Webdunia - Bharat's app for daily news and videos

Install App

ವಿಜಯೇಂದ್ರನಿಂದ ನಾನು ಪಾಠ ಕಲಿಯಬೇಕಾ: ಸಿದ್ದರಾಮಯ್ಯ ರೋಷಾವೇಷ

Krishnaveni K
ಮಂಗಳವಾರ, 29 ಜುಲೈ 2025 (12:27 IST)
ಬೆಂಗಳೂರು: ರೈತರ ಬಗ್ಗೆ ಕಾಳಜಿ ಬಗ್ಗೆ ತಮ್ಮ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಬಿವೈ ವಿಜಯೇಂದ್ರ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾನು ವಿಜಯೇಂದ್ರನಿಂದ ಪಾಠ ಕಲಿಯಬೇಕಾ ಎಂದು ರೋಷಾವೇಷ ತೋರಿಸಿದ್ದಾರೆ.

ರಾಜ್ಯದಲ್ಲಿ ಈಗ ರಸಗೊಬ್ಬರ ಸಾಕಷ್ಟು ಪ್ರಮಾಣದಲ್ಲಿ ಸಿಗದೇ ರೈತರು ಪ್ರತಿಭಟನೆ ಹಾದಿ ಹಿಡಿದಿದ್ದಾರೆ. ಇದರ ಬಗ್ಗೆ ವಿಜಯೇಂದ್ರ ರಾಜ್ಯ ಸರ್ಕಾರವನ್ನು ಟೀಕಿಸಿದ್ದರು. ಕಾಂಗ್ರೆಸ್ ಸರ್ಕಾರಕ್ಕೆ ರೈತರ ಬಗ್ಗೆ ಸ್ವಲ್ಪವೂ ಕಾಳಜಿಯಿಲ್ಲ. ಯಡಿಯೂರಪ್ಪ ಸರ್ಕಾರವಿದ್ದಾಗ ಬಫರ್ ಸ್ಟಾಕ್ ಗೆ ಸಾವಿರಾರು ಕೋಟಿ ರೂ. ಮೀಸಲಿಟ್ಟಿದ್ದರು. ಆದರೆ ಈ ಸರ್ಕಾರಕ್ಕೆ ರೈತರ ಮೇಲೆ ಕಾಳಜಿಯಿಲ್ಲ ಎಂದಿದ್ದರು.

ಇದಕ್ಕೆ ತಿರುಗೇಟು ನೀಡಿರುವ ಸಿದ್ದರಾಮಯ್ಯ ‘ರಾಜ್ಯಕ್ಕೆ ಕೊಡಬೇಕಾದಷ್ಟು ಗೊಬ್ಬರ ಕೊಡದೆ ಕೇಂದ್ರ ಸರ್ಕಾರ ರಾಜ್ಯದ ರೈತರ ವಿರೋಧಿಯಾಗಿದೆ. ನಾನು ಮತ್ತು ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದು ವಾರ ಕಳೆದರೂ, ಬಾಕಿ ರಸಗೊಬ್ಬರ ಬಿಡುಗಡೆಯಾಗಿಲ್ಲ. ಬಿಜೆಪಿ ಸಂಸದರು ಮತ್ತು ರಾಜ್ಯ ಪ್ರತಿನಿಧಿಸುವ ಕೇಂದ್ರ ಸಚಿವರು ಕೇಂದ್ರದ ಜೊತೆ ಮಾತನಾಡಿ ಗೊಬ್ಬರ ಕೊಡಿಸಲಿ.

ವಿಜಯೇಂದ್ರನಿಂದ ನಾವು ಪಾಠ ಕಲಿಯಬೇಕಾ? ಅವರ ಅಪ್ಪ ಬಿ.ಎಸ್‌.ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ರಸಗೊಬ್ಬರ ಕೊಡಲು ಸಾಧ್ಯವಾಗದೆ, ಇಬ್ಬರು ರೈತರನ್ನು ಗೋಲಿಬಾರ್ ಮಾಡಿ ಸಾಯಿಸಿದರು. ನಮ್ಮನ್ನು ಪ್ರಶ್ನೆ ಮಾಡುವ ಇವರಿಗೆ ನಾಚಿಕೆಯಾಗಬೇಕು’ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಜಯೇಂದ್ರನಿಂದ ನಾನು ಪಾಠ ಕಲಿಯಬೇಕಾ: ಸಿದ್ದರಾಮಯ್ಯ ರೋಷಾವೇಷ

ಅಮಾನತು ಮಾಡೋದು, ಮತ್ತೆ ರದ್ದು ಮಾಡೋದು ಎಲ್ಲಾ ನಾಟಕ: ಬಿವೈ ವಿಜಯೇಂದ್ರ

ಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Video: ಆಪರೇಷನ್ ಸಿಂಧೂರ್ ಶೌರ್ಯದ ಬಗ್ಗೆ ಹೇಳಿದ್ರೆ ವಿಪಕ್ಷಗಳು ಮೇಜು ತಟ್ಟಲ್ಲ ಯಾಕೆ: ಅನುರಾಗ್ ಠಾಕೂರ್

ಮುಂದಿನ ಸುದ್ದಿ
Show comments