Publish Date: Thu, 14 May 2026 (15:56 IST)
Updated Date: Thu, 14 May 2026 (15:58 IST)
ಬೆಂಗಳೂರು: ಹಿಜಾಬ್, ಜನಿವಾರ ಧರಿಸಲು ಅವಕಾಶ ಕೊಟ್ಟಿದ್ದೇವೆ. ಆದರೆ ಕೇಸರಿ ಶಾಲು, ಪೇಟ ಹಾಕಲು ಅವಕಾಶ ಕೊಟ್ಟಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯದಲ್ಲಿ ಹಿಜಾಬ್ ವಿವಾದ ಮತ್ತೆ ಭುಗಿಲೆದ್ದಿದೆ. ಬಿಜೆಪಿ ಅವಧಿಯಲ್ಲಿ ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ಗೆ ನಿಷೇಧ ಹೇರಲಾಗಿತ್ತು. ಆದರೆ ಈಗ ಕಾಂಗ್ರೆಸ್ ಸರ್ಕಾರ ಹಿಜಾಬ್ ಮೇಲಿನ ನಿಷೇಧ ತೆರವುಗೊಳಿಸಿದ್ದು ಶಾಲಾ, ಕಾಲೇಜುಗಳಲ್ಲಿ ಧರಿಸಲು ಅವಕಾಶ ಕೊಟ್ಟಿದೆ.
ಆದರೆ ಇದು ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಕೇಸರಿ ಶಾಲು, ಪೇಟ ಧರಿಸಲೂ ಅವಕಾಶ ಕೊಡಬೇಕು ಎಂದು ಆಗ್ರಹಿಸಿವೆ. ಇದರ ಬಗ್ಗೆ ಮಾಧ್ಯಮಗಳ ಮುಂದೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಹಿಜಾಬ್ ಮಾತ್ರವಲ್ಲ, ಜನಿವಾರ, ಶಿವಧಾರ, ಪೇಟಕ್ಕೂ ಅವಕಾಶ ಕೊಟ್ಟಿದ್ದೇವೆ. ಮೊದಲಿನಿಂದ ಯಾವ ಪೇಟಗಳಿವೆ ಅವುಗಳಿಗೆ ಮಾತ್ರ ಅವಕಾಶ ನೀಡಿದ್ದೇವೆ. ಹೊಸ ರೂಪದ ಪೇಟಗಳಿಗೆ ಅವಕಾಶವಿಲ್ಲ. ಶಾಲೆಗಳಿಗೆ ಕೇಸರಿ ಶಾಲು, ಪೇಟ ಧರಿಸಿ ಬರುವಂತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