Select Your Language

Notifications

webdunia
webdunia
webdunia
webdunia

ದೆಹಲಿಯಲ್ಲಿ ಸ್ಪೋಟದ ಬೆನ್ನಲ್ಲೇ ಬೆಂಗಳೂರಲ್ಲಿ ಕಟ್ಟೆಚ್ಚರ: ಸಿಎಂ ಮಹತ್ವದ ಸಂದೇಶ

Siddaramaiah

Krishnaveni K

ಬೆಂಗಳೂರು , ಮಂಗಳವಾರ, 11 ನವೆಂಬರ್ 2025 (11:35 IST)
ಬೆಂಗಳೂರು: ದೆಹಲಿಯಲ್ಲಿ ಕಾರು ಸ್ಪೋಟವಾದ ಬೆನ್ನಲ್ಲೇ ಇದೀಗ ಬೆಂಗಳೂರಿನಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಂದೇಶ ನೀಡಿದ್ದಾರೆ.

ದೆಹಲಿಯಲ್ಲಿ ನಿನ್ನೆ ಸಂಜೆ ನಡೆದ ಕಾರು ಸ್ಪೋಟದಲ್ಲಿ 8 ಮಂದಿ ಸಾವನ್ನಪ್ಪಿದ್ದು ಹಲವರಿಗೆ ಗಾಯಗಳಾದ ವರದಿಗಳಾಗಿವೆ. ಸ್ಪೋಟದ ತೀವ್ರತೆಗೆ ಸುತ್ತಮುತ್ತಲಿನ ವಾಹನಗಳು, ಅಂಗಡಿ ಮುಂಗಟ್ಟುಗಳು ಹಾನಿಗೀಡಾಗಿವೆ. ಈ ಘಟನೆ ಈಗ ಜನರಲ್ಲಿ ಆತಂಕ ಸೃಷ್ಟಿಸಿದೆ.

ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಬೆಂಗಳೂರಿನಲ್ಲೂ ಕಟ್ಟೆಚ್ಚರ ವಹಿಸುವುದಾಗಿ ಹೇಳಿದ್ದಾರೆ. ‘ದೆಹಲಿಯ ಸ್ಪೋಟ ಪ್ರಕರಣವನ್ನು ರಾಜ್ಯ ಸರ್ಕಾರವು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ. ಜನನಿಬಿಡ ಸ್ಥಳಗಳಲ್ಲಿ ಭದ್ರತೆಯನ್ನು ಹೆಚ್ಚಿಸಿ, ಜನರ ಸುರಕ್ಷತೆಗೆ ಆದ್ಯತೆ ನೀಡುವಂತೆ ಗೃಹ ಇಲಾಖೆಗೆ ಸೂಚನೆ ನೀಡಲಾಗಿದೆ.

ರಾಜ್ಯದಲ್ಲಿ ಯಾವುದೇ ತರನಾದ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಸಾರ್ವಜನಿಕರು ಕೂಡ ಪೊಲೀಸ್ ಇಲಾಖೆಯ ಜೊತೆ ಸಹಕರಿಸಬೇಕು ಎಂದು ಮನವಿ ಮಾಡುತ್ತೇನೆ’ ಎಂದಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಮೋದಿ ಭೂತಾನ್ ಪ್ರವಾಸ: ದೆಹಲಿಯಲ್ಲಿ ಸ್ಪೋಟವಾಗಿರುವಾಗ ವಿದೇಶ ಯಾತ್ರೆ ಬೇಕಿತ್ತಾ ಎಂದ ನೆಟ್ಟಿಗರು