Select Your Language

Notifications

webdunia
webdunia
webdunia
webdunia

ಸಣ್ಣದೊಂದು ಕಪ್ಪು ಚುಕ್ಕೆ ಇಲ್ಲದಂತೆ ರಾಜಕೀಯದ ಪಾವಿತ್ರ್ಯತೆ ಕಾಪಾಡಿಕೊಂಡಿದ್ದೇನೆ

Siddaramaiah

Krishnaveni K

ಬೆಂಗಳೂರು , ಶುಕ್ರವಾರ, 26 ಜುಲೈ 2024 (14:21 IST)
ಬೆಂಗಳೂರು: ಈ ಬಾರಿ ಸದನದಲ್ಲಿ ವಾಲ್ಮೀಕಿ ಮತ್ತು ಮುಡಾ ಹಗರಣ ವಿಚಾರವಾಗಿ ಧರಣಿ ನಡೆಸಿ ಗದ್ದಲವೆಬ್ಬಿಸಿದ ವಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಗೆ ಸಿಎಂ ಸಿದ್ದರಾಮಯ್ಯ ಇಂದು ಪತ್ರಿಕಾಗೋಷ್ಠಿಯಲ್ಲಿ ತಿರುಗೇಟು ನೀಡಿದ್ದಾರೆ. ನನ್ನ ರಾಜಕೀಯ ಜೀವನದಲ್ಲಿ ಸಣ್ಣದೊಂದು ಕಪ್ಪು ಚುಕ್ಕೆ ಇಲ್ಲದಂತೆ ಪಾವಿತ್ರ್ಯತೆ ಕಾಪಾಡಿಕೊಂಡು ಬಂದಿದ್ದೇನೆ ಎಂದಿದ್ದಾರೆ.

ಬಿಜೆಪಿ, ಜೆಡಿಎಸ್ ಹತಾಶರಾಗಿದ್ದಾರೆ. ನಾವು 135 ಸ್ಥಾನ ಗೆದ್ದ ಬಳಿಕ ರಾಜಕೀಯ ಪ್ರೇರಿತವಾದ ಹೇಳಿಕೆಗಳನ್ನು ಕೊಡ್ತಾರೆ. ಮುಖ್ಯಮಂತ್ರಿಗಳ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಯತ್ನಿಸುತ್ತಿದ್ದಾರೆ. ಎರಡನೇ ಬಾರಿ ಸಿಎಂ ಆಗಿರುವುದು ಅವರಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.

ಎರಡು ವಾರವೂ ವಾಲ್ಮೀಕಿ ನಿಗಮದ ಒಂದೇ ವಿಚಾರ
ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಚಕಾರವನ್ನೇ ಎತ್ತಲಿಲ್ಲ. ಆಡಳಿತ ಪಕ್ಷದ ಶಾಸಕರು ರಾಜ್ಯದ ಜನರ ಸಮಸ್ಯೆಗಳನ್ನು ಪ್ರಸ್ತಾಪಿಸಿ ಚರ್ಚೆ ನಡೆಸಿದರು. ಇದನ್ನೆಲ್ಲಾ ನೋಡಿದಾಗ ಮುಖ್ಯಮಂತ್ರಿಗಳ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಅಧಿವೇಶನವನ್ನು ದುರುಪಯೋಗ ಪಡಿಸಿಕೊಳ್ಳುವುದು ಬಿಟ್ಟರೆ ಬೇರೆ ಜನಪರವಾದ ಉದ್ದೇಶ ವಿರೋಧ ಪಕ್ಷಗಳಿಗೆ ಇರಲಿಲ್ಲ ಎನ್ನುವುದು ಸ್ಪಷ್ಟವಾಗಿದೆ.

