Select Your Language

Notifications

webdunia
webdunia
webdunia
webdunia

ರಾಹುಲ್ ಗಾಂಧಿ ತ್ಯಾಗ, ಬಲಿದಾನದ ಕುಟುಂಬದಿಂದ ಬಂದವರು: ಸಿಎಂ ಸಿದ್ದರಾಮಯ್ಯ

Siddaramaiah Pressmeet

Krishnaveni K

ಬೆಂಗಳೂರು , ಬುಧವಾರ, 18 ಸೆಪ್ಟಂಬರ್ 2024 (14:55 IST)
ಬೆಂಗಳೂರು: ಇತ್ತೀಚೆಗೆ ಕೆಲವು ಬಿಜೆಪಿ ಮತ್ತು ಅದರ ಮಿತ್ರ ಪಕ್ಷಗಳ ನಾಯಕರು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾಡಿರುವ ಅಸಭ್ಯ ಪದ ಬಳಕೆಯ ಟೀಕೆಗಳಿಗೆ ಸಿಎಂ ಸಿದ್ದರಾಮಯ್ಯ ಇಂದು ಪತ್ರಿಕಾಗೋಷ್ಠಿಯಲ್ಲಿ ಕಿಡಿ ಕಾರಿದ್ದಾರೆ.

ಇಂಧಿರಾಗಾಂಧಿ, ರಾಜೀವ್ ಗಾಂಧಿ ದೇಶಕ್ಕಾಗಿ ಹುತಸತ್ಮರಾಗಿದ್ದಾರೆ. ಇಂಥಾ ಉನ್ನತ ತ್ಯಾಗ ಬಲಿದಾನದ ಕುಟುಂಬದಿಂದ ಬಂದು ರಾಹುಲ್ ಗಾಂಧಿ ಅವರು ದೇಶಕ್ಕಾಗಿ ಅವಿರತ ಹೋರಾಟ ನಡೆಸುತ್ತಿದ್ದಾರೆ. ಅಜ್ಜಿ ಇಂದಿರಾಗಾಂಧಿ ಅವರಿಗೆ ಆದ ಗತಿಯೇ ನಿಮಗೂ ಆಗುತ್ತದೆ ಎಂದು ರಾಹುಲ್ ಗೆ ಬಿಜೆಪಿ‌ ಬೆದರಿಕೆ ಹಾಕಿದೆ. ಕೇಂದ್ರದ ರೈಲ್ವೆ ಖಾತೆ ರಾಜ್ಯ ಸಚಿವ ರಾಹುಲ್ ಗಾಂಧಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಾರೆ. ಈ ರೀತಿ ಜೀವ ಬೆದರಿಕೆಗಳ ಮೂಲಕ ಬಿಜೆಪಿಯ ಕಾರ್ಯಕರ್ತರನ್ನು ಎತ್ತಿಕಟ್ಟುವ ಷಡ್ಯಂತ್ರ ನಡೆಯುತ್ತಿದೆ ಎಂದು ಸಿಎಂ ಆರೋಪಿಸಿದ್ದಾರೆ.

ರಾಹುಲ್ ಗಾಂಧಿ ನಾಲಗೆ ಕತ್ತರಿಸಿದವರಿಗೆ 11 ಲಕ್ಷ ಬಹುಮಾನ‌ ಕೊಡುವುದಾಗಿ ಶಿವಸೇನೆಯ ಶಿಂಧೆ ಬಣದ ಶಾಸಕ ಸಂಜಯ್ ಗಾಯಕ್ ವಾಡ್ ಅವರು ರಾಹುಲ್ ಗಾಂಧಿ ನಾಲಗೆ ಕತ್ತರಿಸಲು ಕರೆ ನೀಡಿದ್ದಾರೆ. ಇದೂ ಕೂಡ ಕೊಲೆ ಬೆದರಿಕೆಯೇ ಆಗಿದೆ.  ಆದ್ದರಿಂದ ಈ ಕೂಡಲೇ ಸಂಜಯ್ ಗಾಯಕ್ ವಾಡ್ ಮೇಲೆ ಕ್ರಿಮಿನಲ್ ಕೇಸು ದಾಖಲಿಸಿ ಜೈಲಿಗೆ ತಳ್ಳಲು ಸಿಎಂ‌ ಆಗ್ರಹಿಸಿದರು.

