ಬೆಂಗಳೂರು: ಉಪಲೋಕಾಯುಕ್ತ ಬಿ ವೀರಪ್ಪ ಅವರು ಕರ್ನಾಟಕದಲ್ಲಿ ಶೇ. 63 ರಷ್ಟು ಭ್ರಷ್ಟಾಚಾರವಿದೆ ಎಂದಿದ್ದು ಬಿಜೆಪಿ ಕಾಲದ ವರದಿಗಳನ್ನು ಉಲ್ಲೇಖಿಸಿ. ಬಿಜೆಪಿಯವರು ಈಗ ತನ್ನ ಪಾಪದ ಗಂಟನ್ನು ನಮ್ಮ ತಲೆಗೆ ಕಟ್ಟಲು ಹೊರಟಿದೆ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಉಪಲೋಕಾಯುಕ್ತರ ಹೇಳಿಕೆ ಉಲ್ಲೇಖಿಸಿ ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದರು. ಇದಕ್ಕೆ ತಿರುಗೇಟು ನೀಡಿರುವ ಸಿದ್ದರಾಮಯ್ಯ ಟ್ರಾನ್ಸ್‌ಪರೆನ್ಸಿ ಇಂಡಿಯಾ ಇಂಟರ್ ನ್ಯಾಶನಲ್ ನವರು 2019ರ ನವೆಂಬರ್‌ನಲ್ಲಿ ನೀಡಿರುವ ವರದಿಯಲ್ಲಿ ರಾಜ್ಯದಲ್ಲಿ 63% ಭ್ರಷ್ಟಾಚಾರ ಇದೆ ಎಂಬುದಾಗಿತ್ತು. ಅದೇ ವರದಿಯನ್ನು ಆಧರಿಸಿ ಗೌರವಾನ್ವಿತ ಉಪಲೋಕಾಯುಕ್ತರಾದ ಬಿ.ವೀರಪ್ಪ ಅವರು ಇಂದು ಮಾತನಾಡಿದ್ದಾರೆ. ಈ ವರದಿ ಹೊರಬರುವ ವೇಳೆಯಲ್ಲಿ ರಾಜ್ಯದಲ್ಲಿ ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರ ಆಡಳಿತದಲ್ಲಿ ಇತ್ತು. ಆರ್.ಅಶೋಕ್ ಅವರು ಇಂದು ಉಪಲೋಕಾಯುಕ್ತರ ಮಾತನ್ನು ಸರಿಯಾಗಿ ಅರ್ಥೈಸಿಕೊಳ್ಳದೆ ಬಿಜೆಪಿಯ ಪಾಪದ ಗಂಟನ್ನು ನಮ್ಮ ತಲೆಗೆ ಕಟ್ಟಲು ಹೋಗಿ ತಮ್ಮ ಕಾಲ ಮೇಲೆ ತಾವೇ ಚಪ್ಪಡಿ ಎಳೆದುಕೊಂಡಿದ್ದಾರೆ.
ಟ್ರಾನ್ಸ್‌ಪರೆಸಿ ಇಂಡಿಯಾ ಇಂಟರ್ ನ್ಯಾಶನಲ್ ನವರು 2019ರ ನವೆಂಬರ್‌ನಲ್ಲಿ ನೀಡಿರುವ ವರದಿಯಲ್ಲಿ ರಾಜ್ಯದಲ್ಲಿ 63% ಭ್ರಷ್ಟಾಚಾರ ಇದೆ ಎಂಬುದಾಗಿತ್ತು. ಅದೇ ವರದಿಯನ್ನು ಆಧರಿಸಿ ಗೌರವಾನ್ವಿತ ಉಪಲೋಕಾಯುಕ್ತರಾದ ಬಿ.ವೀರಪ್ಪ ಅವರು ಇಂದು ಮಾತನಾಡಿದ್ದಾರೆ. ಈ ವರದಿ ಹೊರಬರುವ ವೇಳೆಯಲ್ಲಿ ರಾಜ್ಯದಲ್ಲಿ ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರ ಆಡಳಿತದಲ್ಲಿ ಇತ್ತು. ಆರ್.ಅಶೋಕ್ ಅವರು ಇಂದು ಉಪಲೋಕಾಯುಕ್ತರ ಮಾತನ್ನು ಸರಿಯಾಗಿ ಅರ್ಥೈಸಿಕೊಳ್ಳದೆ ಬಿಜೆಪಿಯ ಪಾಪದ ಗಂಟನ್ನು ನಮ್ಮ ತಲೆಗೆ ಕಟ್ಟಲು ಹೋಗಿ ತಮ್ಮ ಕಾಲ ಮೇಲೆ ತಾವೇ ಚಪ್ಪಡಿ ಎಳೆದುಕೊಂಡಿದ್ದಾರೆ ಎಂದಿದ್ದಾರೆ.