ನಾನು ರಾಜೀನಾಮೆ ಕೊಡೋದಿಲ್ಲ ಅಂದ್ರೆ ಕೊಡೋದಿಲ್ಲ ಮೋದಿ ರಾಜೀನಾಮೆ ಕೊಡಬೇಕಿತ್ತು: ಸಿಎಂ ಸಿದ್ದರಾಮಯ್ಯ

Krishnaveni K
ಗುರುವಾರ, 26 ಸೆಪ್ಟಂಬರ್ 2024 (13:25 IST)
ಬೆಂಗಳೂರು: ಮುಡಾ ಹಗರಣದಲ್ಲಿ ತಮ್ಮ ವಿರುದ್ಧ ತನಿಖೆಗೆ ಆದೇಶಿಸಿದರೂ ತಾನು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ಕೋರ್ಟ್ ತನಿಖೆಗೆ ಆದೇಶಿಸುತ್ತಿದ್ದಂತೇ ಬಿಜೆಪಿ ರಾಜೀನಾಮೆಗೆ ಒತ್ತಡ ಹೇರಿ ಪ್ರತಿಭಟನೆ ನಡೆಸುತ್ತಿದೆ. ತಮ್ಮ ವಿರುದ್ಧ ತನಿಖೆಗೆ ಆದೇಶಿಸುತ್ತಿದ್ದಂತೇ ಸಿದ್ದರಾಮಯ್ಯ ನಾನು ರಾಜೀನಾಮೆ ಕೊಡಲ್ಲ, ಬಿಜೆಪಿ-ಜೆಡಿಎಸ್ ಒತ್ತಡಕ್ಕೆ ಮಣಿಯಲ್ಲ ಎಂದಿದ್ದರು.

ಇಂದೂ ಬಿಜೆಪಿ ಅವರ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ. ಈ ಹಿನ್ನಲೆಯಲ್ಲಿ ಇಂದು ಮತ್ತೆ ಮಾಧ್ಯಮಗಳು ಸಿಎಂ ಸಿದ್ದರಾಮಯ್ಯನವರನ್ನು ರಾಜೀನಾಮೆ ಕೊಡ್ತೀರಾ ಎಂದು ಪ್ರಶ್ನೆ ಮಾಡಿದೆ. ಇದಕ್ಕೆ ಉತ್ತರಿಸಿರುವ ಸಿಎಂ, ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ. ನಾನು ಏನೂ ತಪ್ಪು ಮಾಡಿಲ್ಲ. ನಾನು ಯಾಕೆ ರಾಜೀನಾಮೆ ಕೊಡಲಿ ಎಂದು ಸಿದ್ದು ಪುನರುಚ್ಚರಿಸಿದ್ದಾರೆ.

‘ಮೊದಲು ಕುಮಾರಸ್ವಾಮಿಯವರು ರಾಜೀನಾಮೆ ಕೊಡ್ಲಿ. ಅವರ ಮೇಲೂ ಆಪಾದನೆಗಳಿಲ್ವಾ? ಅವರು ಎಲ್ಲಿ ಸಚಿವರಾಗಿರೋದು? ಯಾರು ಪ್ರಧಾನ ಮಂತ್ರಿ? ಯಾರ ಪಕ್ಷ ಅಧಿಕಾರದಲ್ಲಿರೋದು? ಮೊದಲು ಅವರು ರಾಜೀನಾಮೆ ಕೊಡಲಿ. ನಾನು ಏನೂ ತಪ್ಪು ಮಾಡಿಲ್ಲ. ನಾನ್ಯಾಕೆ ಕೊಡಲಿ ರಾಜೀನಾಮೆಯಾ? ಈ ಹಿಂದೆ ಮೋದಿ ರಾಜೀನಾಮೆ ಕೊಟ್ಟಿದ್ರಾ? ಅವರು ಮುಖ್ಯಮಂತ್ರಿಯಾಗಿದ್ದಾಗ ನೂರಾರು ಜನ ಸಾವನ್ನಪ್ಪಿದ್ದರು. ಆಗಲೂ ರಾಜೀನಾಮೆ ಕೊಟ್ಟಿಲ್ಲ. ಈಗ ನಾನು ಯಾಕೆ ಕೊಡಲಿ’ ಎಂದು ಸಿದ್ದು ಗರಂ ಆಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments