ಗ್ಯಾರಂಟಿಯಿಂದ ಅಭಿವೃದ್ಧಿಗಳಿಗೆ ಹಣದ ಕೊರತೆಯಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Krishnaveni K
ಗುರುವಾರ, 12 ಡಿಸೆಂಬರ್ 2024 (15:38 IST)
ಬೆಳಗಾವಿ ಸುವರ್ಣಸೌಧ: ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಕುಂಠಿತವಾಗಿಲ್ಲ, ರಾಜ್ಯದಲ್ಲಿ 2023-24 ರಲ್ಲಿ ಅಭಿವೃದ್ಧಿ ವೆಚ್ಚಗಳಿಗಾಗಿ 1,14,292 ಕೋಟಿ ರೂ ವೆಚ್ಚ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
 
ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಕೆ. ಎ. ತಿಪ್ಪೇಸ್ವಾಮಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ಸರ್ಕಾರವು 5 ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಗೊಳಿಸಲು  ಸದ್ರಿ ಯೋಜನೆಗಳಿಗೆ ಆಯವ್ಯಯ ದಲ್ಲಿ 52,009 ಕೋಟಿ ರೂ ಗಳನ್ನು ಒದಗಿಸಿದೆ.
 
ರಾಜ್ಯ ಸರ್ಕಾರವು 2023-24 ರಲ್ಲಿ 90,280 ಕೋಟಿ ರೂ ಗಳನ್ನು ಸಾಲ ಪಡೆದಿದ್ದು, ರಾಜ್ಯದ ವಿತ್ತೀಯ ಕೊರತೆ 2.6%  ಇದ್ದು, ರಾಜ್ಯ ಸರ್ಕಾರವು ಪಡೆದ ಒಟ್ಟು ಸಾಲ ಕರ್ನಾಟಕ ಆರ್ಥಿಕ ಹೊಣೆಗಾರಿಕೆ ಅಧಿನಿಯಮದ ಮಾನದಂಡ ಮತ್ತು ಕೇಂದ್ರ ಸರ್ಕಾರ ನಿಗಧಿಪಡಿಸಿರುವ ಸಾಲಮಿತಿಗೆ ಒಳಪಟ್ಟಿದೆ ಎಂದರು.
 
ರಾಜ್ಯ ಸರ್ಕಾರವು ರಾಜಸ್ವ ಹಾಗು ಬಂಡವಾಳ ಸ್ವೀಕೃತಿಗಳಿಂದ ಮತ್ತು ಕೇಂದ್ರ ಸರ್ಕಾರ ನಿಗದಿಪಡಿಸುವ ಮಿತಿಯೊಳಗೆ ಸಾಲವನ್ನು ಪಡೆಯುವ ಮೂಲಕ ಆಯವ್ಯಯದಲ್ಲಿ ಅಂದಾಜಿಸಿರುವ ವೆಚ್ಚವನ್ನು ಭರಿಸುತ್ತದೆ. ಈ ಸ್ವೀಕೃತಿಗಳನ್ನು ಮೀರಿ ಈವರೆಗೂ ಯಾವುದೇ ವೆಚ್ಚದ ಹೊರೆ ರಾಜ್ಯ ಸರ್ಕಾರಕ್ಕೆ ಉಂಟಾಗಿರುವುದಿಲ್ಲ ಎಂದರು.
 
ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಅಭಿವೃದ್ಧಿ ಕುಂಠಿತವಾಗಿದೆ ಎಂಬ ವಿರೋಧ ಪಕ್ಷಗಳ ಆರೋಪ ಸುಳ್ಳು ಹಾಗೂ ಸತ್ಯಕ್ಕೆ ದೂರವಾಗಿದ್ದು ಈ ಆರೋಪದಲ್ಲಿ   ಯಾವುದೇ ಹುರುಳಿಲ್ಲ ಎಂದು ಸ್ಪಷ್ಟಪಡಿಸಿದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಸ್ಪರ್ಧಾತ್ಮಕ ಪರೀಕ್ಷೆಗೆ ಹೊರಟ್ಟಿದ್ದ ಯುವತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣು

ದೆಹಲಿ ವಾಯುಮಾಲಿನ್ಯ: ನಾಳೆ ಶಾಲೆಗೆ ರಜೆ ಘೋಷಣೆ, 50% ಮನೆಯಿಂದ ಕೆಲಸಕ್ಕೆ ಅನುಮತಿ

ರಾಜ್ಯದಲ್ಲಿ 13ಲಕ್ಷ ಕಾರ್ಡುಗಳು ಅನರ್ಹ, ಸಚಿವ ಕೆಎಚ್ ಮುನಿಯಪ್ಪ ಕೊಟ್ಟ ಸಲಹೆ ಏನು

ಮುಂದಿನ ಸುದ್ದಿ
Show comments