Publish Date: Tue, 28 Oct 2025 (09:27 IST)
Updated Date: Tue, 28 Oct 2025 (09:30 IST)
ಬೆಂಗಳೂರು: ಸಿಎಂ ಸ್ಥಾನ ಬಿಟ್ಟುಕೊಡುವ ಬಗ್ಗೆ ಇದ್ದಕ್ಕಿದ್ದಂತೆ ಸಿದ್ದರಾಮಯ್ಯ ವಲಸೆ ಬದಲಿಸದ್ದು ಎಲ್ಲರಿಗೂ ಶಾಕ್ ಕೊಟ್ಟಿದ್ದಾರೆ.
ರಾಜ್ಯದಲ್ಲಿ ಈಗ ಸಿಎಂ ಬದಲಾವಣೆ ವಿಚಾರ ಈಗ ಭಾರೀ ಸದ್ದು ಮಾಡುತ್ತಿದೆ. ಮೊನ್ನೆಯಿಂದ ಪತ್ರಕರ್ತರು ಪ್ರಶ್ನಿಸಿದಾಗ, ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಐದು ವರ್ಷವೂ ನಾನೇ ಸಿಎಂ. ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಖಡಕ್ ಆಗಿ ಸಿದ್ದರಾಮಯ್ಯ ಹೇಳುತ್ತಿದ್ದರು.
ಆದರೆ ಈಗ ದಿಡೀರ್ ಸಿಎಂ ವರಸೆ ಬದಲಾವಣೆಯಾಗಿದೆ. ಡಿಕೆ ಶಿವಕುಮಾರ್ ದೆಹಲಿಯಲ್ಲಿ ಹೈಕಮಾಂಡ್ ಗೆ ಭೇಟಿಗೆ ಪ್ರಯತ್ನಿಸುತ್ತಿದ್ದರೆ ಇತ್ತ ಸಿದ್ದರಾಮಯ್ಯ, ಹೈಕಮಾಂಡ್ ತೀರ್ಮಾನ ಮಾಡಿದರೆ ಸಿಎಂ ಸ್ಥಾನ ಬಿಟ್ಟುಕೊಡುವುದಾಗಿ ಹೇಳಿದ್ದಾರೆ.
ಹೈಕಮಾಂಡ್ ತೀರ್ಮಾನಿಸಿದರೆ ಐದು ವರ್ಷವೂ ನಾನೇ ಸಿಎಂ ಎಂದಿದ್ದಾರೆ. ಆ ಮೂಲಕ ಒಂದು ವೇಳೆ ಹೈಕಮಾಂಡ್ ಬದಲಾವಣೆಗೆ ಸೂಚಿಸಿದರೆ ಅದಕ್ಕೂ ಸಿದ್ಧರಿರುವುದಾಗಿ ಸಂದೇಶ ರವಾನಿಸಿದ್ದಾರೆ. ಸಿಎಂ ಸಿದ್ದು ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಉಂಟು ಮಾಡಿದೆ.