ಚಾಮರಾಜನಗರ: ನಾನು ನನ್ನ ರಾಜಕೀಯ ಜೀವನದ ಕೊನೆಗಾಲದಲ್ಲಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಇಂದು ಹೇಳಿಕೆ ನೀಡಿದ್ದಾರೆ. ಸಿಎಂ ಬದಲಾವಣೆ, ಅಧಿಕಾರ ಹಂಚಿಕೆ ಮಾತುಗಳ ನಡುವೆ ಸಿಎಂ ಹೇಳಿಕೆ ಮಹತ್ವ ಪಡೆದುಕೊಂಡಿದೆ.
ಚಾಮರಾಜನಗರದಲ್ಲಿ ಇಂದು ಹಳೇ ವಿದ್ಯಾರ್ಥಿಗಳೇ ಮರು ನಿರ್ಮಾಣ ಮಾಡಿದ ಸರ್ಕಾರೀ ಶಾಲೆಯ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯ ಈ ಹೇಳಿಕೆ ನೀಡಿದ್ದು ಎಲ್ಲರ ಅಚ್ಚರಿಗೆ ಕಾರಣವಾಗಿದೆ.
ನಾನು ನನ್ನ ರಾಜಕೀಯ ಜೀವನದ ಕೊನೆಗಾಲದಲ್ಲಿದ್ದೇನೆ. ಜನರ, ಪ್ರೀತಿ, ಅಭಿಮಾನ ಗಳಿಸದೇ ಇದ್ದರೆ ರಾಜಕೀಯ ಜೀವನದಲ್ಲಿ ಇಷ್ಟು ದಿನ ಇರಲು ಸಾಧ್ಯವಿಲ್ಲ ಎಂದಿದ್ದಾರೆ. ಇತ್ತೀಚೆಗಷ್ಟೇ ಡಿಕೆ ಶಿವಕುಮಾರ್ ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್ ಜೊತೆ ಒಪ್ಪಂದವಾಗಿತ್ತು ಎಂದಿದ್ದರು. ಅವರ ಹೇಳಿಕೆ ಬೆನ್ನಲ್ಲೇ ಸಿಎಂ ಈ ರೀತಿ ಹೇಳಿಕೆ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಚಾಮರಾಜನಗರಕ್ಕೆ ಬಂದರೆ ಸಿಎಂ ಸ್ಥಾನ ಉಳಿಯಲ್ಲ ಎಂದು ಅನೇಕರು ಹೇಳಿದ್ದರು. ಜೆಎಚ್ ಪಟೇಲ್ ಕಾಲದಿಂದ ಇದು ಜಾರಿಯಲ್ಲಿದೆ. ಆದರೆ ನಾನು ಮುಖ್ಯಮಂತ್ರಿಯಾದ ಬಳಿಕ ಎರಡನೇ ಬಾರಿಗೆ ಚಾಮರಾಜನಗರಕ್ಕೆ ಬಂದಿದ್ದೇನೆ. ನಾನು ಈ ಮೂಢ ನಂಬಿಕೆಯನ್ನು ನಂಬಿರಲಿಲ್ಲ ಎಂದಿದ್ದಾರೆ.