Webdunia - Bharat's app for daily news and videos

Install App

ನಮಗೆ ಒಂದು ರೂಪಾಯಿಯನ್ನೂ ಕೊಟ್ಟಿಲ್ಲ: ಕೇಂದ್ರದ ವಿರುದ್ಧ ಸಿಎಂ ಸಿದ್ದು ವಾಗ್ದಾಳಿ

Krishnaveni K
ಬುಧವಾರ, 7 ಫೆಬ್ರವರಿ 2024 (13:08 IST)
Photo Courtesy: Twitter
ನವದೆಹಲಿ: ಕೇಂದ್ರ ಸರ್ಕಾರ ತೆರಿಗೆ ಹಂಚಿಕೆ ವಿಚಾರದಲ್ಲಿ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರನ್ನುದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪ್ರತಿಭಟನೆಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಕಾಂಗ್ರೆಸ್ ಶಾಸಕರು, ಸಂಸದರು, ಕಾರ್ಯಕರ್ತರು ಭಾಗಿಯಾಗಿದ್ದರು. ಮೊದಲು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾಷಣ ಮಾಡಿದರು. ಬಳಿಕ ಸಿಎಂ ಸಿದ್ದರಾಮಯ್ಯ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸಿಎಂ ಸಿದ್ದು ಭಾಷಣದ ಹೈಲೈಟ್
ಇದು ಯಾವುದೋ ರಾಜಕೀಯ ಪ್ರೇರಿತ ಹೋರಾಟವಲ್ಲ. ಕಳೆದ ಕೆಲವು ವರ್ಷಗಳಿಂದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತೆರಿಗೆ ಹಂಚಿಕೆ ವಿಚಾರದಲ್ಲಿ ನಮಗೆ ಅನ್ಯಾಯ ಮಾಡುತ್ತಿದೆ. ನಮಗೆ ಆಗುತ್ತಿರುವ ಅನ್ಯಾಯವನ್ನು ಪ್ರಶ್ನಿಸಲು ಈ ಹೋರಾಟ ಮಾಡುತ್ತಿದ್ದೇವೆ.

ತೆರಿಗೆ ಹಂಚಿಕೆ ವಿಚಾರದಲ್ಲಿ ಕರ್ನಾಟಕ ದೇಶಕ್ಕೆ ನಂ.2 ಸ್ಥಾನದಲ್ಲಿದೆ. ಹಾಗಿದ್ದರೂ ನಮಗೆ ಬರಬೇಕಾದ ಹಣ ಇದುವರೆಗೆ ಬಂದಿಲ್ಲ.  ನಮ್ಮ ಪಾಲಿನ ತೆರಿಗೆ ಹಣವನ್ನು ಕೊಡದೇ ನಮಗೆ ವಂಚಿಸಿದೆ. ಇದು ಕರ್ನಾಟಕದ ಜನರ ಹಣ. ಅವರ ಬೆವರಿನ ಹಣ. ಅದನ್ನು ಕೇಳುವ ಹಕ್ಕು ನಮಗಿದೆ. ಕರ್ನಾಟಕಕ್ಕೆ ಕೇಂದ್ರ ಇದುವರೆಗೆ 1.87 ಲಕ್ಷ ಕೋಟಿ ರೂ. ಹಣ ಕೊಡದೇ ವಂಚಿಸಿದೆ.

ಯಾವುದನ್ನೂ ನಾವು ಆಧಾರವಿಲ್ಲದೇ ಹೇಳುತ್ತಿಲ್ಲ. ಎಲ್ಲದಕ್ಕೂ ಸರಿಯಾದ ಆಧಾರವಿಟ್ಟುಕೊಂಡೇ ಮಾತನಾಡುತ್ತಿದ್ದೇವೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನಮ್ಮದೇ ರಾಜ್ಯದಿಂದ ಆಯ್ಕೆಯಾದವರು. ಆದರೂ ಅವರು ನಮ್ಮ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ.

