Webdunia - Bharat's app for daily news and videos

Install App

ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಹೆಚ್ಚಿಸಿದ್ದು ನಾನು: ಸಿಎಂ ಸಿದ್ದರಾಮಯ್ಯ

Krishnaveni K
ಗುರುವಾರ, 21 ನವೆಂಬರ್ 2024 (16:51 IST)
ನವದೆಹಲಿ:  ದೇಶದ ಹಾಲು ಉತ್ಪಾದನೆಯಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
 
ಅವರು ಇಂದು ರಾಜಧಾನಿ  ನವದೆಹಲಿಯಲ್ಲಿ ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಲ ಹಾಗೂ ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟ ನಿಯಮಿತದ ವತಿಯಿಂದ  ನಂದಿನಿ ವಿವಿಧ ಶ್ರೇಣಿಯ ಹಾಲು ಬಿಡುಗಡೆ ಮಾಡಿ ಮಾತನಾಡಿದರು.
 
ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ
 
ರಾಜ್ಯದಲ್ಲಿ  ಪ್ರತಿದಿನ  92 ರಿಂದ 93 ಲಕ್ಷ ಲೀ. ಹಾಲು ಉತ್ಪಾದನೆಯಾಗುತ್ತಿದೆ. ರೈತರಿಂದ ಲೀ. ಗೆ 32 ರೂ.ಗಳಿಗೆ ಹಾಲು ಖರೀದಿಸಲಾಗುತ್ತಿದ್ದು,  ರಾಜ್ಯ ಸರ್ಕಾರ  ಕ್ಷೀರಧಾರೆ ಯೋಜನೆಯಡಿ ಹಾಲು ಉತ್ಪಾದಕರಿಗೆ ಪ್ರತಿ ಲೀಟರಿಗೆ 5 ರೂ.ಗಳ ಪ್ರೋತ್ಸಾಹಧನವನ್ನು ನೀಡುತ್ತಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾಲದಲ್ಲಿ 2 ರೂ. ಇದ್ದ  ಪ್ರೋತ್ಸಾಹಧನ, ನಂತರ 3 ರೂ. ಆಯಿತು. ನಾನು ಮುಖ್ಯಮಂತ್ರಿಯಾದ ನಂತರ ಇದನ್ನು 5 ರೂ.ಗಳಿಗೆ ಹೆಚ್ಚಿಸಲು ಘೋಷಣೆ ಮಾಡಲಾಯಿತು.  ಪ್ರೋತ್ಸಾಹಧನಕ್ಕಾಗಿ ಪ್ರತಿ ದಿನ 5 ಕೋಟಿ ರೂ.ಗಳನ್ನು ಸರ್ಕಾರ ವೆಚ್ಚ ಮಾಡುತ್ತಿದೆ ಎಂದರು.
 
 
ರಾಜ್ಯದಲ್ಲಿ ಒಟ್ಟು 16 ಮಿಲ್ಕ್ ಯೂನಿಯನ್ಗಳಿವೆ. ರಾಜ್ಯದಲ್ಲಿ ಅಂದಾಜು 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ಆಂಧ್ರಪ್ರದೇಶ, ಮಹಾರಾಷ್ಟ್ರಕ್ಕೆ ನಿತ್ಯ ತಲಾ 2.5 ಲಕ್ಷ ಲೀ.ಟರ್  ಹಾಲು ಪೂರೈಕೆಯಾಗುತ್ತಿದೆ. ಇದೀಗ ಆರಂಭಿಕ ಹಂತದಲ್ಲಿ 2.5 ಲಕ್ಷ ಲೀಟರ್ ಹಾಲು ನವದೆಹಲಿಗೆ ಪೂರೈಸುವ ಯೋಜನೆ ರೂಪಿಸಲಾಗಿದೆ. ಇನ್ನು ಆರು ತಿಂಗಳೊಳಗೆ 5 ಲಕ್ಷ ಲೀಟರ್ ಗೆ ಏರಿಸುವ ಗುರಿ ನಮ್ಮದಾಗಿದೆ. ಹಾಲಿನ ಉತ್ಪಾದನೆಗಳಿಗೆ ಮಾರುಕಟ್ಟೆ ಬಹಳ ಮುಖ್ಯ ಎಂದರು.
 
ಪಶುಸಂಗೋಪನೆ ಮತ್ತು ರೆಷ್ಮೆ ಸಚಿವ ವೆಂಕಟೇಶ್, ಕೃಷಿ ಸಚಿವ ಚೆಲುವರಾಯಸ್ವಾಮಿ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಕರ್ನಾಟಕ ಹಾಲು ಮಹಾಮಂಡಲದ ಅಧ್ಯಕ್ಷ ಭೀಮಣ್ಣ ನಾಯಕ್, ರಾಜ್ಯ ಸಭಾ ಸದಸ್ಯ ಈರಣ್ಣ ಕರಾಡಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ  ಗೋವಿಂದರಾಜು, ಮುಖ್ಯಮಂತ್ರಿಗಳ  ಕಾನೂನು ಸಲಹೆಗಾರ ಪೊನ್ನಣ್ಣ, ಮಂಡ್ಯ ಹಾಲು ಒಕ್ಕೂಟದ ಅಧ್ಯಕ್ಷ ತಿಮ್ಮೇಗೌಡ, ಮೊದಲಾದವರು ಉಪಸ್ಥಿತರಿದ್ದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments