Publish Date: Fri, 24 Mar 2017 (15:37 IST)
Updated Date: Fri, 24 Mar 2017 (15:40 IST)
ಉಪಚುನಾವಣಾ ಪ್ರಚಾರ ರಂಗೇರುತ್ತಿದ್ದು ಸಿಎಂ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಪರ ಪ್ರಚಾರ ನಡೆಸಿದ್ದಾರೆ.
ಅಭ್ಯರ್ಥಿ ಕಳಲೆ ಕೃಷ್ಣಮೂರ್ತಿ ಪರ ಪ್ರಚಾರ ನಡೆಸಿದ ಅವರು ತಾಲೂಕಿನ ಮೊತ್ತ, ಹುಚ್ಗಣಿ ಗ್ರಾಮಗಳಲ್ಲಿ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡುವಂತೆ ಕೋರಿದರು.
ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಗೀತಾ ಮಹಾದೇವ ಪ್ರಸಾದ್ ಪರ ಕೂಡಾ ಡಾ.ಯತೀಂದ್ರ ಮತಯಾಚನೆ ಮಾಡಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಪರ ಮೂಲಗಳು ತಿಳಿಸಿವೆ.
ಡಾ.ಯತೀಂದ್ರ ಅವರೊಂದಿಗೆ ಸಂಸದ ಧೃವನಾರಾಯಣ ಸೇರಿದಂತೆ ಇನ್ನಿತರ ಹಿರಿಯ ಮುಖಂಡರು ಉಪಸ್ಥಿತರಿದ್ದರು ಎಂದು ಕಾಂಗ್ರೆಸ್ ಪಕ್ಷದ ವಕ್ತಾರರು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.