100 ರೂ. ತೆರಿಗೆ ಸಂಪಾದಿಸಿ ಕೊಟ್ಟರೆ ನಮಗೆ ಕೇವಲ 12 ರೂ. ಕೊಡ್ತಾರೆ. ನಮ್ಮ ರಾಜ್ಯದಿಂದ ಆರಿಸಿ ಹೋದ ಬಿಜೆಪಿ ಸಂಸದರು ಮೋದಿ ಹೇಳಿದ್ದಕ್ಕೆಲ್ಲಾ ತಲೆ ಅಲ್ಲಾಡಿಸಿ ಬರ್ತಾರೆ.  ಬಿಜೆಪಿ ಸಂಸದರು ಕೋಲೆ ಬಸವನ ರೀತಿ. ಉತ್ತರ ಭಾರತದ ಅನೇಕ ರಾಜ್ಯಗಳು ಜನ ಸಂಖ್ಯೆ ನಿಯಂತ್ರಿಸಲಿಲ್ಲ. ನಮ್ಮ ರಾಜ್ಯಗಳೇ ಜನ ಸಂಖ್ಯೆ ನಿಯಂತ್ರಿಸಿದ್ದು.

ಬಡ ರಾಜ್ಯಗಳಿಗೆ ಹಣ ಕೊಡಬೇಡಿ ಎಂದು ನಾವು ಹೇಳಿಲ್ಲ. ಹಿಂದುಳಿದ ರಾಜ್ಯಗಳಿಗೆ ಅನುದಾನ ಕೊಡಲಿ. ಆದರೆ ಚಿನ್ನದ ಮೊಟ್ಟೆಯಿಡುವ ಕೋಳಿಯನ್ನೇ ಕುಯ್ಯುವ ಪ್ರಯತ್ನ ಮಾಡಬೇಡಿ ಎನ್ನುತ್ತಿದ್ದೇವೆ.ಹೆಚ್ಚು ತೆರಿಗೆ ನೀಡುವ ರಾಜ್ಯಗಳಿಗೆ ನ್ಯಾಯಯುತವಾಗಿ ಹಂಚಿಕೆ ಮಾಡಲಿ ಎಂದು ಕೇಳುತ್ತಿದ್ದೇವೆ ಅಷ್ಟೇ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಡಿಗೇಶಿ ಬಳಿ 19 ನವಿಲುಗಳ ಸಾವು: ಎಚ್ಚೆತ್ತ ಸರ್ಕಾರದಿಂದ ದಿಟ್ಟ ನಿರ್ಧಾರ

ಟೆಸ್ಟ್‌ನಲ್ಲಿ ತುಂಬಾ ಮಿಸ್ ಮಾಡಿಕೊಂಡಿದ್ದೇನೆ, ವಿರಾಟ್‌ ದೇಶಕ್ಕೆ ನಿಮ್ಮ ಅವಶ್ಯಕತೆಯಿದೆ: ಶಶಿ ತರೂರ್ ಪೋಸ್ಟ್‌

ನೇಹಾ ಹಿರೇಮಠ ಹತ್ಯೆ ಸಂಬಂಧ: ಆರೋಪಿಗೆ ಫಯಾಜ್ ಬಿಗ್ ಶಾಕ್

ಧರ್ಮಸ್ಥಳ ಅಸ್ಥಿ ಉತ್ಖನನ: ದೂರುದಾರ ಗುರುತಿಸಿದ 11ನೇ ಪಾಯಿಂಟ್‌ನಲ್ಲಿ ಬಿಗ್‌ಟ್ವಿಸ್ಟ್‌

ಮೈಸೂರಿನತ್ತ ಹೆಜ್ಜೆ ಹಾಕಿದ ಅಭಿಮನ್ಯ ನೇತೃತ್ವದ 9 ಗಜಪಡೆ

ಮುಂದಿನ ಸುದ್ದಿ
Show comments