭಾರತ ಸರ್ಕಾರಕ್ಕೆ ಬರುವ ತೆರಿಗೆಯೇತರ ಆದಾಯವನ್ನೂ ಸಹ  ಡಿವಿಸಿಬಲ್ ಪೂಲ್ ಗೆ ಸೇರಿಸಬೇಕೆಂದು ಕೋರಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ರಾಜ್ಯ ಸರ್ಕಾರ ಪ್ರತಿ ವರ್ಷ 5000 ಕೋಟಿ ಯಂತೆ ಐದು ವರ್ಷಕ್ಕೆ 25,000 ಕೋಟಿ ರೂ. ಖರ್ಚು ಮಾಡಲಾಗುತ್ತಿದ್ದು, ಕೇಂದ್ರ ಸರ್ಕಾರವೂ ಇದಕ್ಕೆ ಅನುರೂಪದ ಅನುದಾನ ನೀಡಬೇಕೆಂದು ಕೋರಲಾಗಿದೆ. ಬೆಂಗಳೂರು ಅಭಿವೃದ್ಧಿಗೆ ಸುಮಾರು 55,000 ಕೋಟಿ ರೂ. ವೆಚ್ಚವಾಗಲಿದ್ದು, ಈ ಮೊತ್ತದ ಅರ್ಧದಷ್ಟಾದರೂ ಅನುದಾನ ನೀಡಬೇಕೆಂದು ಕೋರಲಾಗಿದೆ ಎಂದರು.
 
 
ಪಶ್ಚಿಮ ಘಟ್ಟ ವಿಪತ್ತು ನಿರ್ವಹಣೆಗೆ ಹೆಚ್ಚಿನ ಅನುದಾನ ನೀಡಲು ಕೋರಲಾಯಿತು. ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ರಾಜ್ಯಗಳಿಗೆ ದಂಡವಿಧಿಸಬಾರದು.  ದೇಶದ ಜಿಡಿಪಿಗೆ ನಮ್ಮ ರಾಜ್ಯದಿಂದ ಶೇ.9 ರಷ್ಟು ಕೊಡುಗೆ ನೀಡುತ್ತಿದ್ದು, ಅದರಲ್ಲಿ ನಮಗೆ ಕೇವಲ ಶೇ. 1.5 ರಷ್ಟು ಮಾತ್ರ ರಾಜ್ಯದ ಪಾಲಿಗೆ ಬರುತ್ತಿದೆ. ಇದನ್ನು ಸರಿಪಡಿಸಲು ಕೋರಲಾಗಿದೆ. 14 ನೇ ಹಣಕಾಸು ಆಯೋಗದಲ್ಲಿ  ರಾಜ್ಯಕ್ಕೆ 4.713  ಪ್ರಮಾಣದ ತೆರಿಗೆ ಹಂಚಿಕೆಯಾಗುತ್ತಿತ್ತು. ಆದರೆ 15ನೇ ಹಣಕಾಸು ಆಯೋಗದಲ್ಲಿ ಈ ಪ್ರಮಾಣ 3.647 ಕ್ಕೆ ಇಳಿದಿದ್ದು, ಈ ಪ್ರಮಾಣವನ್ನೂ ಸರಿಪಡಿಸಬೇಕೆಂದು ಕೋರಲಾಗಿದೆ. ತೆರಿಗೆ ಪ್ರಮಾಣದಲ್ಲಿ 1.66 % ಕಡಿಮೆಯಾಗಿರುವ ಬಗ್ಗೆ ಆಯೋಗಕ್ಕೆ ವಿವರಣೆ ನೀಡಲಾಗಿದೆ ಎಂದರು.
 
 
ಗುಜರಾತಿನ ಮುಖ್ಯಮಂತ್ರಿಯಾಗಿದ್ದಾಗ ನರೇಂದ್ರ ಮೋದಿಯವರು ತೆರಿಗೆ ಹಂಚಿಕೆಯಲ್ಲಿ ಶೇ. 50 ರಷ್ಟು ಪಾಲಿಗೆ ಬೇಡಿಕೆಯಿಟ್ಟಿದ್ದರು.  ಅನೇಕ ರಾಜ್ಯಗಳು ಈ ರೀತಿ ಬೇಡಿಕೆ ಸಲ್ಲಿಸಿರುವುದರಿಂದ , ಕರ್ನಾಟಕದ ಬೇಡಿಕೆಯನ್ನು ಈಡೇರಿಸಬಹುದೆಂಬ ವಿಶ್ವಾಸವಿದೆ ಎಂದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಪಾಕ್‌ಗೆ ಸಹಾಯ ಮಾಡಿದ್ದಕ್ಕೆ ಟರ್ಕಿಗೆ ತಕ್ಕ ಉತ್ತರ ಕೊಟ್ಟ ಭಾರತ

ಭಯೋತ್ಪಾದಕರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನು ಕಳುಹಿಸಿದೆವು: ಸೋಫಿಯಾ ಖುರೇಷಿ ವಿರುದ್ಧದ ವಿಜಯ್ ಶಾ ಹೇಳಿಕೆಗೆ ಆಕ್ರೋಶ

ಮೂಕ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಅರೋಪ, ನ್ಯಾಯಕ್ಕಾಗಿ ಶವವಿಟ್ಟು ಪ್ರತಿಭಟನೆ

ಅರುಣಾಚಲ ಪ್ರದೇಶದ ಮೇಲೆ ಹಕ್ಕು ಚಲಾಯಿಸಲು ಬಂದ ಚೀನಾಗೆ ಖಡಕ್‌ ಉತ್ತರ ಕೊಟ್ಟ ಭಾರತ

ಭಾರತದ ಮೇಲಿನ ದಾಳಿಗೆ ಪಾಕ್‌ಗೆ ಸಹಾಯ ಮಾಡಿದ ಟರ್ಕಿ, ಕಳುಹಿಸಿದ ಡ್ರೋನ್‌ಗಳ ಲೆಕ್ಕಾ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments