Webdunia - Bharat's app for daily news and videos

Install App

ದರ್ಶನ್ ಗೆ ನಾವೇನೂ ಸಪೋರ್ಟ್ ಮಾಡ್ತಿಲ್ಲ: ಸಿಎಂ ಸಿದ್ದರಾಮಯ್ಯ

Krishnaveni K
ಶುಕ್ರವಾರ, 30 ಆಗಸ್ಟ್ 2024 (18:00 IST)
ಹುಬ್ಬಳ್ಳಿ: ನಟ ದರ್ಶನ್ ವಿಚಾರದಲ್ಲಿ ನಮ್ಮ ಸರ್ಕಾರ ಯಾರ ಪರವಾಗಿಯೂ ಕೆಲಸ ಮಾಡುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ.

ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡುತ್ತಿದ್ದ ಫೋಟೋಗಳು ವೈರಲ್ ಆಗಿದ್ದ ಕಾರಣ ರಾಜ್ಯ ಸರ್ಕಾರದ ವಿರುದ್ಧವೂ ಆಕ್ರೋಶ ವ್ಯಕ್ತವಾಗಿತ್ತು. ಜೈಲಿನಲ್ಲಿ ಖೈದಿಗಳಿಗೆ ಯಾವುದೇ ಕಟ್ಟುನಿಟ್ಟು ಇಲ್ಲದೇ ಇರುವುದು ಸರ್ಕಾರದ ವೈಫಲ್ಯ ಎಂದೇ ಹೇಳಲಾಗುತ್ತಿತ್ತು.

ಆದರೆ ಇದೀಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಗೆ ವಿಐಪಿ ಟ್ರೀಟ್ ಮೆಂಟ್ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ‘ನಾವು ಯಾರ ಪರವೂ ಇಲ್ಲ. ಜೈಲಿನಲ್ಲಿ ರಾಜಾತಿಥ್ಯ ನೀಡಿದ ತಪ್ಪಿಗೆ 9 ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ದೇವೆ. ಯಾರನ್ನೂ ನಾವು ರಕ್ಷಿಸಿಲ್ಲ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕಾನೂನು ಪ್ರಕಾರ ಯಾವ ಕ್ರಮ ಕೈಗೊಳ್ಳಬೇಕೋ ಆ ರೀತಿ ಮಾಡಲಾಗುವುದು. ಜೈಲಿನಲ್ಲಿ ಆಗಿರುವ ಲೋಪದೋಷಗಳ ಬಗ್ಗೆ ಡಿಜಿಪಿಗೆ ನೋಟಿಸ್ ನೀಡಿದ್ದೇವೆ. ದರ್ಶನ್ ರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ ಎಂದು ಹುಬ್ಬಳ್ಳಿಯಲ್ಲಿ ಮಾಧ್ಯಮಗಳಿಗೆ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments