Webdunia - Bharat's app for daily news and videos

Install App

ನನ್ನ ಜನಪರ ಕೆಲಸ ನೀವು ಜನರಿಗೆ ತಲುಪಿಸಬೇಕು: ಡಿಸಿಗಳಿಗೆ ಸಿದ್ದರಾಮಯ್ಯ ಕ್ಲಾಸ್

Krishnaveni K
ಸೋಮವಾರ, 8 ಜುಲೈ 2024 (14:45 IST)
ಬೆಂಗಳೂರು: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನ ಜನಪರ ಕೆಲಸಗಳನ್ನು ಜನರಿಗೆ ತಲುಪಿಸುವ ಜವಾಬ್ಧಾರಿ ನಿಮ್ಮದು ಎಂದು ಡಿಸಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಅವರ ಭಾಷಣದ ಹೈಲೈಟ್ಸ್ ಇಲ್ಲಿದೆ.
 
ಇದು ಅಧಿಕಾರಿಗಳನ್ನು ಟೀಕೆ ಮಾಡಲು ಕರೆದ ಸಭೆ ಅಲ್ಲ. ಜಿಲ್ಲೆಯಲ್ಲಿ ಅಭಿವೃದ್ಧಿ ಯಾವ ರೀತಿ ಮಾಡಿದ್ದೀರಿ ಎಂದು ಪರಿಶೀಲಿಸಲು ಕರೆದ ಸಭೆ ಇದು. ಪ್ರತಿ ಜಿಲ್ಲೆಯ ಅಭಿವೃದ್ಧಿಯಲ್ಲಿ ಡಿಸಿ, ಸಿಈಓ, ಎಸ್ಪಿ ಇವರ ಪಾತ್ರ ದೊಡ್ಡದು. ಇವರು ಮೂರು ಜನ ಸಮನ್ವಯದಿಂದ ಬೇರೆ ಅಧಿಕಾರಿಗಳನ್ನು ಜೊತೆಗೆ ಕರೆದೊಯ್ಯುವ ಪ್ರಯತ್ನ ಮಾಡಿದರೆ ಅಭಿವೃದ್ಧಿ ವೇಗವಾಗಿ ಮಾಡಲು ಸಾಧ್ಯ. ಅನೇಕ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದೇವೆ. ಇವು ಜನರನ್ನು ತಲುಪಬೇಕು ಎಂದರು.
 
ನಾನು ಮಂತ್ರಿಯಾಗಿ 40 ವರ್ಷಗಳಾದವು. 40 ಕ್ಕೂ ಹೆಚ್ಚು ವರ್ಷಗಳಿಂದ ಅಧಿಕಾರಿಗಳ ಕಾರ್ಯ ವೈಖರಿಯನ್ನು ನೋಡುತ್ತಿದ್ದೇನೆ. ರಾಜಕಾರಣಿಗಳು, ಅಧಿಕಾರಿಗಳು ಅನುಭವದ ಮೇಲೆ ಆಡಳಿತ ಹೆಚ್ಚು ಪರಿಣಾಮಕಾರಿಯಾಗಬೇಕು. ಆದರೆ ನಿರೀಕ್ಷಿತ ಮಟ್ಟದಲ್ಲಿ ಪರಿಣಾಮಕಾರಿಯಾಗಿಲ್ಲ ಎಂದರು.
 
ಅವತ್ತು ಭ್ರಷ್ಟಾಚಾರ ಹೇಗಿತ್ತು, ಇವತ್ತು ಹೇಗಿದೆ ಎಂದು ನೋಡಿದಾಗ, ಕಾರ್ಯಾಂಗ ಮತ್ತು ಶಾಸಕಾಂಗ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿಲ್ಲ ಎಂಬುದು ಕಂಡುಬರುತ್ತದೆ. ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗ ಪರಿಣಾಮಕಾರಿಯಾಗಿ ಕೆಲಸಮಾಡಬೇಕು 
 
 
ಕರ್ನಾಟಕ ರಾಜ್ಯ ಆಡಳಿತ ವ್ಯವಸ್ಥೆಯಲ್ಲಿ ಮುಂಚೂಣಿಯಲ್ಲಿದೆ. ನೀವು ಕೆಲಸ ಮಾಡುವ ಜಿಲ್ಲೆಯ ಬಗ್ಗೆ ಮೊದಲೇ ತಿಳಿದುಕೊಂಡಿರಬೇಕು. ಅಲ್ಲಿನ ಆರ್ಥಿಕ ಸ್ಥಿತಿ, ಸಾಮಾಜಿಕ ಸ್ಥಿತಿಗಳ ಬಗ್ಗೆ ಅರಿತುಕೊಳ್ಳಬೇಕು. ಅಲ್ಲಿನ ಸಾಕ್ಷರತೆ, ಶಿಕ್ಷಣ, ತಲಾ ಆದಾಯ ಮೊದಲಾದವುಗಳ ಕುರಿತು ತಿಳಿದಿರಬೇಕು.
 
