Select Your Language

Notifications

webdunia
webdunia
webdunia
webdunia

ಸಚಿವ ನಾಗೇಂದ್ರ ರಾಜಿನಾಮೆ ಕೇಳಿಲ್ಲ:ಮುಖ್ಯಮಂತ್ರಿ ಸಿದ್ದರಾಮಯ್ಯ

Siddaramaiah

Krishnaveni K

ಬೆಂಗಳೂರು , ಸೋಮವಾರ, 3 ಜೂನ್ 2024 (14:31 IST)
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಸಚಿವ ನಾಗೇಂದ್ರ ಅವರು ರಾಜಿನಾಮೆಯನ್ನು ಕೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
 
 
ಅವರು ಇಂದು ವಿಧಾನಸೌಧದಲ್ಲಿ ವಿಧಾನಪರಿಷತ್ ಚುನಾವಣೆಗೆ ತಮ್ಮ ಪಕ್ಷದ ಅಭ್ಯರ್ಥಿಯ ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. 
 
ಸಚಿವರು ಮುಖ್ಯಮಂತ್ರಿಗಳಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿರುವ  ಬಗ್ಗೆ ಮಾತನಾಡಿ ನಮಗೆ  ಯಾರೂ ಯಾವ ಬೆದರಿಕೆಯೂ ಹಾಕಿಲ್ಲ ಎಂದರು. 
 
ವಾಲ್ಮೀಕಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಬಿಜೆಪಿ ಅವರು ಸಚಿವ ನಾಗೇಂದ್ರ ಅವರ ರಾಜಿನಾಮೆಗೆ ಜೂನ್ ಆರರವರೆಗೆ ಗಡುವು ನೀಡಿರುವ ಬಗ್ಗೆ   ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಪ್ರಾಥಮಿಕ ವರದಿ ಪಡೆದು ನಂತರ ತೀರ್ಮಾನಿಸಲಾಗುವುದು ಎಂದರು.   
 
 
ನಮ್ಮ ಅಭ್ಯರ್ಥಿಗಳು ಗೆಲ್ಲಲು 19 ರಿಂದ 20 ಮತಗಳು ಅಗತ್ಯವಿದ್ದು, ಬಿಜೆಪಿಯವರು, ಜೆಡಿಎಸ್ ಅವರು ಒಬ್ಬರಿಗೆ  ನಾಮಪತ್ರಗಳ ಪರಿಶೀಲನೆಯ ನಂತರ ತಿಳಿಯಲಿದೆ. ಒಂದು ವೇಳೆ ಜಾಸ್ತಿಯಾದರೆ ಚುನಾವಣೆ ನಡೆಯಬೇಕು. ಚುನಾವಣೆ ನಡೆದರೂ ನಮ್ಮ ಅಭ್ಯರ್ಥಿ ಗೆಲ್ಲುತ್ತಾರೆ ಎಂದರು.
 

Share this Story:

Follow Webdunia kannada

ಮುಂದಿನ ಸುದ್ದಿ

ದೆಹಲಿ ಅಬಕಾರಿ ಹಗರಣ: ಕವಿತಾಗೆ ನ್ಯಾಯಾಂಗ ಬಂಧನ ವಿಸ್ತರಿಸಿದ ಕೋರ್ಟ್‌