ಉತ್ತರ ಪ್ರದೇಶದ ಸಚಿವರೊಬ್ಬರು ರಾಹುಲ್ ಗಾಂಧಿ ಈ ದೇಶದ ನಂಬರ್ ಒನ್ ಭಯೋತ್ಪಾದಕ ಎಂದು ಹೇಳಿಕೆ ನೀಡಿದ್ದಾರೆ. ಆದರೆ ಇವತ್ತಿನವರೆಗೂ ಬಿಜೆಪಿ ಪಕ್ಷವಾಗಲಿ, ಬಿಜೆಪಿ ಸರ್ಕಾರವಾಗಲಿ, ಕೇಂದ್ರ ಸರ್ಕಾರವಾಗಲಿ ಕಠಿಣ ಕ್ರಮ ತೆಗೆದುಕೊಂಡಿಲ್ಲ. ಕಾಟಾಚಾರಕ್ಕೆ ಕೇಸು ದಾಖಲಿಸಿ ಕೈ ಚೆಲ್ಲಿದ್ದಾರೆ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಹೂತು ಹಾಕುವುದಾಗಿ ಸಂಜಯ್ ಗಾಯಕ್ ವಾಡ್ ಮತ್ತೆ ಬೆದರಿಕೆ ಹಾಕಿದ್ದಾನೆ. ರಾಹುಲ್ ಗಾಂಧಿಯವರನ್ನು ಮುಗಿಸಲು ಬಿಜೆಪಿ ಸಂಚು ನಡೆಸುತ್ತಿದೆ. ರಾಹುಲ್ ರನ್ನು ರಾಜಕೀಯವಾಗಿಯೂ ಮುಗಿಸುವ ಜೊತೆಗೆ ಪ್ರಾಣ ಭಯ ಹುಟ್ಟಿಸುವ ಬಿಜೆಪಿ ಷಡ್ಯಂತ್ರ ಆತಂಕಕಾರಿಯಾದದ್ದು ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ರಾಹುಲ್ ಗಾಂಧಿ ಅವರಿಗೆ ಜೀವ ಬೆದರಿಕೆ ಹಾಕಿರುವ ಎಲ್ಲರ ವಿರುದ್ಧ ಕ್ರಿಮಿನಲ್ ಕೇಸು ಹಾಕಿ ತಕ್ಷಣ ಬಂಧಿಸಬೇಕು. ತ್ಯಾಗ ಬಲಿದಾನದ ಸಂಸ್ಕೃತಿ ಮತ್ತು ಹುತಾತ್ಮರ ಕುಟುಂಬದಿಂದ ಬಂದ ರಾಹುಲ್ ಗಾಂಧಿ ಅವರು ಇದಕ್ಕೆಲ್ಲಾ ಹೆದರುವವರಲ್ಲ ಎಂದು ಸಿಎಂ ಹೇಳಿದ್ದಾರೆ.

ನರೇಂದ್ರ ಮೋದಿ ಈ ಬಾರಿ ಐದು ವರ್ಷ ಪೂರೈಸಲ್ಲ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಹೇಳಿದರು. ದೇಶದಲ್ಲಿ‌ ಆಗುತ್ತಿರುವ ರಾಜಕಾರಣದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಮೋದಿ ಅವರು ಈ ಬಾರಿ ಪೂರ್ಣಾವಧಿ ಮುಗಿಸೋದು ಡೌಟು. ನಿತೀಶ್ ಕುಮಾರ್, ಚಂದ್ರಬಾಬು ನಾಯ್ಡು ಅವರು ಹೆಚ್ಚು ದಿನ ಕೇಂದ್ರ ಸರ್ಕಾರದ ಜೊತೆ ಇರುವುದಿಲ್ಲ ಎನ್ನಿಸುತ್ತಿದೆ

ಅಸಹ್ಯವಾಗಿ ನಾಲಗೆ ಗರಿಬಿಟ್ಟು ಮಹಿಳಾ ಸಮುದಾಯವನ್ನು, ದಲಿತ ಜನಾಂಗವನ್ನು, ಒಕ್ಕಲಿಗ ಸಮುದಾಯವನ್ನು ಅತ್ಯಂತ ಕೆಟ್ಟದಾಗಿ ಅವಹೇಳನ ಮಾಡಿರುವ BJP ಶಾಸಕ ಮುನಿರತ್ನಂ ವಿರುದ್ಧ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಬೇಕು ಎನ್ನುವ ಬೇಡಿಕೆ ಇದೆ . ಸದ್ಯ ಮುನಿರತ್ನಂ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದರು. ಪೊಲೀಸರು ತನಿಖೆ ನಡೆಸಿದ್ದಾರೆ. ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯ ಮುನಿರತ್ನಂ ಅವರನ್ನು ಜೈಲಿಗೆ ಒಪ್ಪಿಸಿದೆ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಕರಾವಳಿ, ಮಲೆನಾಡಿನಲ್ಲಿ ಇಂದು ಸಾಧಾರಣ ಮಳೆ ಸಾಧ್ಯತೆ