ಬೆಂಗಳೂರು: ಮಹದೇವಪುರ ವ್ಯಾಪ್ತಿಯಲ್ಲಿ ಲೋಕಸಭೆ ಚುನಾವಣೆ ವೇಳೆ ಮತಗಳ್ಳತನವಾಗಿದೆ ಎಂದು ಆರೋಪಿಸಿ ರಾಹುಲ್ ಗಾಂಧಿ ಪ್ರತಿಭಟನಾ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ರಾಹುಲ್ ಬಳಿ ಎಲ್ಲಾ ಸಾಕ್ಷ್ಯಗಳೂ ಇವೆ ಎಂದಿದ್ದಾರೆ.
ಆಗಸ್ಟ್ 5 ರಂದು ರಾಹುಲ್ ಗಾಂಧಿ ಬೆಂಗಳೂರಿನ ಮಹದೇವಪುರದಲ್ಲಿ ಮತಗಳ್ಳತನದ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ. ಪಾದಯಾತ್ರೆಯಲ್ಲಿ ತೆರಳಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಿದ್ದಾರೆ. ಈ ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಭಾಗಿಯಾಗಲಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಹದೇವಪುರ ಮತ್ತು ರಾಜಾಜಿನಗರದಲ್ಲಿಮತಗಳ್ಳತನ ಆಗಿರುವ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರ ಬಳಿ ಸಾಕ್ಷಿ ಇದೆ. ಹಾಗಾಗಿ ಅವರು ಆಗಸ್ಟ್ 05ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ಹಮ್ಮಿಕೊಂಡು, ರಾಜ್ಯ ಮುಖ್ಯ ಚುನಾವಣಾಧಿಕಾರಿಗಳನ್ನು ಭೇಟಿಯಾಗಲಿದ್ದಾರೆ ಎಂದಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿರುವ ನೆಟ್ಟಿಗರು ಸಾಕ್ಷಿ ಇದ್ದರೆ ಕೋರ್ಟ್ ಗೆ ಯಾಕೆ ಹೋಗ್ತಿಲ್ಲ. ಪ್ರತಿಭಟನೆ ಮಾಡುವುದರಿಂದ ಏನು ಉಪಯೋಗ ಎಂದಿ ಪ್ರಶ್ನೆ ಮಾಡಿದ್ದಾರೆ. ಪ್ರತಿಪಕ್ಷ ಬಿಜೆಪಿ ನಾಯಕರೂ ರಾಹುಲ್ ಪ್ರತಿಭಟನೆಯನ್ನು ಟೀಕಿಸಿದ್ದು ರಾಹುಲ್ ಹತಾಶರಾಗಿ ಇಂತಹ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ವಿಜಯೇಂದ್ರ ಟೀಕಿಸಿದ್ದಾರೆ.