ನಾನು ಮಂತ್ರಿಯಾಗಿ 40 ವರ್ಷ ಆಯ್ತು. ಇವತ್ತಿನವರೆಗೆ ನನ್ನ ಮೇಲೆ ಸಣ್ಣ ಕಪ್ಪುಚುಕ್ಕೆ ಇಲ್ಲ. ನನ್ನ ರಾಜಕೀಯ ಜೀವನ ತೆರೆದ ಪುಸ್ತಕ.‌ ಜನರ ವಿಶ್ವಾಸ ಕಳೆದುಕೊಂಡಿರುವ ಬಿಜೆಪಿ+ಜೆಡಿಎಸ್ ಲೋಕಸಭಾ ಚುನಾವಣೆಯಲ್ಲೂ ಹಿಂದಿನ ಬಾರಿಗಿಂತ ಹೆಚ್ಚು ಸೀಟು, ಮತ ಗಳಿಸಲು ಸಾದ್ಯವಾಗಲಿಲ್ಲ. ನಮಗೆ ಕಳೆದ ಲೋಕಸಭಾ ಚುನಾವಣೆಗಿಂತ ಶೇ13 ರಷ್ಟು ಮತಗಳನ್ನು ಈ ಚುನಾವಣೆಯಲ್ಲಿ ಹೆಚ್ಚು ಗಳಿಸಿದೆವು. ಇದರಿಂದ ಹತಾಶರಾಗಿ ಮತ್ತೆ ಜನರ ವಿಶ್ವಾಸ ಗಳಿಸಲು ತಪ್ಪು ದಾರಿಯಲ್ಲಿ ವಾಮ ಮಾರ್ಗ ಹಿಡಿದಿದ್ದಾರೆ ಎಂದಿದ್ದಾರೆ.

ಇಂದು ಸಂಸತ್ ಭವನದ ಮುಂಭಾಗ ಪ್ರತಿಭಟನೆ ನಡೆಸಿದ ಬಿಜೆಪಿ ಮತ್ತು ಜೆಡಿಎಸ್ ಸಂಸದರ ವಿರುದ್ಧ ಟೀಕಾ ಪ್ರಹಾರ ನಡೆಸಿದ ಮುಖ್ಯಮಂತ್ರಿಗಳು ಬಿಜೆಪಿ ಮತ್ತು ಜೆಡಿಎಸ್ ವಿವಾದ ಅಲ್ಲದ್ದನ್ನು ಕೃತಕವಾಗಿ ವಿವಾದವನ್ನಾಗಿಸಲು ಬಿಜೆಪಿ+ಜೆಡಿಎಸ್ ಪಾರ್ಲಿಮೆಂಟಿನಲ್ಲಿ ಪ್ರಯತ್ನಿಸುತ್ತಿದ್ದಾರೆ. ಬಿಜೆಪಿ ಜೆಡಿಎಸ್ ಸಂಸದರು ರಾಜ್ಯದ ಏಳೂವರೆ ಕೋಟಿ ಜನರಿಗೆ ಆಗಿರುವ ಅನ್ಯಾಯದ ಬಗ್ಗೆ ನೆಪಕ್ಕೂ ಪಾರ್ಲಿಮೆಂಟಿನಲ್ಲಿ ಪ್ರಶ್ನೆ ಮಾಡಿಲ್ಲ ಏಕೆ? ಇಲ್ಲಿ ವಿಧಾನಸಭೆಯನ್ನು ಅವರ ರಾಜಕಾರಣಕ್ಕೆ ಬಳಸಿಕೊಂಡರು , ಈಗ ಪಾರ್ಲಿಮೆಂಟನ್ನೂ ಬಳಸಿಕೊಳ್ಳುತ್ತಿದ್ದಾರೆ ಎಂದು ಪ್ರಶ್ನೆ ಮಾಡಿದ್ದಾರೆ.
 

Share this Story:

Follow Webdunia kannada

ಮುಂದಿನ ಸುದ್ದಿ

ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿಲ್ಲ; ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಬಿಜೆಪಿ ಯತ್ನ ಎಂದ ಸಿಎಂ