Select Your Language

Notifications

webdunia
webdunia
webdunia
webdunia

ಶಕ್ತಿ ಯೋಜನೆ ಗೋಲ್ಡನ್ ಬುಕ್ ರೆಕಾರ್ಡ್ ಪಟ್ಟಿಗೆ: ಸಿದ್ದರಾಮಯ್ಯ ಖುಷಿಗೆ ಹೇಳಿದ್ದೇನು ನೋಡಿ

Siddaramaiah

Krishnaveni K

ಬೆಂಗಳೂರು , ಮಂಗಳವಾರ, 19 ಆಗಸ್ಟ್ 2025 (09:38 IST)
ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಒದಗಿಸುವ ಶಕ್ತಿ ಯೋಜನೆ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆಯಾಗಿದೆ. ಇದರ ಬಗ್ಗೆ ಸಿಎಂ ಸಿದ್ದರಾಮಯ್ಯ ಖುಷಿ ಹಂಚಿಕೊಂಡಿದ್ದಾರೆ.
 

‘ಇಡೀ ನಾಡು ಹೆಮ್ಮೆ ಪಡುವ ಕ್ಷಣವಿದು. ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯು ಪ್ರತಿಷ್ಠಿತ "Golden Book of World Records" ನಲ್ಲಿ ದಾಖಲಾಗಿ ಇತಿಹಾಸ ನಿರ್ಮಿಸಿದೆ. 
 
ಮಹಿಳಾ ಸಬಲೀಕರಣದೆಡೆಗಿನ ದಿಟ್ಟ ಹೆಜ್ಜೆಯಾದ ಶಕ್ತಿ ಯೋಜನೆಯು ಚಾಲನೆಗೊಂಡ ದಿನದಿಂದ ಅಂದರೆ ಜೂನ್ 11, 2023 ರಿಂದ ಜುಲೈ 25, 2025 ರ ಅವಧಿಯಲ್ಲಿ 504 ಕೋಟಿ 90 ಲಕ್ಷಕ್ಕೂ ಹೆಚ್ಚು ಬಾರಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಸ್ವಾವಲಂಬಿ ಬದುಕಿನೆಡೆಗೆ ಪ್ರಯಾಣಿಸುವ ಮೂಲಕ ಈ ಇತಿಹಾಸ ಸೃಷ್ಟಿಸಿದ್ದಾರೆ. 
 
ಈ ಸಾಧನೆಯ ಶ್ರೇಯ ಉದ್ಯೋಗ, ಶಿಕ್ಷಣ, ವೈದ್ಯಕೀಯ ಚಿಕಿತ್ಸೆ ಮುಂತಾದ ಉದ್ದೇಶಗಳಿಗಾಗಿ ನಿತ್ಯ ಸಂಚರಿಸುವ ನಾಡಿನ ನನ್ನ ತಾಯಂದಿರಿಗೆ, ಅಕ್ಕ - ತಂಗಿಯರಿಗೆ ಸಲ್ಲಬೇಕು. 
 
ಔದ್ಯೋಗಿಕ ವಲಯದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ, ಜೊತೆಗೆ ರಾಜ್ಯದ ತಲಾದಾಯವು ದೇಶದಲ್ಲೇ ನಂಬರ್ 01 ಸ್ಥಾನಕ್ಕೆ ತಲುಪಿದೆ. ಶಕ್ತಿ ಯೋಜನೆಯು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಮಹಿಳೆಯರನ್ನು ಸಬಲರನ್ನಾಗಿಸುತ್ತದೆ ಎಂಬ ನನ್ನ ನಂಬಿಕೆ ಈ ಮೂಲಕ ಹುಸಿಯಾಗಲಿಲ್ಲ. 
 
ಯೋಜನೆಯನ್ನು ಜಾರಿಗೆ ಕೊಟ್ಟ ನನಗಿದು ಅತ್ಯಂತ ಸಂತಸದ ಕ್ಷಣ. ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿಯವರಿಗೂ, ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗಕ್ಕೂ ಅಭಿನಂದನೆಗಳು.’ ಎಂದಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಮೋದಿ, ಪುಟಿನ್ ಭಾರೀ ಫ್ರೆಂಡ್ಸ್ ಎನ್ನುವುದಕ್ಕೆ ಇದೇ ಸಾಕ್ಷಿ