ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಮತ್ತು ಜಾತಿ ಸಮೀಕ್ಷೆ ವಿರೋಧಿಸುತ್ತಿರುವ ರಾಜ್ಯ ಬಿಜೆಪಿ ನಾಯಕರು ಕೇಂದ್ರ ಸರ್ಕಾರ ಜಾತಿ ಗಣತಿ ಮಾಡುವಾಗಲೂ ಇದೇ ರೀತಿ ವಿರೋಧ ಮಾಡ್ತಾರಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.
ರಾಜ್ಯದಲ್ಲಿ ನಡೆಯುತ್ತಿರುವ ಜಾತಿ ಸಮೀಕ್ಷೆಗೆ ಬಿಜೆಪಿ ನಾಯಕರು ಬಹಿಷ್ಕಾರದ ಕರೆ ಕೊಟ್ಟಿರುವ ಬಗ್ಗೆ ಸಿಎಂ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿ ನಾಯಕರಿಗೆ ಇದೇ ರೀತಿ ಕೇಂದ್ರ ನಾಯಕರ ಮುಂದೆ ಪ್ರಶ್ನೆ ಮಾಡುವ ಧಮ್ ಇದೆಯಾ ಎಂದಿದ್ದಾರೆ.
ಬಿಹಾರದಲ್ಲಿ ಬಿಜೆಪಿಯವರ ಮೈತ್ರಿ ಸರ್ಕಾರವೇ ಜಾತಿ ಆಧಾರಿತ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಸಿದೆ. ಇದೇ ರೀತಿ ತೆಲಂಗಾಣದಲ್ಲಿಯೂ ನಡೆದಿದೆ. ಆಗೆಲ್ಲಾ ಬಿಜೆಪಿ ನಾಯಕರು ಯಾಕೆ ಬಾಯಿ ಮುಚ್ಚಿ ಕೂತಿದ್ದರು?
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವೇ ಜಾತಿ ಗಣತಿಗೆ ಮುಂದಾಗಿದೆ. ಈಗಲಾದರೂ ಬಿಜೆಪಿಯವರು ಬಹಿರಂಗವಾಗಿ ಇದರ ವಿರುದ್ಧ ಮಾತನಾಡಲಿ ಎಂದು ಸವಾಲು ಹಾಕಿದ್ದಾರೆ.