Select Your Language

Notifications

webdunia
webdunia
webdunia
webdunia

ಕೆಂಪೇಗೌಡರು ದಕ್ಷ ಆಡಳಿತಗಾರರಾಗಿದ್ದರು: ಸಿದ್ದರಾಮಯ್ಯ

Siddaramaiah

Krishnaveni K

ಬೆಂಗಳೂರು , ಶುಕ್ರವಾರ, 27 ಜೂನ್ 2025 (14:24 IST)
ಬೆಂಗಳೂರು: ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯ ಆಡಳಿತಗಾರರಾಗಿದ್ದರು. ಆಧುನಿಕ ಬೆಂಗಳೂರಿನ ನಿರ್ಮಾತೃಗಳು ಕೂಡ ಅವರೇ ಆಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು ನಾಡಪ್ರಭು ಕೆಂಪೇಗೌಡರ 516ನೇ ಜಯಂತಿಯ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ‘ಕೆಂಪೇಗೌಡರ ಪ್ರತಿಮೆಗೆ ಕೆಂಪೇಗೌಡರ 516ನೇ ಜಯಂತಿಯನ್ನು ಸರ್ಕಾರವು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಬಿಬಿಎಂಪಿ ಸಹಯೋಗದಲ್ಲಿ ಆಚರಿಸುತ್ತಿದೆ. 2013-18 ರ ಅವಧಿಯಲ್ಲಿ ನಾವು ನಿರ್ಮಲಾನಂದ ಸ್ವಾಮೀಜಿ ಅವರೊಂದಿಗೆ ಚರ್ಚೆ ಮಾಡಿ ಕೆಂಪೇಗೌಡರ ಜನ್ಮದಿನಾಂಕವನ್ನು ತಿಳಿದು, ಅಂದಿನಿಂದ ನಿರಂತರವಾಗಿ  ಜಯಂತಿಯನ್ನು ಆಚರಣೆ ಮಾಡಿಕೊಂಡು ಬರುತ್ತಿದ್ದೇವೆ. ಬೆಂಗಳೂರು ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟಿದ್ದರೆ ಅದಕ್ಕೆ ಅಡಿಪಾಯ ಹಾಕಿದ್ದು ಕೆಂಪೇಗೌಡರು. ಅವರನ್ನು ಸ್ಮರಿಸುವ ಕೆಲಸವನ್ನು ಸರ್ಕಾರ ಹೆಮ್ಮೆಯಿಂದ ಮಾಡಿದೆ’ ಎಂದಿದ್ದಾರೆ.

‘ಬೆಂಗಳೂರಿನ ನಾಲ್ಕು ಭಾಗದಲ್ಲಿ ಗೋಪುರಗಳನ್ನು ಕಟ್ಟಿಸಿದ ಕೆಂಪೇಗೌಡರು ಅಂದೇ ಬೆಂಗಳೂರಿನ ಆಡಳಿತ ಹೇಗಿರಬೇಕೆಂದು ಅರಿತು ವೃತ್ತಿ ಆಧಾರಿತವಾಗಿ ನಗರತ್ ಪೇಟೆ, ಚಿಕ್ಕಪೇಟೆ, ಬಳೆಪೇಟೆ ಸೇರಿದಂತೆ ಅನೇಕ ಪೇಟೆಗಳನ್ನು ತಮ್ಮ ಆಡಳಿತಾವಧಿಯಲ್ಲಿ ನಿರ್ಮಿಸಿದ್ದರು. ಅವರ ಆಡಳಿತ ನಮಗೆಲ್ಲರಿಗೂ ಮಾದರಿ.

ಬೆಂಗಳೂರು ಅಭಿವೃದ್ಧಿ ಮಾಡುವ ಕೆಂಪೇಗೌಡರ ಕನಸನ್ನು ನನಸು ಮಾಡುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ. ಸುಮನಹಳ್ಳಿಯ ಜಗಜೀವನ್ ರಾಮ್ ನಗರದಲ್ಲಿ ಕೆಂಪೇಗೌಡ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ’ ಎಂದರು.


Share this Story:

Follow Webdunia kannada

ಮುಂದಿನ ಸುದ್ದಿ

ಸಂವಿಧಾನದಿಂದ ಜಾತ್ಯಾತೀತ ಕಿತ್ತು ಹಾಕಬೇಕೆಂದ ಆರ್ ಎಸ್ಎಸ್: ಮೋದಿ ಉತ್ತರಿಸಬೇಕು ಎಂದ ಸಿದ್ದರಾಮಯ್ಯ