ಎಸ್‌.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಫಲಿತಾಂಶ ಕಳೆದ ವರ್ಷಕ್ಕಿಂತ ಶೇ. 10 ರಷ್ಟು ಕಡಿಮೆಯಾಗಿದೆ. ಪರೀಕ್ಷಾ ಅಕ್ರಮಗಳನ್ನು ನಿಯಂತ್ರಣದಲ್ಲಿಟ್ಟಿರುವುದೇ ಒಂದು ಕಾರಣವಾಗಲು ಸಾಧ್ಯವಿಲ್ಲ. ಇನ್ನು ಮುಂದೆ ಹೀಗೆ ಆಗದಂತೆ ನೋಡಿಕೊಳ್ಳಬೇಕು. ಜಿಲ್ಲಾಧಿಕಾರಿಗಳು, ಸಿಇಓಗಳು, ಶಿಕ್ಷಣ ಇಲಾಖೆಯ ಹಿರಿ ಅಧಿಕಾರಿಗಳದೂ ಜವಾಬ್ದಾರಿ ಇದೆ. ಒಟ್ಟಿಗೆ ಕುಳಿತು ಚರ್ಚೆ ಮಾಡಿ ಫಲಿತಾಂಶ ಹೆಚ್ಚಿಸಲು ಪ್ರಯತ್ನಿಸಬೇಕು 
 
ಜನಸ್ಪಂದನ ಅರ್ಜಿಗಳ ಸಕಾರಾತ್ಮಕ ವಿಲೇವಾರಿ ಮಾಡಿ
 
ಗೆಜೆಟಿಯರ್‌, ಎಕನಾಮಿಕ್‌ ಸರ್ವೇ ಗಳನ್ನು ಕಡ್ಡಾಯವಾಗಿ ಓದಿ
 
ಜಿಲ್ಲಾಧಿಕಾರಿಗಳು ಗಜೆಟಿಯರ್‌, ಎಕನಾಮಿಕ್‌ ಸರ್ವೇ ಓದಿದರೆ ಆ ಜಿಲ್ಲೆಯ ಇತಿಹಾಸ, ಸ್ಥಿತಿಗತಿಗಳನ್ನು ಅರಿತುಕೊಳ್ಳಲು ಸಾಧ್ಯ. ಫ್ರೇಸರ್‌ ಎಂಬ ಅಧಿಕಾರಿಯ ಸಲಹೆ ಇಲ್ಲದೆ ನಾಲ್ವಡಿ ಕೃಷ್ಣರಾಜ ಒಡೆಯರ್‌, ಗಾಯಕ್‌ವಾಡ್‌, ಶಾಹು ಮಹಾರಾಜ ಮೊದಲಾದವರು ಒಳ್ಳೆಯ ಅರಸರೆಂದು ಹೆಸರುಗಳಿಸಲು ಸಾಧ್ಯವಾಗುತ್ತಿರಲಿಲ್ಲ. ಬಳ್ಳಾರಿಯಲ್ಲಿ ಮನ್ರೋ ಎಂಬ ಅಧಿಕಾರಿ ಕಲೆಕ್ಟರ್‌ ಆಗಿದ್ದರು. ಇಂದಿಗೂ ಅಲ್ಲಿನ ಜನ ತಮ್ಮ ಮಕ್ಕಳಿಗೆ ಅವರ ಹೆಸರಿಡುತ್ತಾರೆ. ನಾವೆಲ್ಲರೂ ಜನಸೇವಕರು ಎಂಬ ಭಾವನೆಯಿಂದ ಕೆಲಸ ನಿರ್ವಹಿಸಬೇಕು. ಆಗ ಮಾತ್ರ ಜನಪರ ಆಡಳಿತ ನೀಡಲು ಸಾಧ್ಯವಾಗುತ್ತದೆ.
 
