ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಬಗ್ಗೆ ಪೊಲೀಸ್ ಇಲಾಖೆ ತೀರ್ಮಾನಿಸಲಿದೆ: ಸಿದ್ದರಾಮಯ್ಯ

Krishnaveni K
ಮಂಗಳವಾರ, 27 ಆಗಸ್ಟ್ 2024 (16:08 IST)
ಬೆಂಗಳೂರು: ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಪೊಲೀಸ್ ಇಲಾಖೆ ತೀರ್ಮಾನ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಜೈಲಿನಲ್ಲಿ ವಿಶೇಷ ಸೌಲಭ್ಯ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಈಗಾಗಲೇ 9 ಜನರನ್ನು ಅಮಾನತು ಮಾಡಲಾಗಿದೆ. ಪ್ರಕರಣಕ್ಕೆಸಂಬಂಧಿಸಿದಂತೆ  ತನಿಖೆ ಕೈಗೊಂಡಿದ್ದು, ವರದಿ ಆಧಾರದ ಮೇಲೆ ತಪ್ಪೆಸಗಿರುವ ಇನ್ನಷ್ಟು ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು ಎಂದರು.

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಕಾಫಿ ಮಗ್ ಹಿಡಿದುಕೊಂಡು ಸಿಗರೇಟು ಸೇದುತ್ತಿದ್ದ ದೃಶ್ಯ
ವೈರಲ್ ಆಗಿತ್ತು. ಜೊತೆಗೆ ಅವರು ವಿಡಿಯೋ ಕಾಲ್ ನಲ್ಲಿ ಮಾತನಾಡುತ್ತಿರುವ ದೃಶ್ಯವೂ ಬಹಿರಂಗವಾಗಿತ್ತು. ಈ ಹಿನ್ನಲೆಯಲ್ಲಿ ಅವರನ್ನು ಈಗ ಬೇರೆ ಜೈಲಿಗೆ ಸ್ಥಳಾಂತರಿಸಲು ಚಿಂತನೆ ನಡೆದಿದೆ.

ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಟ್ವೀಟ್ ಮುಖಾಂತರ ಪ್ರಕರಣದ ಬಗ್ಗೆ ತನಿಖೆಗೆ ಆದೇಶಿಸಿದ್ದರು. ಅಲ್ಲದೆ, ದರ್ಶನ್ ರನ್ನು ಬೇರೆ ಜೈಲಿಗೆ ಸ್ಥಳಾಂತರಿಸಲು ಸೂಚನೆ ನೀಡಿದ್ದರು. ಇದೀಗ ಪೊಲೀಸರು ಪರಪ್ಪನ ಅಗ್ರಹಾರದಲ್ಲಿ ನಡೆಯುತ್ತಿರುವ ಅಕ್ರಮಗಳ ಬಗ್ಗೆ ತನಿಖೆಗೆ ಮುಂದಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಉಡು‍ಪಿ: ನೌಕಾಪಡೆ ಹಡಗಿನ ಮಾಹಿತಿ ಸೋರಿಕೆ, ಇಬ್ಬರು ಅರೆಸ್ಟ್‌

ಮುಂದಿನ ಸುದ್ದಿ
Show comments