Publish Date: Thu, 17 Aug 2017 (13:49 IST)
Updated Date: Thu, 17 Aug 2017 (13:53 IST)
ವಿಪಕ್ಷಗಳ ವಿರುದ್ಧ ಮನಬಂದಂತೆ ಟೀಕಿಸುತ್ತಿರುವ ಸಿಎಂ ಸಿದ್ದರಾಮಯ್ಯ. ಮೊದ್ಲು ಬುರುಡೆ ಬಿಡುವುದನ್ನು ನಿಲ್ಲಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಿರುದ್ಧ ಸಿಎಂ ಸಿದ್ದರಾಮಯ್ಯ ಮನಬಂದಂತೆ ವಾಗ್ದಾಳಿ ನಡೆಸಿದ್ದಾರೆ. ಸಿಎಂ ತಮ್ಮ ಸ್ಥಾನದ ಘನತೆ ಅರಿತು ಗಮನದಲ್ಲಿಟ್ಟುಕೊಂಡು ಹೇಳಿಕೆ ನೀಡಬೇಕು ಎಂದು ಕಿಡಿಕಾರಿದ್ದಾರೆ.
ಪ್ರಧಾನಿ ಮೋದಿಯವರ ಬಗ್ಗೆ ಕೇವಲವಾಗಿ ಮಾತನಾಡುವುದು ಸರಿಯಲ್ಲ. ದೇಶದ ಅತ್ಯುನ್ನತ ಸ್ಥಾನದಲ್ಲಿರುವವರ ವಿರುದ್ಧ ಲಘುವಾಗಿ ಹೇಳಿಕೆ ನೀಡುವುದು ಸೂಕ್ತವಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಮಿತ್ ಶಾ ಲೆಕ್ಕ ಕೇಳಿದ್ದಾರೆ. ದೇಶದ ಪ್ರಜೆಯಾಗಿ ಯಾರೂ ಬೇಕಾದರೂ ಲೆಕ್ಕ ಕೇಳಬಹುದು. ಆದ್ರೆ ಸಿಎಂ ಸಿದ್ದರಾಮಯ್ಯ ಇದ್ಯಾವುದನ್ನು ಲೆಕ್ಕಿಸದೇ ಕೇವಲವಾಗಿ ಮಾತನಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.