*ನಮ್ಮ ಜನರು ತಮ್ಮ ಮಕ್ಕಳಿಗೆ ನಿಮ್ಮ ಹೆಸರು ಇಡುವ ರೀತಿಯಲ್ಲಿ ಗುಣಾತ್ಮಕವಾಗಿ, ಪರಿಣಾಮಕಾರಿಯಾಗಿ ಕೆಲಸ ಮಾಡಲು ಅವಕಾಶಗಳಿವೆ, ನಿಮ್ಮಿಂದ ಇದು ಸಾಧ್ಯವಿದೆ ಎಂದರು. 
 
•ಬಡವರ ಬಗ್ಗೆ ಅನುಕಂಪ ಇರಬೇಕು. ಅಸಮಾನತೆ ನೀಗಿಸಲು ಪ್ರಯತ್ನಿಸಬೇಕು. ಬಸವಣ್ಣ, ಗಾಂಧೀಜಿ, ಅಂಬೇಡ್ಕರ್‌ ಅವರನ್ನು ಓದುತ್ತೇವೆ. ಸಂವಿಧಾನ ಅರಿತುಕೊಳ್ಳಬೇಕು ಎಂದು ಹೇಳುತ್ತೇವೆ. ಇದು ಕೇವಲ ಓದುವುದಕ್ಕಲ್ಲ; ಅನುಷ್ಠಾನ ಮಾಡುವುದಕ್ಕೆ ಎಂಬುದನ್ನು ಅರಿತುಕೊಳ್ಳಿ. ಈ ಸೇವೆಯನ್ನು ಆಯ್ಕೆ ಮಾಡಿಕೊಂಡಿದ್ದೀರಿ.  ಪರಿಸ್ಥಿತಿ ಬದಲಾದಂತೆ ನಾವೂ ಬದಲಾಗಬೇಕು.
 
ಡೆಂಘಿ ನಿಯಂತ್ರಿಸಿ:
 
•ಕಲುಷಿತ ನೀರು ಕುಡಿದು ಹಲವು ಸಾವು- ನೋವುಗಳು ಸಂಭವಿಸಿವೆ. ಇಂತಹ ಪ್ರಕರಣಗಳು ಮರುಕಳಿಸಿದರೆ, ಹಿರಿಯ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು.
ವಲಸೆ ಕುರಿಗಾರರ ಹಿತ ಕಾಪಾಡಿ
ವಲಸೆ ಕುರಿಗಳ ಆಕಸ್ಮಿಕ ಮರಣ ಸಂಭವಿಸಿದಲ್ಲಿ ಮಾಲೀಕರಿಗೆ ತ್ವರಿತವಾಗಿ ಪರಿಹಾರ ವಿತರಿಸಬೇಕು.
 
•ಸಿಂಧುತ್ವ ಪ್ರಮಾಣ ಪತ್ರ ಸಕಾಲದಲ್ಲಿ ನೀಡಬೇಕು. ಇವುಗಳನ್ನು ಬಾಕಿ ಉಳಿಸಿಕೊಳ್ಳದೆ ಸೂಕ್ತ ಆದೇಶ ಹೊರಡಿಸಬೇಕು. ಅಭ್ಯರ್ಥಿಗಳಿಗೆ ಸಕಾಲದಲ್ಲಿ ಸಿಂಧುತ್ವ ಪ್ರಮಾಣ ಪತ್ರ ನೀಡದೆ ಇದ್ದರೆ ಅವರ ಭವಿಷ್ಯ ಹಾಳಾಗುವುದಿಲ್ಲವೇ ಎಂದು ಪ್ರಶ್ನಿಸಿದರು. 
 
•ಗಂಗಾ ಕಲ್ಯಾಣ ಯೋಜನೆಯಡಿ ವಿದ್ಯುತ್‌ ಸಂಪರ್ಕ ಕಲ್ಪಿಸಲು ಬಾಕಿ ಉಳಿದಿರುವ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಸಂಪರ್ಕ ಒದಗಿಸಬೇಕು. 
 
•ಬುಡಕಟ್ಟು ಜನರಿಗೆ ಅರಣ್ಯ ಜಮೀನು ಮಂಜೂರು ಮಾಡಲು 26,126 ಅರ್ಜಿಗಳು ಬಾಕಿ ಇವೆ. ಇವುಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು. ಅವರ ಹಾಡಿಗಳಿಗೆ ಹೋಗಲು ರಸ್ತೆ ಸಂಪರ್ಕ ಇರುವುದಿಲ್ಲ. ಈ ಬಗ್ಗೆ ಅಗತ್ಯ ಮೂಲಸೌಕರ್ಯ ಒದಗಿಸಲು ಸೂಕ್ತ ಸುತ್ತೋಲೆ ಹೊರಡಿಸಲು ಸೂಚಿಸಿದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments