Webdunia - Bharat's app for daily news and videos

Install App

ಜಾತಿಗಣತಿ ವರದಿಯೇ ಹೊರಬಿದ್ದಿಲ್ಲ, ಆಗಲೇ ವದಂತಿ ಹಬ್ಬಿದರೆ ಹೇಗೆ: ಸಿಎಂ ಸಿದ್ದರಾಮಯ್ಯ

Krishnaveni K
ಬುಧವಾರ, 15 ಜನವರಿ 2025 (16:35 IST)
ನವದೆಹಲಿ, ಜನವರಿ 15: ಜಾತಿಗಣತಿ ವರದಿಯಲ್ಲಿರುವ ಅಂಕಿಅಂಶ ಇನ್ನೂ ಸಾರ್ವಜನಿಕವಾಗದೇ, ಊಹಾಪೋಹಗಳಾಗಿರುವುದರಿಂದ, ಈ ವಿಚಾರದ ಬಗ್ಗೆ ವಿರೋಧ ಅನವಶ್ಯಕ. ನಾಳೆ ನಡೆಯುವ ಸಂಪುಟಸಭೆಯಲ್ಲಿ  ಜಾತಿ ಗಣತಿ ವರದಿಯ ವಿಷಯವನ್ನು ಮಂಡಿಸಲಾಗುವುದಿಲ್ಲ. ಮುಂದಿನ ಸಂಪುಟಸಭೆಯಲ್ಲಿ ವಿಷಯ ಮಂಡಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
 
 
ಅವರು ಇಂದು ನವದೆಹಲಿಯಲ್ಲಿ ಉದ್ಘಾಟನೆಗೆ ಸಿದ್ದವಾಗಿರುವ ಕನ್ನಡ ಭವನದ ನೂತನ ಕಟ್ಟಡವನ್ನು ವೀಕ್ಷಿಸಿದ ನಂತರ ಜಾತಿ ಗಣತಿ ವರದಿಯ ಜಾರಿ ಬಗ್ಗೆ ಉತ್ತರಿಸುತ್ತಾ ಮಾಧ್ಯಮದವರೊಂದಿಗೆ ಮಾತನಾಡಿದರು.
 
ಏಐಸಿಸಿ ಕಚೇರಿ ಉದ್ಘಾಟನೆ
 
ಏಐಸಿಸಿ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಲೋಕಸಭಾ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಏಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರ ಭಾಷಣ ಉತ್ತಮವಾಗಿತ್ತು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಶಂಕುಸ್ಥಾಪನೆಗೊಂಡಿದ್ದ ಕಟ್ಟಡ , ಇಂದು ಸುಸಜ್ಜಿತ ಕಟ್ಟಡವಾಗಿ ಉದ್ಘಾಟನೆಗೊಂಡಿದೆ ಎಂದು ತಿಳಿಸಿದರು.
 
ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಲಿಲ್ಲ
 
ಆರ್ ಎಸ್ ಎಸ್ ಪ್ರಮುಖ ಮೋಹನ್ ಭಾಗವತ್ ಅವರು ಆಯೋಧ್ಯೆಯ ರಾಮಮಂದಿರ ಪ್ರಾರಂಭವಾದ ದಿನ ದೇಶಕ್ಕೆ ನಿಜಅರ್ಥದಲ್ಲಿ ಸ್ವಾತಂತ್ರ್ಯ  ಲಭಿಸಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ರಾಹುಲ್ ಗಾಂಧಿಯವರು ತಮ್ಮ ಭಾಷಣದಲ್ಲಿಯೂ ಪ್ರಸ್ತಾಪಿಸಿದ್ದರು. ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸದೇ ಆರ್ ಎಸ್ ಎಸ್ ಹಾಗೂ ಬಿಜೆಪಿಯವರು ಬ್ರಿಟೀಷರೊಂದಿಗೆ ಶಾಮೀಲಾಗಿದ್ದರು. ಮೋಹನ್ ಭಾಗವತರ ಹೇಳಿಕೆ ಸರಿಯಾದುದಲ್ಲ ಎಂದರು.
 
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ- ವರಿಷ್ಠರ ತೀರ್ಮಾನ ಅಂತಿಮ
 
ಸಚಿವ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಬದಲಾಗಬೇಕು ಎಂದು ಅಭಿಪ್ರಾಯಪಟ್ಟಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ  ಪಕ್ಷದ ವರಿಷ್ಠರು ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಅವರ ತೀರ್ಮಾನವೇ ಅಂತಿಮ ಎಂದು ತಿಳಿಸಿದರು.
 
ಹಂತ ಹಂತವಾಗಿ ಬಾಕಿ ಪಾವತಿ
 
ಕಿಯೋನಿಕ್ಸ್ ಅಸೋಸಿಯೇಷನ್ ‍ಅವರು ಬಾಕಿ ಇರುವ ಬಿಲ್ಲುಗಳು ಪಾವತಿಯಾಗದಿರುವ ಬಗ್ಗೆ ರಾಜ್ಯಪಾಲರಿಗೆ ದೂರು ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಹಿಂದಿನ ಬಿಜೆಪಿ ಸರ್ಕಾರದವರು ದೊಡ್ಡ ಮೊತ್ತದ ಬಿಲ್ಲುಗಳನ್ನು ಪಾವತಿ ಮಾಡದೇ ಬಾಕಿ ಉಳಿಸಿದ್ದಾರೆ. ಈ ಬಿಲ್ಲುಗಳನ್ನು ಹಂತ ಹಂತವಾಗಿ ಪಾವತಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments